AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಹೃದಯಾಘಾತ, ಹೋಟೆಲ್ ಮಾಲೀಕ ಸಾವು

​ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತ(Heart Attack)ದಿಂದ ಮೃತಪಟ್ಟಿರುವ ಘಟನೆ ಇಂದೋರ್​ನಲ್ಲಿ  ನಡೆದಿದೆ.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಹೃದಯಾಘಾತ, ಹೋಟೆಲ್ ಮಾಲೀಕ ಸಾವು
ಹೃದಯಾಘಾತದ ದೃಶ್ಯ
TV9 Web
| Edited By: |

Updated on:Jan 06, 2023 | 12:29 PM

Share

​ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತ(Heart Attack)ದಿಂದ ಮೃತಪಟ್ಟಿರುವ ಘಟನೆ ಇಂದೋರ್​ನಲ್ಲಿ  ನಡೆದಿದೆ. ಹೋಟೆಲ್ ಮಾಲೀಕರಾದ ಪ್ರದೀಪ್ ರಘುವಂಶಿ ಮೃತರು. ಜಿಮ್​ನಲ್ಲಿ ಕಸರತ್ತು ಮಾಡುತ್ತಿರುವ ವೇಳೆ ಏಕಾಏಕಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಘುವಂಶಿಗೆ ಒಬ್ಬ ಮಗ ಹಾಗೂ ಮಗಳು ಇದ್ದಾರೆ.

ಜಿಮ್​ನಲ್ಲಿ ವರ್ಕ್​ಔಟ್ ಮಾಡುವ ಮೊದಲು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು, ಅದರಲ್ಲೂ ವಯಸ್ಸಾಗಿರುವವರು ಖಂಡಿತವಾಗಿಯೂ ತಪಾಸಣೆಗೆ ಒಳಗಾಗಬೇಕು ಇಂದಿನ ದಿನಗಳಲ್ಲಿ ಎಲ್ಲರೂ ಜಿಮ್​ಗೆ ಹೋಗಲು ಆರಂಭಿಸಿದ್ದಾರೆ.

ಆದರೆ ವೈದ್ಯರ ಸಲಹೆ ಇಲ್ಲದೆ ಯಾವುದೇ ಪ್ರೋಟೀನ್ ತೆಗೆದುಕೊಳ್ಳಬಾರದು ಎಂದು ವೈದ್ಯರು ತಿಳಿಸಿದ್ದಾರೆ. ಜಿಮ್​ಗೆ ಹೋಗುವ ಮೊದಲು ಅವರ ಸಾಮರ್ಥ್ಯವನ್ನು ಪರೀಕ್ಷಿಸಬೇಕು, ಬೇರೆಯವರ ಮಾತು ಕೇಳಿ ಹೋಗುತ್ತಾರೆ, ಇದರಿಂದ ಅವಘಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ.

ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಆಗಿದ್ದು, ಅವರು ಪ್ರತಿದಿನ ಜಿಮ್​ಗೆ ಬರುತ್ತಿದ್ದರು. ಅವರು ಇದ್ದಕ್ಕಿಂದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದುಹೋಯಿತು ಎಂದು ತರಬೇತುದಾರರು ಹೇಳಿದ್ದಾರೆ.

ಮತ್ತಷ್ಟು ಓದಿ: Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಆಪ್ತ ಸ್ನೇಹಿತರ ಪ್ರಕಾರ, ಅವರ ಮಗ ಕೆಲವು ದಿನಗಳ ನಂತರ ಮದುವೆಯಾಗುವವರಿದ್ದರು.  ರಘುವಂಶಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರ ಆಪ್ತರಲ್ಲಿ ಒಬ್ಬರು.

ಸ್ಕೀಮ್ ನಂ.78ರ ಗೋಲ್ಡ್ ಜಿಮ್ ನಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ವೃಂದಾವನ ಮಾಲೀಕ ಪ್ರದೀಪ್ ರಘುವಂಶಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 55 ವರ್ಷದ ಪ್ರದೀಪ್ ಟ್ರೆಡ್‌ಮಿಲ್‌ನಲ್ಲಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ.

ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರಾಗಿದ್ದ ಪುನೀತ್ ರಾಜ್​ಕುಮಾರ್ ಕೂಡ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Fri, 6 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ