WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕುಸ್ತಿಪಟುಗಳು
ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಇಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಕುಸ್ತಿ ಫೆಡರೇಶನ್ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿ:ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ವೇಳೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದಾರೆ.
Vinesh Phogat and seven other wrestlers move Supreme Court seeking registration of FIR against Wrestling Federation of India (WFI) president, Brij Bhushan Singh pic.twitter.com/D7ptm2DSbf
— ANI (@ANI) April 24, 2023
ನಾವು ಯಾರನ್ನೂ ಕಣ್ಣು ಮುಚ್ಚಿ ನಂಬುವುದಿಲ್ಲ. ಕಳೆದ ಬಾರಿ ನಮ್ಮ ದಾರಿ ತಪ್ಪಿಸಲಾಗಿತ್ತು. ಈ ಬಾರಿ ಈ ಪ್ರಕರಣದಲ್ಲಿ ರಾಜಕೀಯವಿಲ್ಲ ಎಂದ ನಾವು ಭಾವಿಸುತ್ತೇವೆಎಂದು ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು ಎಂದಿದ್ದಾರೆ ಕುಸ್ತಿಪಟುಗಳು. ಜನವರಿಯಲ್ಲಿ ಪ್ರತಿಭಟನಾಕಾರರು ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರನ್ನು ಕ್ರೀಡಾಪಟುಗಳ ಪ್ರತಿಭಟನೆ ವೇದಿಕೆಯಿಂದ ಹೊರ ಹೋಗಲು ಹೇಳಿದ್ದರು.
#WATCH | Delhi: Wrestlers Vinesh Phogat and Sakshi Malik break down while interacting with the media as they protest against WFI chief Brij Bhushan Singh pic.twitter.com/OVsWDp2YuA
— ANI (@ANI) April 23, 2023
ಈ ಬಾರಿ, ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.
#WATCH |Seven girls including a minor gave a complaint at CP PS against Brijbhushan Singh regarding sexual harassment but yet to be filed.There must be POCSO case. We’ve been waiting for 2.5 months…:Wrestlers protest against then WFI chief & BJP strongman Brij Bhushan Singh pic.twitter.com/SvAvSk9hNz
— ANI (@ANI) April 23, 2023
ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ. ಆಶ್ವಾಸನೆ ನೀಡಿದ್ದರಿಂದ ನಾವು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಅದು ಸುಳ್ಳು ಆಶ್ವಾಸನೆಯಾಗಿತ್ತು ಎಂದು ಅವರು ಹೇಳಿದ್ದಾರೆ.
“ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಫುಟ್‌ಪಾತ್‌ನಲ್ಲಿಯೇ ಇಡೀ ರಾತ್ರಿ ಕಳೆದ ಫೋಗಟ್ ಹೇಳಿದ್ದಾರೆ.
ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದಿದ್ದಾರೆ ಫೋಗಟ್.
#WATCH | Delhi: “This time, all parties are welcome to join our protest whether it is BJP, Congress, AAP or any other party…..we’re not affiliated with any party…”: Bajrang Punia, Olympic medalist on wrestlers’ protest against WFI chief Brij Bhushan Singh pic.twitter.com/g2i8T0TaAS
— ANI (@ANI) April 24, 2023
ಹಲವಾರು ಕುಸ್ತಿಪಟುಗಳು ಜನವರಿ 18 ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿದ್ದರು. ಗಣ್ಯ ಕುಸ್ತಿಪಟುಗಳು ಸರ್ಕಾರದೊಂದಿಗಿನ ನಡೆಸಿದ ಮಾತುಕತೆಯಿಂದ ತೃಪ್ತರಾಗಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಕುಸ್ತಿ ಕಣಕ್ಕಿಳಿಯುವುದಿಲ್ಲ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಮೀಟೂ ಪ್ರತಿಭಟನೆ: ನಮಗೆ ಬೆಂಬಲ ನೀಡಿ ಎಂದು ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ
ಮೇ 7 ರಂದು ನಡೆಯಲಿರುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.ಸಿಂಗ್ ಸತತವಾಗಿ ಮೂರು ನಾಲ್ಕು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಸ್ಪೋರ್ಟ್ಸ್ ಕೋಡ್ ಪ್ರಕಾರ WFI ಮುಖ್ಯಸ್ಥರಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ಅವರು ಉನ್ನತ ಹುದ್ದೆಗೆ ಸ್ಪರ್ಧಿಸಲು ಅನರ್ಹರಾಗಿದ್ದಾರೆ.
ಡಬ್ಲ್ಯುಎಫ್ ಅಧ್ಯಕ್ಷರ ವಿರುದ್ಧ ದೆಹಲಿ ಪೊಲೀಸರು ಏಳು ದೂರುಗಳನ್ನು ದಾಖಲಿಸಿದ್ದಾರೆ, ಆದರೆ ಎಫ್‌ಐಆರ್ ದಾಖಲಾಗಿಲ್ಲ. ಖಚಿತವಾದ ಸಾಕ್ಷ್ಯಾಧಾರಗಳು ಬೆಳಕಿಗೆ ಬಂದ ನಂತರ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹಿರಿಯ ಪೋಲೀಸ್ ತಿಳಿಸಿದ್ದಾರೆ. ವಿಚಾರಣೆಯ ಭಾಗವಾಗಿ, ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಪರಿಶೀಲಿಸಲು ನಾವು ಕ್ರೀಡಾ ಸಚಿವಾಲಯ ರಚಿಸಿರುವ ತನಿಖಾ ಸಮಿತಿಯಿಂದ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:54 pm, Mon, 24 April 23