ಇಂಫಾಲ್, ಆ.5: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು
ಇನ್ನು ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ