Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್

Mumbai Rains: ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್
ಮುಂಬೈ ಹೈವೇಯಲ್ಲಿ ಬಿದ್ದ ಟೊಮ್ಯಾಟೋ ರಾಶಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 16, 2021 | 3:54 PM

ಮುಂಬೈ: ಮಹಾರಾಷ್ಟ್ರದ ಮುಂಬೈನ ಪೂರ್ವ ಎಕ್ಸ್​ಪ್ರೆಸ್​ ವೇ ಮುಂಬೈನ ಅತ್ಯಂತ ಟ್ರಾಫಿಕ್ ಇರುವ ರಸ್ತೆಗಳಲ್ಲೊಂದು. ಮುಂಬೈನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರಸ್ತೆ ಎಲ್ಲಿದೆ, ಚರಂಡಿ ಎಲ್ಲಿದೆ ಎಂಬುದು ಕೂಡ ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಕ್ಸ್​ಪ್ರೆಸ್​ವೇಯಲ್ಲಿ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಟ್ರಕ್​ನಲ್ಲಿದ್ದ 20 ಟನ್ ಟೊಮ್ಯಾಟೋ ರಸ್ತೆಯ ತುಂಬೆಲ್ಲ ರಾಶಿ ಬಿದ್ದಿದ್ದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಅಡ್ಡಗೋಡೆಗೆ ಗುದ್ದಿದ್ದಾನೆ. ಈ ಘಟನೆಯಲ್ಲಿ ಒಬ್ಬನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋವನ್ನು ಎಎನ್​ಐ ಶೇರ್ ಮಾಡಿಕೊಂಡಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

ಈ ವಿಡಿಯೋ ನೋಡಿದರೆ ಸ್ಪೇನ್​ನಲ್ಲಿ ನಡೆಯುವ ಟೊಮ್ಯಾಟಿನ ಫೆಸ್ಟಿವಲ್ ರೀತಿ ಕಾಣುತ್ತಿದೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಸ್ಪೇನ್​ನಲ್ಲಿ ಟೊಮ್ಯಾಟೋದಿಂದ ಹೊಡೆದುಕೊಳ್ಳುವ ಫೆಸ್ಟಿವಲ್ ಒಂದು ನಡೆಯುತ್ತದೆ. ಅದಾದ ಮೇಲೆ ರಸ್ತೆಗಳ ತುಂಬ ಇದೇ ರೀತಿ ಟೊಮ್ಯಾಟೋ ಹಣ್ಣುಗಳ ರಾಶಿ ಬಿದ್ದಿರುತ್ತದೆ.

ಮಳೆಯಿಂದ ಮುಂಬೈನಲ್ಲಿ ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್​ಹೋಲ್​ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ. ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್​ ಸಂಚಾರ ವ್ಯತ್ಯಯವಾಗಿದೆ.

ಇದನ್ನೂ ಓದಿ: Viral Video: ಅಚ್ಚರಿಯಾದರೂ ಸತ್ಯ; ವಕೀಲನ ಮೇಲೆ ದಾಳಿ ಮಾಡಿದ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ!

ಇದನ್ನೂ ಓದಿ: Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

(20 Tonnes of Tomatoes Scattered on Mumbai Highway as Tomato Laden Truck Overturns after Heavy Rain)

Published On - 3:53 pm, Fri, 16 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ