AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Birbhum Violence ಪಶ್ಚಿಮ ಬಂಗಾಳ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇನೆ: ನರೇಂದ್ರ ಮೋದಿ

"ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಅಂತಹ ಅಪರಾಧಿಗಳನ್ನು ಪ್ರೋತ್ಸಾಹಿಸುವವರನ್ನು ಕ್ಷಮಿಸಬಾರದು" ಎಂದು ಮೋದಿ ಹೇಳಿದ್ದಾರೆ.

Birbhum Violence ಪಶ್ಚಿಮ ಬಂಗಾಳ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇನೆ: ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 23, 2022 | 8:42 PM

Share

ದೆಹಲಿ: ಬಂಗಾಳದ ಬಿರ್ಭೂಮ್​​ನಲ್ಲಿ (Birbhum violence) ನಡೆದ ಹಿಂಸಾಚಾರದ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ವ್ಯಕ್ತಪಡಿಸಿದ್ದು “ಅಪರಾಧಿಗಳನ್ನು ಬಂಧಿಸಲು” ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ. “ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಅಂತಹ ಅಪರಾಧಿಗಳನ್ನು ಪ್ರೋತ್ಸಾಹಿಸುವವರನ್ನು ಕ್ಷಮಿಸಬಾರದು” ಎಂದು ಮೋದಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ಹತ್ಯೆಗಳ ಕುರಿತು ವರದಿಯನ್ನು ಕೇಳಿದೆ. ಅದೇ ವೇಳೆ ಇದು ತೃಣಮೂಲ ಕಾಂಗ್ರೆಸ್  (TMC) ತನ್ನ ಸ್ಥಳೀಯ ನಾಯಕರೊಬ್ಬರನ್ನು ಹತ್ಯೆ ಮಾಡಿದ ನಂತರ ಪ್ರತೀಕಾರದ ಹಿಂಸಾಚಾರ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಬಿಜೆಪಿ ಕೂಡ ಈ ಪ್ರದೇಶಕ್ಕೆ ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ. ರಾಜ್ಯದ ರಾಜಕೀಯ ಹಿಂಸಾಚಾರದ ಸುದೀರ್ಘ ಪಟ್ಟಿಯಲ್ಲಿ ಕೊಲೆಗಳು ಇತ್ತೀಚಿನ ಸೇರ್ಪಡೆ ಎಂದು ಆರೋಪಿಸಿದ ಬಂಗಾಳ ಬಿಜೆಪಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೋರಿದೆ.  ಮಂಗಳವಾರ ರಾತ್ರಿ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದೆ. ಈ ಘಟನೆಯಲ್ಲಿ ಏಳು ಜನರು ಸಜೀವ ದಹನವಾಗಿದ್ದು ಅವರಲ್ಲಿ ಇಬ್ಬರು ಮಕ್ಕಳು. ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಾನಿಗೀಡಾದ ಮನೆಯಿಂದ ಸುಟ್ಟು ಕರಕಲಾದ ಮೃತದೇಹಗಳನ್ನು ಹೊರತೆಗೆಯುತ್ತಿರುವ ದೃಶ್ಯಗಳು ಆಕ್ರೋಶಕ್ಕೆ ಕಾರಣವಾಗಿವೆ. ಕಳೆದ ವರ್ಷ ಪ್ರಚಂಡ ವಿಜಯದೊಂದಿಗೆ ಸತತ ಮೂರನೇ ಬಾರಿಗೆ ಗೆದ್ದ ಮಮತಾ ಬ್ಯಾನರ್ಜಿ ಸರ್ಕಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಟೀಕಿಸಿದ್ದಾರೆ.

ರಾಜ್ಯವು “ನ್ಯಾಯಯುತವಾದ ರೀತಿಯಲ್ಲಿ” ಕ್ರಮ ತೆಗೆದುಕೊಳ್ಳುತ್ತದೆ ಎಂದು ಬ್ಯಾನರ್ಜಿ ಹೇಳಿದ್ದಾರೆ. “ಗುಜರಾತ್ ಮತ್ತು ರಾಜಸ್ಥಾನದಲ್ಲೂ ಇಂತಹ ಘಟನೆಗಳು ನಡೆದಿವೆ” ಎಂದ ಅವರು “ರಾಮ್‌ಪುರಹತ್‌ನಲ್ಲಿ ನಡೆದ ಘಟನೆಯನ್ನು ತಾನು ಸಮರ್ಥಿಸುತ್ತಿಲ್ಲ” ಎಂದು ಹೇಳಿದರು.

“ಸರ್ಕಾರ ನಮ್ಮದು. ನಮ್ಮ ರಾಜ್ಯದ ಜನರ ಬಗ್ಗೆ ನಮಗೆ ಕಾಳಜಿ ಇದೆ. ಯಾರಿಗೂ ತೊಂದರೆಯಾಗಬಾರದು ಎಂದು ನಾವು ಬಯಸುವುದಿಲ್ಲ … ನಾನು ರಾಮ್‌ಪುರಹತ್‌ನ ಓಸಿ, ಎಸ್‌ಡಿಪಿಒ (ಅಧಿಕಾರಿ, ಉಪವಿಭಾಗದ ಪೊಲೀಸ್ ಅಧಿಕಾರಿ) ಅವರನ್ನು ತಕ್ಷಣ ವಜಾಗೊಳಿಸಿದ್ದೇನೆ. ನಾಳೆ ರಾಮ್‌ಪುರಹತ್​​ಗೆ ಹೋಗುತ್ತೇನೆ ,” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನಾನು ನಾಳೆ (ಮಾರ್ಚ್ 24) ಅಲ್ಲಿಗೆ ಹೋಗುತ್ತೇನೆ. ನಾನು ಇಂದು (ಮಾರ್ಚ್ 23) ಅಲ್ಲಿಗೆ ಹೋಗಲು ಯೋಚಿಸಿದ್ದೆ. ನಾನು ಸಿದ್ಧಳಾಗಿದ್ದೆ. ಆದರೆ ಕೆಲವು ರಾಜಕೀಯ ಪಕ್ಷಗಳು ಅಲ್ಲಿಗೆ ಹೋಗಿ ಸಿಹಿ ತಿನ್ನುತ್ತಿವೆ. ಅವರು (ವಿರೋಧ ಪಕ್ಷಗಳು) ಇರುವಾಗ ನಾನು ಅಲ್ಲಿಗೆ ಹೋಗಲು ಬಯಸುವುದಿಲ್ಲ. ನಾನು ಅವರೊಂದಿಗೆ ಅನಗತ್ಯವಾಗಿ ಜಗಳವಾಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.

ಘಟನಾ ಸ್ಥಳಕ್ಕೆ ಸಿಪಿಐ(ಎಂ) ಮುಖಂಡರ ತಂಡ ಭೇಟಿ ನೀಡಿದ್ದು ಬುಧವಾರ ಬೆಳಗ್ಗೆ ಭಾರತೀಯ ಜನತಾ ಪರಿವಾರದ ಶಾಸಕರ ತಂಡ ತೆರಳಿದೆ.

“ಅವರು ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಎಲ್​​ಪಿಜಿ ಬೆಲೆಗಳನ್ನು ಹೆಚ್ಚಿಸಿದ್ದಾರೆ. ಗಮನವನ್ನು ಬೇರೆಡೆಗೆ ತಿರುಗಿಸಲು, ಅವರು ಹಿಂಸೆಯನ್ನು ಪ್ರಚೋದಿಸುತ್ತಾರೆ. ನಂತರ ಅವರು ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡಲು ರಾಜ್ಯಪಾಲರನ್ನು ಕರೆಯುತ್ತಾರೆ ಎಂದು ಮಮತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಪಶ್ಚಿಮ ಬಂಗಾಳವು 100 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ದೂರದ ಹಳ್ಳಿಯೊಂದರಲ್ಲಿ ಘಟನೆಯೊಂದು ನಡೆದಿದೆ. ಇದನ್ನು ಖಂಡಿಸಿ ತಕ್ಷಣ ಕ್ರಮ ಕೈಗೊಂಡಿದ್ದೇವೆ. ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರದಲ್ಲಿ ಇಂತಹ ಘಟನೆಗಳು ಇದಕ್ಕಿಂತ ದೊಡ್ಡದಾಗಿ ನಡೆಯುತ್ತವೆ. ನಾವು ಸಮರ್ಥಿಸುತ್ತಿಲ್ಲ. ಅಪರಾಧ ನಡೆದಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲು ಪ್ರಯತ್ನಿಸುತ್ತಿದ್ದೇವೆ. ಕ್ರಮ ತೆಗೆದುಕೊಳ್ಳುವಾಗ ನಾವು ಯಾವುದೇ ಬಣ್ಣವನ್ನು ನೋಡುವುದಿಲ್ಲ, ”ಎಂದು ಅವರು ಹೇಳಿದರು.

ರಾಜಕೀಯ ಮುಖಂಡರೊಬ್ಬರ ಹತ್ಯೆಯಾಗಿದೆ. ಅದಕ್ಕೂ ಮೊದಲು, ಅವನ ಸಹೋದರನನ್ನು ಕೊಲ್ಲಲಾಯಿತು. ಪೊಲೀಸರು ಏಕೆ ಕ್ರಮ ಕೈಗೊಳ್ಳಲಿಲ್ಲ? ಆ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು, ಆದರೆ ಪೊಲೀಸರು ಏನೂ ಮಾಡಲಿಲ್ಲ. ಈ ಹತ್ಯಾಕಾಂಡ ನಡೆಯಲು ಪೊಲೀಸರು ಅನುಮತಿ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಪರಿಣಾಮ ಎಂಟು ಮಂದಿ ಸಜೀವ ದಹನವಾದರು. ಇದು ಊಹಿಸಲೂ ಸಾಧ್ಯವಿಲ್ಲ. ರಾಜ್ಯಪಾಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದಾಗ, ಮುಖ್ಯಮಂತ್ರಿ ಅವರ ಮೇಲೆ ದಾಳಿ ಮಾಡಿದರು ಆದರೆ (ಹತ್ಯಾಕಾಂಡದ) ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಏನನ್ನೂ ಮಾಡಲಿಲ್ಲ, ”ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಹೇಳಿದರು.

ಇದು ರಾಜಕೀಯ ಹಿಂಸಾಚಾರದ ಪ್ರಕರಣವಾಗಿ ತೋರುತ್ತಿಲ್ಲ ಎಂದು ರಾಜ್ಯ ಪೊಲೀಸರು ಮಂಗಳವಾರ ಹೇಳಿದ್ದಾರೆ.

“ಎರಡು ಗುಂಪುಗಳ ನಡುವಿನ ವೈಯಕ್ತಿಕ ದ್ವೇಷವೇ ಭಾದು ಶೇಖ್ ಹತ್ಯೆಗೆ ಕಾರಣವಾಗಿರಬಹುದು. ಇದರಲ್ಲಿ ಯಾವುದೇ ರಾಜಕೀಯ ಪೈಪೋಟಿ ಇಲ್ಲ ಎಂದು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವಿಯಾ ಹೇಳಿದ್ದಾರೆ.  ಇಂತಹ ಟೀಕೆಗಳನ್ನು ಮಾಡುವ ಬದಲು ಮುಖ್ಯಮಂತ್ರಿಗಳು ಮೊದಲು ಜವಾಬ್ದಾರಿ ವಹಿಸಿ ರಾಜೀನಾಮೆ ನೀಡಬೇಕು. ಪಂಚಾಯತ್ ನಾಯಕನನ್ನು ಹತ್ಯೆ ಮಾಡಿದ ಬಾಂಬ್ ಸ್ಫೋಟದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಾನು ಈಗಾಗಲೇ ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಹತ್ಯಾಕಾಂಡಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ತಿರುಚಲು ಮುಖ್ಯಮಂತ್ರಿ ಬಿರ್ಭೂಮ್‌ಗೆ ಬರುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿಬಿರ್ಭೂಮ್ ಹಿಂಸಾಚಾರದ ಹಿಂದೆ ವಿಪಕ್ಷಗಳ ಕೈವಾಡವಿದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ; ನಾಳೆ ಸ್ಥಳಕ್ಕೆ ಭೇಟಿ

Published On - 8:19 pm, Wed, 23 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್