Viral Video: ತಮಿಳುನಾಡು ಕಾಂಗ್ರೆಸ್ ಸಭೆಯಲ್ಲಿ ಸಂಸದರ ಎದುರೇ ಕುರ್ಚಿ ಎತ್ತಿ ಕಾರ್ಯಕರ್ತರ ಕಿತ್ತಾಟ

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ಲಾಸ್ಟಿಕ್ ಕುರ್ಚಿಗಳನ್ನು ಎತ್ತಿ ಹಿಡಿದುಕೊಂಡ ಇಬ್ಬರು ಒಬ್ಬರನ್ನೊಬ್ಬರು ಅಟ್ಟಾಡಿಸಿಕೊಂಡು ಹೋಗಿ ಹೊಡೆದಾಡಿಕೊಂಡಿದ್ದಾರೆ.

Viral Video: ತಮಿಳುನಾಡು ಕಾಂಗ್ರೆಸ್ ಸಭೆಯಲ್ಲಿ ಸಂಸದರ ಎದುರೇ ಕುರ್ಚಿ ಎತ್ತಿ ಕಾರ್ಯಕರ್ತರ ಕಿತ್ತಾಟ
ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಕಿತ್ತಾಟ
Edited By:

Updated on: Sep 25, 2021 | 6:03 PM

ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಸ್ಥಳೀಯ ಚುನಾವಣಾ ತಯಾರಿ ಬಗ್ಗೆ ಕಾಂಗ್ರೆಸ್​ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಭಾಗವಹಿಸಿದ್ದರು. ಆಗ ಗಲಾಟೆ ಎದ್ದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಯನ್ನು ಎತ್ತಿಕೊಂಡು ಹೊಡೆದಾಡಿಕೊಂಡಿದ್ದಾರೆ. ಬಳಿಕ ಪೊಲೀಸರು ಬಂದು ಅಲ್ಲಿದ್ದ ಕಾರ್ಯಕರ್ತರನ್ನು ಹೊರಗೆ ಕಳುಹಿಸಿ, ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಮಗನಾಗಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾರ್ತಿ ಚಿದಂಬರಂ ಶಿವಗಂಗಾ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಗಲಾಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಭೆಯಲ್ಲಿ ಇಬ್ಬರು ಕಾರ್ಯಕರ್ತರು ಪ್ಲಾಸ್ಟಿಕ್ ಕುರ್ಚಿಗಳನ್ನು ಎತ್ತಿಕೊಂಡು ಹೊಡೆದಾಡಿಕೊಳ್ಳುತ್ತಿರುವ ವಿಡಿಯೋ ಇಲ್ಲಿದೆ.

ಪ್ಲಾಸ್ಟಿಕ್ ಕುರ್ಚಿಗಳನ್ನು ಎತ್ತಿ ಹಿಡಿದುಕೊಂಡ ಇಬ್ಬರು ಒಬ್ಬರನ್ನೊಬ್ಬರು ಅಟ್ಟಾಡಿಸಿಕೊಂಡು ಹೋಗಿ ಹೊಡೆದಾಡಿಕೊಂಡಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಾಗಿರುವ ಈ ಇಬ್ಬರು ಚುನಾವಣೆ ತಯಾರಿ ಬಗ್ಗೆ ಬೇರೆ ಬೇರೆ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೇ ಗಲಾಟೆಗೆ ಕಾರಣ ಎನ್ನಲಾಗುತ್ತಿದೆ. ಕೊನೆಗೆ ಪೊಲೀಸರು ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿ, ಎಲ್ಲರನ್ನೂ ಹೊರಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Viral Video: ಬಾಂಗ್ರಾ ನೃತ್ಯಕ್ಕೆ ಸಖತ್ತಾಗಿ ಹೆಜ್ಜೆ ಹಾಕಿದ ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್; ವಿಡಿಯೋ ವೈರಲ್

Shocking Video: ಸುಂಟರಗಾಳಿ ರಭಸಕ್ಕೆ ಸಿಲುಕಿ ಪಲ್ಟಿ ಹೊಡೆದ ಟ್ರಕ್; ಶಾಕಿಂಗ್ ವಿಡಿಯೋ ಇಲ್ಲಿದೆ

(Viral Video Chairs Thrown At Congress Meeting Over Local Body Election In Tamil Nadu Karti Chidambaram)