ದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind) ಅವರು ಸೋಮವಾರ ಅನಿಲ್ ಬೈಜಾಲ್ (Anil Baijal) ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬೈಜಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ವಿನಯ್ ಕುಮಾರ್ ಸಕ್ಸೇನಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೊರಡಿಸಿದ ಹೇಳಿಕೆ ತಿಳಿಸಿದೆ. ಐದು ವರ್ಷ ನಾಲ್ಕು ತಿಂಗಳ ಕಾಲ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಸೇವೆ ಸಲ್ಲಿಸಿದ ಬೈಜಾಲ್ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು. ವಿನಯ್ ಕುಮಾರ್ ಸಕ್ಸೇನಾ ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲು ಭಾರತದ ರಾಷ್ಟ್ರಪತಿ ಸಂತೋಷಪಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಕ್ಸೇನಾ ಅವರು ಅಕ್ಟೋಬರ್ 27, 2015 ರಂದು ಖಾದಿ ಮತ್ತು ಗ್ರಾಮೋದ್ಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
Vinai Kumar Saxena to be the Lt. Governor of Delhi with effect from the date he assumes charge of his office, reads a statement of Press Secretary to the President
— ANI (@ANI) May 23, 2022
ಇದನ್ನೂ ಓದಿ
ವಿನಯ್ ಕುಮಾರ್ ಸಕ್ಸೇನಾ ಅವರ ಕಿರುಪರಿಚಯ
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 9:54 pm, Mon, 23 May 22