AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
ಮಣಿಪುರImage Credit source: ANI
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2023 | 10:21 AM

Share

ಇಂಫಾಲ್, ಆ.5: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು

ಇನ್ನು ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ