Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 9 ಸಾವು, ಹಲವರಿಗೆ ಗಾಯ

|

Updated on: Jun 14, 2023 | 11:48 AM

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, 9 ಜನ ಸಾವನ್ನಪ್ಪಿದ್ದು, ಹಲವು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 9 ಸಾವು, ಹಲವರಿಗೆ ಗಾಯ
ಮಣಿಪುರ ಹಿಂಸಾಚಾರ
Follow us on

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, 9 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಖಮೆನ್‌ಲೋಕ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈಗಾಗಲೇ ಪೊಲೀಸ್​​ ಇಲಾಖೆ ಮಹತ್ವದ ಕಾರ್ಯಚರಣೆ ನಡೆಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಮಹಿಳೆ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಸೇನೆಯ ಮೂಲಗಳ ಪ್ರಕಾರ ಖಮೆನ್ಲೋಕ್ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಈ ಸಾವು ಸಂಭವಿಸಿದೆ.

ಗಾಯಗೊಂಡ ಹಲವರನ್ನು ಚಿಕಿತ್ಸೆಗಾಗಿ ಇಂಫಾಲಕ್ಕೆ ರವಾನಿಸಲಾಗಿದೆ. ಹಿಂಸಾಚಾರದಲ್ಲಿ ಸತ್ತವರಲ್ಲಿ ಕೆಲವರು ದೇಹದಲ್ಲಿ ಗಂಭೀರ ಗಾಯಗಳು ಹಾಗೂ ಇನ್ನೂ ಅನೇಕರಲ್ಲಿ ಗುಂಡಿನ ದಾಳಿಯಿಂದ ಆಗಿರುವ ಗಾಯಗಳು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಒಂದು ತಿಂಗಳಿನಿಂದ ಉದ್ವಿಗ್ನತೆ ಸೃಷ್ಟಿಯಾಗಿರುವ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವ ಪ್ರಯತ್ನಗಳ ಮಧ್ಯೆ ಈ ಘಟನೆ ನಡೆದಿರುವುದು ದೊಡ್ಡ ವೈಫಲ್ಯಕ್ಕೆ ಕಾರಣವಾಗಿದೆ. ನಿನ್ನೆ ರಾತ್ರಿಯ ಘಟನೆಯ ನಂತರ ಕರ್ಫ್ಯೂ ಸಡಿಲಿಕೆಯನ್ನು ಮತ್ತೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಘಟನೆ ಸಂಭವಿಸಿದ ಖಮೆನ್ಲೋಕ್, ಕಾಂಗ್ಪೊಕ್ಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಗಳಿಗೆ ಸಮೀಪಿಸಿದೆ. ಕಳೆದೆರಡು ದಿನಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಜನಾಂಗೀಯ ಘರ್ಷಣೆಯಿಂದ ಸುಮಾರು 100 ಜೀವಗಳನ್ನು ಬಲಿ ಪಡೆದಿವೆ, ಇನ್ನೂ ಅನೇಕರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Wed, 14 June 23