ಪೊಲೀಸ್ ಕಾನ್​ಸ್ಟೆಬಲ್​ ಮೇಲೆ ಹಲ್ಲೆ ನಡೆಸಿ, ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಗುಜರಾತ್​ನ ಆಪ್ ನಾಯಕ; ವಿಡಿಯೋ ವೈರಲ್

ಕೆಲವು ಬಿಸಿಬಿಸಿ ಚರ್ಚೆ ನಡೆದ ಬಳಿಕ ಆಪ್ ನಾಯಕ ಯುವರಾಜ್ ಸಿನ್ಹ ಜಡೇಜಾ ಕೆಲವು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದಿದ್ದರಿಂದ ಅವರು ಕಾರಿನ ಕಡೆಗೆ ಓಡಿಹೋಗಿ, ಬಾನೆಟ್ ಮೇಲೆ ಎಳೆದೊಯ್ದರು.

ಪೊಲೀಸ್ ಕಾನ್​ಸ್ಟೆಬಲ್​ ಮೇಲೆ ಹಲ್ಲೆ ನಡೆಸಿ, ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಗುಜರಾತ್​ನ ಆಪ್ ನಾಯಕ; ವಿಡಿಯೋ ವೈರಲ್
ಕಾರಿನ ಬಾನೆಟ್ ಮೇಲೆ ಬಿದ್ದ ಕಾನ್​ಸ್ಟೆಬಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 09, 2022 | 6:40 PM

ನವದೆಹಲಿ: ಗುಜರಾತ್ ರಾಜ್ಯದ ಆಪ್ (ಆಮ್ ಆದ್ಮಿ ಪಕ್ಷ) ಯುವ ಘಟಕದ ನಾಯಕ ಯುವರಾಜ್‌ ಸಿನ್ಹ ಜಡೇಜಾ ಅವರು ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕಾನ್​ಸ್ಟೆಬಲ್‌ನನ್ನು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಆಘಾತಕಾರಿ ಘಟನೆ (Shocking News) ನಡೆದಿದೆ. ಈ ಹಿನ್ನೆಲೆಯಲ್ಲಿ ಯುವರಾಜ್‌ ಸಿನ್ಹ ಜಡೇಜಾ ಅವರನ್ನು ಗಾಂಧಿನಗರದ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಹೀಗಾಗಿ, ಐಪಿಸಿಯ ಸೆಕ್ಷನ್ 307ರ ಅಡಿಯಲ್ಲಿ “ಕೊಲೆ ಯತ್ನ” ಪ್ರಕರಣವನ್ನು ದಾಖಲಿಸಲಾಗಿದೆ.

ಕೆಲವು ಬಿಸಿಬಿಸಿ ಚರ್ಚೆ ನಡೆದ ಬಳಿಕ ಆಪ್ ನಾಯಕ ಯುವರಾಜ್ ಸಿನ್ಹ ಜಡೇಜಾ ಕೆಲವು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಚ್ಚಿನ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ ನಂತರ ಅವರು ಕಾರಿನ ಕಡೆಗೆ ಓಡಿಹೋದರು. ನಂತರ ಅವರು ತಮ್ಮ ಕಾರಿನಲ್ಲಿ ಕುಳಿತು ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದರು. ಕಾನ್​ಸ್ಟೆಬಲ್ ಅವರಿಗೆ ಸೂಚಿಸಿದಾಗ ಅವರು ತಮ್ಮ ಕಾರನ್ನು ನಿಲ್ಲಿಸಲಿಲ್ಲ. ಬದಲಾಗಿ ಕಾನ್​​ಸ್ಟೆಬಲ್ ಅನ್ನು ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ವೇಗವಾಗಿ ಬಂದ ಕಾರಿನಿಂದ ತನ್ನನ್ನು ರಕ್ಷಿಸಿಕೊಳ್ಳಲು ಕಾನ್‌ಸ್ಟೆಬಲ್ ಲಕ್ಷ್ಮಣ ವಾಸವ ಬಾನೆಟ್ ಮೇಲೆ ಹಾರಿದ್ದಾನೆ. ಆಗ ಸ್ವಲ್ಪ ದೂರವನ್ನು ಕ್ರಮಿಸಿದ ನಂತರ ಜಡೇಜಾ ತನ್ನ ಕಾರನ್ನು ನಿಲ್ಲಿಸಿದ. ಅಲ್ಲೇ ಬಾನೆಟ್ ಮೇಲಿಂದ ಕಾನ್​ಸ್ಟೆಬಲ್​ನನ್ನು ಬೀಳಿಸಿ ಮುಂದೆ ಸಾಗಿದ್ದಾರೆ. “ಈ ಇಡೀ ಘಟನೆಯು ಜಡೇಜಾ ಅವರ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಘಟನೆಯಲ್ಲಿ ಕಾನ್‌ಸ್ಟೆಬಲ್ ಸಾವನ್ನಪ್ಪಿರಬಹುದು. ನಾವು ಕ್ಯಾಮೆರಾ ಮತ್ತು ಜಡೇಜಾ ಅವರ ಮೊಬೈಲ್ ಫೋನ್‌ಗಳನ್ನು ಫೋರೆನ್ಸಿಕ್ ವಿಶ್ಲೇಷಣೆಗಾಗಿ ಕಳುಹಿಸಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪೊಲೀಸರು ಆತನನ್ನು ಕಸ್ಟಡಿಗೆ ಕೋರದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದ ಅಡಿಯಲ್ಲಿ ಜೈಲಿಗೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ರಾಣಾ ಹೇಳಿದ್ದಾರೆ.

ಇದನ್ನೂ ಓದಿ: Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!

Murder: ಹುಡುಗರ ಜೊತೆ ಸುತ್ತಾಡಿದ್ದಕ್ಕೆ ಬೈದ ಅಮ್ಮನನ್ನೇ ಕೊಂದ 17 ವರ್ಷದ ಮಗಳು!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್