ಜೋಧ್‌ಪುರ: ರಾಜಸ್ಥಾನದ (Rajasthan Rains) ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದ ನೀರಿನಿಂದ ಜೋಧ್‌ಪುರದಲ್ಲಿ (Jodhpur) ರಸ್ತೆಯಲ್ಲಿ ನಿಂತಿದ್ದ ಕಾರುಗಳು ಕೊಚ್ಚಿಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಜೋಧ್ಪುರದ ವಿವಿಧ ಸ್ಥಳಗಳಲ್ಲಿ ಒಂದೆರಡು ಕಾರುಗಳು ರಸ್ತೆಗಳಲ್ಲಿ ತುಂಬಿ ಹರಿಯುತ್ತಿದ್ದ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಸೋಮವಾರ ರಾತ್ರಿ ಪ್ರವಾಹ ಉಂಟಾಗಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಜೋಧ್‌ಪುರ ಜಿಲ್ಲಾಧಿಕಾರಿ ನಿನ್ನೆಯಿಂದ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಮಳೆ ಸಂಬಂಧಿತ ಘಟನೆಗಳಲ್ಲಿ 4 ಮಕ್ಕಳು ಸೇರಿದಂತೆ 5 ಜನರು ಸಾವನ್ನಪ್ಪಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: Viral Video: ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್; ಶಾಕಿಂಗ್ ವಿಡಿಯೋ ವೈರಲ್
ಜೋಧ್‌ಪುರದಲ್ಲಿ ಭಾರೀ ಮಳೆಯಿಂದಾಗಿ ನಾಲ್ವರು ಮಕ್ಕಳು ಸೇರಿದಂತೆ ಐವರ ಸಾವು ಅತ್ಯಂತ ದುಃಖಕರವಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಓಂ ಬಿರ್ಲಾ ಟ್ವೀಟ್ ಮಾಡಿದ್ದಾರೆ.
#WATCH | Rajasthan: Cars washed away in Jodhpur after heavy rain triggered a flood-like situation late last night, July 25 pic.twitter.com/cfbtpZrnCv
— ANI MP/CG/Rajasthan (@ANI_MP_CG_RJ) July 25, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು (ಬುಧವಾರ) ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಪುದುಚೇರಿ, ಕಾರೈಕಲ್, ತಮಿಳುನಾಡುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಮುಂತಾದ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರಿಕೆ: ಹವಾಮಾನ ಇಲಾಖೆ
ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ. ಜುಲೈ 28ರವರೆಗೆ ಗುಜರಾತ್, ವಿದರ್ಭ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.