ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ್ದಕ್ಕೆ ಭುಗಿಲೆದ್ದ ಹಿಂಸಾಚಾರ

|

Updated on: Dec 11, 2024 | 4:27 PM

ಮಹಾರಾಷ್ಟ್ರದ ಪರ್ಭಾನಿ ರೈಲು ನಿಲ್ದಾಣದ ಹೊರಗೆ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯ ಮೇಲಿದ್ದ ಸಂವಿಧಾನದ ಪ್ರತಿಕೃತಿಗೆ ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿದ ನಂತರ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಸತತ ಎರಡನೇ ದಿನ ಘರ್ಷಣೆ ಸಂಭವಿಸಿದೆ. ಈ ಘಟನೆ ಬಗ್ಗೆ ಮಾಹಿತಿ ಹರಡಿದ ನಂತರ ಸುಮಾರು 200 ಜನರ ಗುಂಪು ಪ್ರತಿಮೆಯ ಬಳಿ ಜಮಾಯಿಸಿ, ಕಲ್ಲುಗಳನ್ನು ಎಸೆದು ಪ್ರತಿಭಟನೆ ನಡೆಸಿತು.

ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ್ದಕ್ಕೆ ಭುಗಿಲೆದ್ದ ಹಿಂಸಾಚಾರ
ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ್ದಕ್ಕೆ ಭುಗಿಲೆದ್ದ ಹಿಂಸಾಚಾರ
Follow us on

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ ಇಂದು ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಬಾಬಾಸಾಹೇಬ್ ಮತ್ತು ಸಂವಿಧಾನದ ಅವಮಾನವನ್ನು ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು. ಪ್ರತಿಮೆಗೆ ಅವಮಾನ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಹಿಂಸಾತ್ಮಕ ಪ್ರತಿಭಟನೆಯ ನಡುವೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು.


ಇದನ್ನೂ ಓದಿ: ಇವಿಎಂ-ವಿವಿಪ್ಯಾಟ್ ನಡುವೆ ವ್ಯತ್ಯಾಸ ಕಂಡುಬಂದಿಲ್ಲ; ಪ್ರತಿಪಕ್ಷಗಳ ಆರೋಪಕ್ಕೆ ಮಹಾರಾಷ್ಟ್ರದ ಚುನಾವಣಾಧಿಕಾರಿ ಸ್ಪಷ್ಟನೆ

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಮಂಗಳವಾರ ಅಪರಿಚಿತ ವ್ಯಕ್ತಿಯೊಬ್ಬರು ಪರ್ಭಾನಿ ರೈಲ್ವೆ ನಿಲ್ದಾಣದ ಹೊರಗೆ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯ ಕೈಯಲ್ಲಿದ್ದ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ್ದರು. ಇದು ಬೆಂಕಿ ಮತ್ತು ಕಲ್ಲು ತೂರಾಟವನ್ನು ಪ್ರಚೋದಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ