ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಹಲವರಿಗೆ ಗಾಯ

ಹಲವಾರು ಸ್ಥಳಗಳಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಜತೆ ಜಗಳವಾಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಿಂಜಾಮೆಯಿ ಪೊಲೀಸ್ ಠಾಣೆಯ ಹೊರಗೆ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದವು.ಅಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಹಲವರಿಗೆ ಗಾಯ
ಮಣಿಪುರದಲ್ಲಿ ಹಿಂಸಾಚಾರ
Follow us
ರಶ್ಮಿ ಕಲ್ಲಕಟ್ಟ
|

Updated on:Sep 21, 2023 | 8:26 PM

ಗುವಾಹಟಿ ಸೆಪ್ಟೆಂಬರ್ 21: ರಾಜ್ಯ ರಾಜಧಾನಿ ಇಂಫಾಲ್ ಸೇರಿದಂತೆ ಮಣಿಪುರದ (Manipur) ಕೆಲವು ಭಾಗಗಳಲ್ಲಿ ಹಿಂಸಾಚಾರ (Violence) ಮತ್ತೊಮ್ಮೆ ಉಲ್ಬಣಗೊಂಡಿದ್ದು, ವಿವಿಧ ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷವುಂಟಾಗಿದೆ. ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದು, ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸೆಪ್ಟೆಂಬರ್ 16 ರಂದು ಭದ್ರತಾ ಪಡೆಗಳ ಸಮವಸ್ತ್ರದಲ್ಲಿ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸಿಕ್ಕಿಬಿದ್ದ ಐವರನ್ನು ಬಂಧಿಸಿದ ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ.

ಇದು ಮಣಿಪುರ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು. ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸ್ಥಳೀಯರು ಮಂಗಳವಾರದಿಂದ ಕಣಿವೆಯಲ್ಲಿ 48 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ. ಸೋಮವಾರ ಅನಧಿಕೃತ ಮುಷ್ಕರವಾಗಿತ್ತು. ಗುರುವಾರ ಮಧ್ಯಾಹ್ನ, ಮಹಿಳಾ ಪ್ರತಿಭಟನಾಕಾರರು ಬಂಧಿತರನ್ನು ಬಿಡುಗಡೆಗೆ ಒತ್ತಾಯಿಸಿ ಐದು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಪೊಲೀಸ್ ಠಾಣೆಗಳಿಗೆ ಮೆರವಣಿಗೆ ನಡೆಸಿದರು. ಇಲ್ಲದಿದ್ದಲ್ಲಿ ಅವರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

ಹಲವಾರು ಸ್ಥಳಗಳಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಜತೆ ಜಗಳವಾಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದು ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಿಂಜಾಮೆಯಿ ಪೊಲೀಸ್ ಠಾಣೆಯ ಹೊರಗೆ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದವು.ಅಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ರಾಜ್ಯ ಆಡಳಿತವು ಕರ್ಫ್ಯೂ ಸಡಿಲಿಕೆ ಆದೇಶಗಳನ್ನು ಹಿಂತೆಗೆದುಕೊಂಡಿದೆ ಮತ್ತು ದೊಡ್ಡ ಕೂಟಗಳನ್ನು ನಿಷೇಧಿಸುವ ನಿಷೇಧದ ಆದೇಶಗಳನ್ನು ಪುನಃ ವಿಧಿಸಿದೆ.

ಇದನ್ನೂ ಓದಿ: ಮಣಿಪುರ: ಮನೆಯಿಂದಲೇ ಯೋಧನ ಅಪಹರಣ, ಹತ್ಯೆ

ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದಲೂ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ, ಇದರಲ್ಲಿ 150 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Thu, 21 September 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ