Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ
ಪೊಲೀಸರ ಮುಖಕ್ಕೆ ಎಂಜಲು ಉಗಿಯುತ್ತಿರುವ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜ ವಿಡಿಯೋ ವೈರಲ್ ಆಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಇಡಿ ಸಮನ್ಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ (Netta D’Souza) ಪ್ರತಿಭಟನಾ ಸ್ಥಳದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಉಗುಳಿದ್ದಾರೆ.
ಪೊಲೀಸರ ಮುಖಕ್ಕೆ ಎಂಜಲು ಉಗಿಯುತ್ತಿರುವ ನೆಟ್ಟಾ ಡಿಸೋಜ ಅವರ ವಿಡಿಯೋ ವೈರಲ್ ಆಗಿದ್ದು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದಾಗ ನೆಟ್ಟಾ ಡಿಸೋಜ ಬಸ್ನ ಬಾಗಿಲಲ್ಲಿ ನಿಂತುಕೊಂಡು ಪೊಲೀಸರ ಮೇಲೆ ಉಗುಳುವುದು ವೀಡಿಯೊದಲ್ಲಿ ಸೆರೆಯಾಗಿದೆ. ಈ ವೇಳೆ ಹಲವಾರು ಮಹಿಳಾ ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
#WATCH | Mahila Congress President Netta D’Souza spits at police personnel during a protest with party workers in Delhi against ED for questioning Congress leader Rahul Gandhi in the National Herald case. pic.twitter.com/cPBIntJq1p
— ANI (@ANI) June 21, 2022
ಈ ಘಟನೆ ನಡೆದ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಮತ್ತು ಅವರ ಮೇಲೆ ಉಗುಳಿದ್ದಕ್ಕಾಗಿ ಡಿಸೋಜಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. “ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಾಗ, ಪ್ರತಿಭಟನಾಕಾರರಲ್ಲಿ ಒಬ್ಬರಾದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಅಡ್ಡಿಪಡಿಸಿದರು. ಪೊಲೀಸರ ಮೇಲೆ ಹಲ್ಲೆಯನ್ನೂ ಮಾಡಿ, ಅವರ ಮೇಲೆ ಉಗುಳಿದರು. ಇದಕ್ಕಾಗಿ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯತ್ತ ದೌಡಾಯಿಸಿದ ಕಾಂಗ್ರೆಸ್ ನಾಯಕರು; ರಾಹುಲ್ ಗಾಂಧಿ ನಿರಂತರ ಇಡಿ ವಿಚಾರಣೆ, ಅಗ್ನಿಪಥ್ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ
ಗುವಾಹಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ವೇಳೆ ಸಹಾಯಕ ಪೊಲೀಸ್ ಆಯುಕ್ತರ ಮೇಲೆ ಹಲ್ಲೆ ನಡೆಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸುವಾಗ ಅವರು ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದು ಗಲಾಟೆ ಮಾಡಿದ್ದರು. ಇದರ ವಿಡಿಯೋ ಕೂಡ ವೈರಲ್ ಆಗಿತ್ತು.
Shameful & Disgusting
After beating up cops in Assam, holding their collar on Hyderabad now Mahila Congress President Netta Dsouza spits at cops & women security personnel merely because Rahul is being questioned by ED for corruption
Will Sonia,Priyanka & Rahul act on her? https://t.co/IP1gKibMR9 pic.twitter.com/F2pSSGx1jw
— Shehzad Jai Hind (@Shehzad_Ind) June 21, 2022
ಇದೀಗ ನೆಟ್ಟಾ ಡಿಸೋಜ ಪೊಲೀಸರ ಮುಖಕ್ಕೆ ಉಗಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕಾಪ್ರಹಾರ ನಡೆಸಿದೆ. “ಅಸ್ಸಾಂನಲ್ಲಿ ಪೊಲೀಸರನ್ನು ಥಳಿಸಿದ ನಂತರ, ಹೈದರಾಬಾದ್‌ನಲ್ಲಿ ಪೊಲೀಸರ ಕಾಲರ್ ಹಿಡಿದುಕೊಂಡು ಗಲಾಟೆ ಮಾಡಿದ್ದ ಕಾಂಗ್ರೆಸ್ ನಾಯಕರು ಇದೀಗ ಪೊಲೀಸರ ಮುಖಕ್ಕೆ ಉಗುಳಿದ್ದಾರೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರು ಮತ್ತು ಮಹಿಳಾ ಭದ್ರತೆಯ ಮೇಲೆ ಉಗುಳಿದ್ದಾರೆ. ಇದು ತೀವ್ರ ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ನವರಿಗೆ ಮರ್ಯಾದೆಯೇ ಇಲ್ಲ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರ ಶೆಹಜಾದ್ ಪೊನ್ನವಲ್ಲ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:34 am, Wed, 22 June 22