AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದ ಯುವಕ; ಮೊಬೈಲ್​ನಲ್ಲಿ ಸೆರೆಯಾಯ್ತು ಶಾಕಿಂಗ್ ವಿಡಿಯೋ

ನವರಾತ್ರಿ ಪ್ರಯುಕ್ತ ಈ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಇಡೀ ಘಟನೆಯನ್ನು ಆತನ ಸ್ನೇಹಿತ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Viral Video: ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದ ಯುವಕ; ಮೊಬೈಲ್​ನಲ್ಲಿ ಸೆರೆಯಾಯ್ತು ಶಾಕಿಂಗ್ ವಿಡಿಯೋ
ಗುಜರಾತ್​​ನಲ್ಲಿ ನೃತ್ಯ ಮಾಡುವಾಗ ಕುಸಿದುಬಿದ್ದ ಯುವಕ
TV9 Web
| Edited By: |

Updated on: Oct 03, 2022 | 11:12 AM

Share

ಅಹಮದಾಬಾದ್: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ನವರಾತ್ರಿ ಪ್ರಯುಕ್ತ ವೇದಿಕೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ 21 ವರ್ಷದ ವೀರೇಂದ್ರ ಎಂಬ ವ್ಯಕ್ತಿಯೊಬ್ಬರು ನೃತ್ಯ ಮಾಡುವಾಗಲೇ ಹೃದಯಾಘಾತದಿಂದ (Heart Attack) ಕುಸಿದು ಬಿದ್ದಿದ್ದಾರೆ. ಗರ್ಬಾ ನೃತ್ಯ (Garba Dance) ಮಾಡುವಾಗ ಆನಂದ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಾರಾಪುರದ ಶಿವಶಕ್ತಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರೇಂದ್ರ ಸಿಂಗ್ ರಮೇಶ್ ಭಾಯಿ ರಜಪೂತ್ ಅವರು ಗರ್ಬಾ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಈ ಇಡೀ ಘಟನೆಯನ್ನು ಆತನ ಸ್ನೇಹಿತ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನವರಾತ್ರಿ ಪ್ರಯುಕ್ತ ಈ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ಕುಣಿಯುತ್ತಲೇ ಸಿಂಕ್​ಹೋಲ್​ನಲ್ಲಿ ಬೀಳುವ ಈ 7 ಯುವತಿಯರ ವಿಡಿಯೋ ವೈರಲ್

ಹೃದಯಾಘಾತದಿಂದ ಕುಸಿದುಬಿದ್ದ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವೀರೇಂದ್ರ ಸಿಂಗ್ ಮೃತಪಟ್ಟಿದ್ದಾರೆ. ವೈದ್ಯರ ಪ್ರಕಾರ, ಅವರಿಗೆ ಹಠಾತ್ತಾಗಿ ಹೃದಯಾಘಾತ ಉಂಟಾಗಿದ್ದು, ಇದೇ ಕಾರಣದಿಂದ ಅವರು ನಿಧನರಾಗಿದ್ದಾರೆ. ವೀರೇಂದ್ರ ಅವರ ತಂದೆ ಗುಜರಾತ್‌ನ ಮೊರಾಜ್ ಗ್ರಾಮದ ಶಾಲೆಯೊಂದರಲ್ಲಿ ಪ್ರಾಂಶುಪಾಲರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ