Haryana Election results 2024: ಹರ್ಯಾಣ ಜುಲಾನಾದಲ್ಲಿ ಕಾಂಗ್ರೆಸ್‌ನ ವಿನೇಶ್ ಫೋಗಟ್ಗೆ ಭರ್ಜರಿ ಗೆಲುವು
ನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತಾರೂಢ ಬಿಜೆಪಿ ಹರ್ಯಾಣ ವಿಧಾನಸಭೆಯಲ್ಲಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಕ್ಟೋಬರ್ 5 ರಂದು ನಡೆದ ಹರ್ಯಾಣ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು.
ದೆಹಲಿ ಅಕ್ಟೋಬರ್08: ಹರ್ಯಾಣದ ಜುಲಾನಾ (Julana) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) 6000ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತಾರೂಢ ಬಿಜೆಪಿ ಹರ್ಯಾಣ ವಿಧಾನಸಭೆಯಲ್ಲಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಕ್ಟೋಬರ್ 5 ರಂದು ನಡೆದ ಹರ್ಯಾಣ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು.
ಒಲಿಂಪಿಯನ್ ವಿನೇಶ್, ಬಿಜೆಪಿಯ ಕ್ಯಾಪ್ಟನ್ ಯೋಗೇಶ್ ಬೈರಾಗಿ, ಆಪ್ ಟಿಕೆಟ್ ನಲ್ಲಿ ಸ್ಪರ್ಧಿಸಿದ ಮಾಜಿ ವೃತ್ತಿಪರ ಕುಸ್ತಿಪಟು ಕವಿತಾ ದಲಾಲ್ ಅವರನ್ನು ಪರಾಭವಗೊಳಿಸಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ವಿನೇಶ್
VIDEO | Haryana election results 2024: “This was a people’s battle, and they’ve won and I was just a face. I am thankful to all the love and respect that I’ve received,” says Congress candidate from Julana seat, Vinesh Phogat (@Phogat_Vinesh) after winning.
On Congress trailing… pic.twitter.com/DWv4ZH7Y2E
— Press Trust of India (@PTI_News) October 8, 2024
ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ವಿನೇಶ್, ಇದು ಜನರ ಹೋರಾಟವಾಗಿತ್ತು ಅವರು ಗೆದ್ದಿದ್ದಾರೆ. ನಾನು ಕೇವಲ ಮುಖವಾಗಿದ್ದೆ. ನನಗೆ ಸಿಕ್ಕಿರುವ ಪ್ರೀತಿ ಮತ್ತು ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.ಇದು ಪ್ರತಿಯೊಬ್ಬ ಮಹಿಳೆಯರ ಹೋರಾಟವಾಗಿತ್ತು.ಇದು ಹೋರಾಟ ಹಾಗೂ ಸತ್ಯದ ಗೆಲುವು.ಈ ದೇಶದ ಜನರ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲೇ ಮುಂದುವರಿಯುವೆ ಎಂದಿದ್ದಾರೆ ಅವರು ಕಾಂಗ್ರೆಸ್ ಬಿಜೆಪಿಗಿಂತ ಹಿನ್ನಡೆಯಾಗಿರುವ ಬಗ್ಗೆ ಕೇಳಿದಾಗ “ಅಂತಿಮ ಫಲಿತಾಂಶಗಳಿಗಾಗಿ ಕಾಯೋಣ. ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತದೆ.” ಎಂದಿದ್ದಾರೆ.
ಒಲಿಂಪಿಕ್ಸ್ ಫೈನಲ್ ಪಂದ್ಯದಲ್ಲಿ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಸೆಪ್ಟೆಂಬರ್ 6 ರಂದು ಕಾಂಗ್ರೆಸ್‌ಗೆ ಸೇರಿದರು. ಕೆಲವೇ ಗಂಟೆಗಳ ನಂತರ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿತ್ತು. “ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಿದ್ದೇನೆ. ನಾವು ಎದುರಿಸಬೇಕಾಗಿ ಬಂದಿದ್ದನ್ನು ಕ್ರೀಡಾಪಟುಗಳು ಎದುರಿಸಬೇಕಾಗಿಲ್ಲ ಎಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದರು.
ಕಳೆದ ವರ್ಷ ಫೋಗಟ್ ಅವರು ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುದೀರ್ಘ ಪ್ರತಿಭಟನೆಯನ್ನು ನಡೆಸಿದರು. ರಾಜಕೀಯ ಪ್ರವೇಶದ ನಂತರ ಕಾಂಗ್ರೆಸ್‌ಗೆ ಧನ್ಯವಾದ ಅರ್ಪಿಸಿದ ಅವರು, ” ಕೆಟ್ಟ ಸಮಯದಲ್ಲಿ ಮಾತ್ರ ಅವರ ಜೊತೆ ಯಾರು ನಿಂತಿದ್ದಾರೆಂದು ಗೊತ್ತಾಗುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದಾಡಿದಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗೆ ನಿಂತು ನಮ್ಮ ನೋವು, ಕಣ್ಣೀರನ್ನು ಅರ್ಥ ಮಾಡಿತ್ತು ಎಂದಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:33 pm, Tue, 8 October 24