AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕೇರಳದಲ್ಲಿ ಒಟ್ಟಿಗೇ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ- ಮಗ

ಬಿಂದು ಕಳೆದ 10 ವರ್ಷಗಳಿಂದ ಅಂಗನವಾಡಿ ಕೇಂದ್ರದಲ್ಲಿ ಪಾಠ ಮಾಡುತ್ತಿದ್ದಾರೆ. ಮನೆ ಕೆಲಸ ಮತ್ತು ಅಂಗನವಾಡಿ ಕೆಲಸವೂ ಇರುತ್ತಿದ್ದುದರಿಂದ ಬಿಂದು ಪರೀಕ್ಷೆಯ ದಿನಾಂಕಕ್ಕೆ 6 ತಿಂಗಳಿರುವಾಗ ಅಧ್ಯಯನ ಮಾಡಲು ಪ್ರಾರಂಭಿಸುತ್ತಿದ್ದರು.

Viral News: ಕೇರಳದಲ್ಲಿ ಒಟ್ಟಿಗೇ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ- ಮಗ
ಬಿಂದು- ವಿವೇಕ್Image Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Aug 10, 2022 | 12:11 PM

Share

ನವದೆಹಲಿ: ಕೇರಳದ ಮಲಪ್ಪುರಂನ (Malappuram) 42 ವರ್ಷದ ಮಹಿಳೆ ಮತ್ತು ಆಕೆಯ 24 ವರ್ಷದ ಮಗ ಸಾರ್ವಜನಿಕ ಸೇವಾ ಆಯೋಗದ (PSC) ಪರೀಕ್ಷೆಯಲ್ಲಿ ಒಟ್ಟಿಗೆ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ. “ನಾವು ಒಟ್ಟಿಗೆ ಕೋಚಿಂಗ್ ಕ್ಲಾಸ್‌ಗೆ ಹೋಗಿದ್ದೆವು. ನನ್ನ ತಾಯಿಯೇ ನನ್ನನ್ನು ಪಿಎಸ್​ಸಿ (PSC Exam) ಪರೀಕ್ಷೆ ಬರೆಯಲು ಪ್ರೇರೇಪಿಸಿದರು. ನಾವಿಬ್ಬರೂ ಒಟ್ಟಿಗೇ ಪಾಸ್ ಆಗಿರುವುದು ಬಹಳ ಖುಷಿ ತಂದಿದೆ” ಎಂದು ವಿವೇಕ್ ಹೇಳಿದ್ದಾರೆ.

ನಾವಿಬ್ಬರೂ ಪಿಎಸ್​ಸಿ ಪರೀಕ್ಷೆ ಬರೆಯಲು ನಿರ್ಧರಿಸಿದಾಗ ನನ್ನ ತಂದೆ ನಮಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿದರು. ನಮಗೆ ನಮ್ಮ ಶಿಕ್ಷಕರಿಂದ ಸಾಕಷ್ಟು ಪ್ರೇರಣೆ ಸಿಕ್ಕಿತು. ನಾವಿಬ್ಬರೂ ಒಟ್ಟಿಗೆ ಓದಿದರೂ ನಾವು ಒಟ್ಟಿಗೆ ತೇರ್ಗಡೆಯಾಗುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಈಗ ನಮಗೆ ತುಂಬಾ ಸಂತೋಷವಾಗಿದೆ ಎಂದು ವಿವೇಕ್ ಹೇಳಿದ್ದಾರೆ.

ಬಿಂದು ಅವರ ಮಗ 10ನೇ ತರಗತಿಯಲ್ಲಿದ್ದಾಗ ಆತನೊಂದಿಗೆ ತಾನೂ ಕುಳಿತು ಪುಸ್ತಕಗಳನ್ನು ಓದಲು ಆರಂಭಿಸಿದರು. ಪಬ್ಲಿಕ್ ಎಕ್ಸಾಂ ಆದ್ದರಿಂದ ಮಗನಿಗೆ ಒಬ್ಬನೇ ಓದಲು ಹೇಳಿದರೆ ಆತನಿಗೆ ಬೋರ್ ಆಗಬಹುದು ಎಂಬ ಕಾರಣಕ್ಕೆ ಆತನೊಂದಿಗೆ ಕುಳಿತು ತಾವೂ ಪುಸ್ತಕ ಓದಲಾರಂಭಿಸಿದರು. ಆದರೆ, ಇದು ಅವರನ್ನು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಪ್ರೇರೇಪಿಸಿತು. ಅದಾಗಿ 9 ವರ್ಷಗಳ ಬಳಿಕ ಇದೀಗ ಬಿಂದು ಮತ್ತು ಅವರ ಮಗ ವಿವೇಕ್ ಒಟ್ಟಿಗೆ ಸರ್ಕಾರಿ ಕೆಲಸವನ್ನು ಪಡೆಯಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: Viral News: ತನ್ನ ಡೈವೋರ್ಸ್​ ಪಾರ್ಟಿಗೆ ಬಂದಿದ್ದ ವೇಟರ್​​ನನ್ನೇ ಮದುವೆಯಾದ ಯುವತಿ; ಇವರ ಲವ್ ಸ್ಟೋರಿ ಭಾರೀ ವೈರಲ್

ಬಿಂದು ಲೋವರ್ ಡಿವಿಜನಲ್ ಕ್ಲರ್ಕ್ (LDC) ಪರೀಕ್ಷೆಯಲ್ಲಿ 38ನೇ ಶ್ರೇಣಿಯೊಂದಿಗೆ ಉತ್ತೀರ್ಣರಾಗಿದ್ದಾರೆ. ಅವರ ಮಗ 92ನೇ ಶ್ರೇಣಿಯೊಂದಿಗೆ ಕೊನೆಯ ದರ್ಜೆಯ ಸೇವಕರ (LGS) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮೂರು ಬಾರಿ ಪ್ರಯತ್ನಿಸಿದ ನಂತರ ಆತ LGS ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿಂದು 4 ಬಾರಿ ಎಲ್​ಡಿಸಿ ಪರೀಕ್ಷೆಯನ್ನು ಬರೆದಿದ್ದರು. ಇದೀಗ ಅವರು ಪಾಸ್ ಆಗಿದ್ದಾರೆ.

ಬಿಂದು ಕಳೆದ 10 ವರ್ಷಗಳಿಂದ ಅಂಗನವಾಡಿ ಕೇಂದ್ರದಲ್ಲಿ ಪಾಠ ಮಾಡುತ್ತಿದ್ದಾರೆ. ಮನೆ ಕೆಲಸ ಮತ್ತು ಅಂಗನವಾಡಿ ಕೆಲಸವೂ ಇರುತ್ತಿದ್ದುದರಿಂದ ಬಿಂದು ಪರೀಕ್ಷೆಯ ದಿನಾಂಕಕ್ಕೆ 6 ತಿಂಗಳಿರುವಾಗ ಅಧ್ಯಯನ ಮಾಡಲು ಪ್ರಾರಂಭಿಸುತ್ತಿದ್ದರು. ಪರೀಕ್ಷೆ ಬರೆದಾದ ಮೇಲೆ ಮತ್ತೆ ಅದರ ಕಡೆ ತಲೆ ಹಾಕುತ್ತಿರಲಿಲ್ಲ. ಮತ್ತೆ ಪರೀಕ್ಷೆ ಅನೌನ್ಸ್ ಆದಾಗ ಓದುತ್ತಿದ್ದರು. ಇದೇ ಈ ಹಿಂದೆ ತಾವು ಪರೀಕ್ಷೆಯಲ್ಲಿ ಫೇಲ್ ಆಗಲು ಕಾರಣವಿರಬಹುದು ಎಂದು ಬಿಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಹೊಸ ಪೆನ್ಸಿಲ್ ಕೇಳಿದರೆ ಅಮ್ಮ ಹೊಡೆಯುತ್ತಾರೆ; ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ

ಕೇರಳದಲ್ಲಿ ಸ್ಟ್ರೀಮ್-2 ಹುದ್ದೆಗಳಿಗೆ ವಯಸ್ಸಿನ ಮಿತಿ 40. ಆದರೆ ನಿರ್ದಿಷ್ಟ ವರ್ಗಗಳಿಗೆ ಕೆಲವು ವಿನಾಯಿತಿಗಳಿವೆ. ಇತರೆ ಹಿಂದುಳಿದ ವರ್ಗಗಳ ಗುಂಪಿನಲ್ಲಿ 3 ವರ್ಷಗಳವರೆಗೆ ಸಡಿಲಿಕೆ ಇರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಧವೆಯರಿಗೆ ಇದು 5 ವರ್ಷಗಳವರೆಗೆ ವಿನಾಯಿತಿ ಇರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ