ರಸ್ತೆಯಲ್ಲಿ ತುಂಬಿದ್ದ ಪ್ರವಾಹದ ನೀರಿನಲ್ಲಿ ಬೈಕ್ ಜೊತೆ ಕೊಚ್ಚಿಹೋದ ಹೈದರಾಬಾದ್ ಯುವಕ

| Updated By: ಸುಷ್ಮಾ ಚಕ್ರೆ

Updated on: Oct 13, 2022 | 8:44 AM

Hyderabad Rain: ಹೈದರಾಬಾದ್​​ನಲ್ಲಿ ಭಾರೀ ಮಳೆಯಿಂದಾಗಿ ಅಂಗಡಿಗಳು ಕೂಡ ಮುಚ್ಚಲ್ಪಟ್ಟಿವೆ. ಅಧಿಕಾರಿಗಳು ಆ ಭಾಗದ ಜನರಿಗೆ ಮನೆಯೊಳಗೆ ಇರುವಂತೆ ಮನವಿ ಮಾಡಿದ್ದಾರೆ.

ರಸ್ತೆಯಲ್ಲಿ ತುಂಬಿದ್ದ ಪ್ರವಾಹದ ನೀರಿನಲ್ಲಿ ಬೈಕ್ ಜೊತೆ ಕೊಚ್ಚಿಹೋದ ಹೈದರಾಬಾದ್ ಯುವಕ
ಮಳೆ
Follow us on

ಹೈದರಾಬಾದ್: ಭಾರೀ ಮಳೆಯಿಂದಾಗಿ ಹೈದರಾಬಾದ್‌ನ (Hyderabad Rain) ಹಲವು ಭಾಗಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ತುಂಬಿ ಜನರು ಸಂಚರಿಸಲು ಪರದಾಡುವಂತಾಗಿತ್ತು. ರಸ್ತೆಯಲ್ಲಿ ಹರಿಯುತ್ತಿದ್ದ ಪ್ರವಾಹದ (Flood) ನೀರಿನಲ್ಲಿ ಒಬ್ಬ ವ್ಯಕ್ತಿ ತನ್ನ ಬೈಕ್​ನೊಂದಿಗೆ ಕೊಚ್ಚಿಹೋಗಿದ್ದಾನೆ. ಇದರ ವಿಡಿಯೋ (Viral Video) ಸಿಸಿಟಿವಿಯಲ್ಲಿ ಸೆರೆಯಾಗಿದೆ.

ANI ಟ್ವೀಟ್ ಮಾಡಿದ ಈ ವಿಡಿಯೋದಲ್ಲಿ ಪ್ರವಾಹದ ನೀರು ತುಂಬಿದ ರಸ್ತೆಯನ್ನು ನೋಡಬಹುದು. ಈ ನೀರಿನಲ್ಲಿ ಮಳೆನೀರು ಮತ್ತು ಭಾರೀ ಪ್ರವಾಹದ ನೀರಿನಲ್ಲಿ ಬೈಕ್​ಗಳು ತೇಲಿಕೊಂಡು ಹೋಗುತ್ತಿರುವುದನ್ನು ನೋಡಬಹುದು. ಅದರಲ್ಲಿ ಓರ್ವ ವ್ಯಕ್ತಿ ತನ್ನ ಬೈಕ್​ನೊಂದಿಗೆ ಕೊಚ್ಚಿಹೋಗುವುದು ಕೂಡ ರೆಕಾರ್ಡ್​ ಆಗಿದೆ.

ಹೈದರಾಬಾದ್​ನ ಬೋರಬಂಡಾ ಪ್ರದೇಶದಲ್ಲಿನ ಬೀದಿಯಲ್ಲಿರುವ ಹೆಚ್ಚಿನ ಸಂಸ್ಥೆಗಳನ್ನು ಮುಚ್ಚಲಾಗಿದೆ. ಹೈದರಾಬಾದ್​​ನಲ್ಲಿ ಭಾರೀ ಮಳೆಯಿಂದಾಗಿ ಅಂಗಡಿಗಳು ಕೂಡ ಮುಚ್ಚಲ್ಪಟ್ಟಿವೆ. ಅಧಿಕಾರಿಗಳು ಆ ಭಾಗದ ಜನರಿಗೆ ಮನೆಯೊಳಗೆ ಇರುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Rain Updates: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆ

ತೆಲಂಗಾಣದ ರಾಜಧಾನಿ ಹೈದರಾಬಾದ್ ದೇಶದ ಇತರ ಭಾಗಗಳಂತೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆಗೆ ಸಾಕ್ಷಿಯಾಗುತ್ತಿದೆ. ಇದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹವಾಮಾನ ಇಲಾಖೆಯು ಹೈದರಾಬಾದ್​ಗೆ ಈ ಹಿಂದೆ ಹಳದಿ ಅಲರ್ಟ್​ ನೀಡಿತ್ತು. ಮುಂದಿನ 3 ದಿನಗಳಲ್ಲಿ ಹೈದರಾಬಾದ್​​ನಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ದೆಹಲಿ, ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಮಳೆಯು ಹಾನಿಯನ್ನುಂಟುಮಾಡಿದೆ. ದೆಹಲಿಯಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದ ಜನರಿಗೆ ಚಳಿಗಾಲದ ಮೊದಲ ಅನುಭವವಾಗಿದೆ.

ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯು 9 ಜನರನ್ನು ಬಲಿ ತೆಗೆದುಕೊಂಡಿದೆ. ಲಕ್ನೋ, ಅಲಿಗಢ, ಮೀರತ್, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್ ಸೇರಿದಂತೆ 12 ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕಳೆದ ಕೆಲವು ದಿನಗಳಿಂದ ಅಸ್ಸಾಂ ಮತ್ತು ನೆರೆಯ ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ; ಹಳದಿ ಅಲರ್ಟ್​ ಘೋಷಣೆ

ಇಂದು ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಧ್ಯಪ್ರದೇಶ, ಬಿಹಾರ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ