AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ದಲಿತ ವಿದ್ಯಾರ್ಥಿಯ ಹತ್ಯೆ; ಬೆಂಕಿ ಹಚ್ಚಿ ಜನರಿಂದ ಭಾರೀ ಪ್ರತಿಭಟನೆ

ಬಾಲಕ ಮೃತಪಟ್ಟ ನಂತರ ಪರಾರಿಯಾಗಿರುವ ಆರೋಪಿ ಶಿಕ್ಷಕನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಮೃತನ ಕುಟುಂಬಸ್ಥರು, ಕೆಲವು ಸ್ಥಳೀಯರು ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿದರು. ಅಲ್ಲದೇ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ದಲಿತ ವಿದ್ಯಾರ್ಥಿಯ ಹತ್ಯೆ; ಬೆಂಕಿ ಹಚ್ಚಿ ಜನರಿಂದ ಭಾರೀ ಪ್ರತಿಭಟನೆ
ಬೆಂಕಿ ಹಚ್ಚಿ ಪ್ರತಿಭಟನೆ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 27, 2022 | 10:34 AM

Share

ನೊಯ್ಡಾ: ಉತ್ತರ ಪ್ರದೇಶದ ಔರಿಯಾದಲ್ಲಿ 10ನೇ ತರಗತಿಯ ದಲಿತ ವಿದ್ಯಾರ್ಥಿಯನ್ನು (Dalit Student) ಆತನ ಶಾಲೆಯ ಶಿಕ್ಷಕ ಹೊಡೆದು ಕೊಲೆ (Murder) ಮಾಡಿದ್ದರು. ಪರೀಕ್ಷೆಯಲ್ಲಿ ತಪ್ಪಾಗಿ ಉತ್ತರ ಬರೆದಿದ್ದಕ್ಕೆ ಶಿಕ್ಷಕ ತನ್ನ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ್ದ. ಈ ಘಟನೆಯನ್ನು ವಿರೋಧಿಸಿ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಶಾಲೆಯ ಹೊರಗೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.

ಬಾಲಕ ಮೃತಪಟ್ಟ ನಂತರ ಪರಾರಿಯಾಗಿರುವ ಆರೋಪಿ ಶಿಕ್ಷಕನನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಮೃತನ ಕುಟುಂಬಸ್ಥರು ಮತ್ತು ರಾಜಕೀಯ ಸಂಘಟನೆ ಭೀಮ್ ಆರ್ಮಿ ಸದಸ್ಯರು ಶವವನ್ನು ಅಂತ್ಯಸಂಸ್ಕಾರ ಮಾಡಲು ಆರಂಭದಲ್ಲಿ ನಿರಾಕರಿಸಿದ್ದರು. ಈ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತು. ಕೋಪಗೊಂಡ ಕೆಲವು ಸ್ಥಳೀಯರು ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿದರು. ಅಲ್ಲದೇ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shocking News: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತ್ವರಿತ ಕ್ರಮದ ಭರವಸೆ ನೀಡಿದ ನಂತರ ಬಾಲಕನ ಕುಟುಂಬ ಮತ್ತು ಭೀಮ್ ಆರ್ಮಿ ಸದಸ್ಯರು ಶವಸಂಸ್ಕಾರಕ್ಕಾಗಿ ನಿಖಿತ್ ಅವರ ಮೃತದೇಹವನ್ನು ಅವರ ಗ್ರಾಮಕ್ಕೆ ಕೊಂಡೊಯ್ಯಲು ಒಪ್ಪಿಕೊಂಡರು. ಶಿಕ್ಷಕನಿಗಾಗಿ ಹುಡುಕಾಟ ಮುಂದುವರಿದಿದ್ದು, ಅಶ್ವಿನ್ ಸಿಂಗ್ ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

10ನೇ ತರಗತಿ ಓದುತ್ತಿದ್ದ ನಿಖಿಲ್ ದೋಹ್ರೆ ಎಂಬ ವಿದ್ಯಾರ್ಥಿ ಸೆಪ್ಟೆಂಬರ್ 7ರಂದು ಪರೀಕ್ಷೆಯಲ್ಲಿ ತಪ್ಪು ಮಾಡಿದ್ದ. ಅದಾದ ನಂತರ ಪ್ರಶ್ನೆ ಪತ್ರಿಕೆ ನೋಡಿ ಆತನ ಸಮಾಜ ವಿಜ್ಞಾನದ ಶಿಕ್ಷಕ ಆತನನ್ನು ಕ್ಲಾಸ್​ ರೂಂನಲ್ಲೇ ಥಳಿಸಿದ್ದರು. ಬಳಿಕ ಆತನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತಾನು ಹೊಡೆದಿದ್ದರಿಂದ ಆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಶಿಕ್ಷಕನಿಗೂ ಗಾಬರಿಯಾಗಿತ್ತು. ಹೀಗಾಗಿ, ಅವರು ಕೂಡ ಆತನ ಚಿಕಿತ್ಸೆಗೆ ಹಣ ನೀಡಿ ಕಾಳಜಿ ತೋರಿಸಿದ್ದರು. ಆದರೆ, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.

ಇದನ್ನೂ ಓದಿ: ವಿವಾಹಿತರ ತ್ರೀಕೋನ ಪ್ರೇಮ ಪ್ರಕರಣ! ವಿಧವೆಯ ಹಿಂದೆ ಬಿದ್ದು ಆತ್ಮಹತ್ಯೆಗೆ ಶರಣಾದ ವಿಚ್ಚೇದಿತ!!

ಸೆಪ್ಟೆಂಬರ್ 24ರಂದು ನಿಖಿಲ್ ಅವರ ತಂದೆ ರಾಜು ದೋಹ್ರೆ ಅವರು ತನ್ನ ಮಗನ ಶಿಕ್ಷಕನ ವಿರುದ್ಧ ಅಚ್ಚಲ್ದಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಜಾತಿ ಸೂಚಿಸುವ ನಿಂದನೀಯ ಪದಗಳನ್ನು ಬಳಸಿ ತನ್ನ ಮಗನಿಗೆ ಬೈದು ಅವಮಾನ ಮಾಡಿದ್ದಾರೆ, ಮನಸಿಗೆ ಬಂದಂತೆ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?