ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು

ಭಾನುವಾರ ಮುಂಜಾನೆ ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು.

ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು
ದೆಹಲಿಯಲ್ಲಿ ಯುವತಿಗೆ ಅಪಘಾತ ಮಾಡಿದ ಕಾರುImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 02, 2023 | 12:34 PM

ನವದೆಹಲಿ: ಭಾನುವಾರ ನಸುಕಿನ ಜಾವ 20 ವರ್ಷದ ದೆಹಲಿಯ (Delhi) ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು 20 ಕಿ.ಮೀ ದೂರಕ್ಕೆ ಆಕೆಯನ್ನು ಎಳೆದುಕೊಂಡು ಹೋಗಿತ್ತು. ಇದರಿಂದ ಆ ಯುವತಿ ಸಾವನ್ನಪ್ಪಿದ್ದಳು. ಭಾನುವಾರ ಮುಂಜಾನೆ ಸಾವನ್ನಪ್ಪಿದ 20 ವರ್ಷದ ಯುವತಿ ಆರೋಪಿಯ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಆಕೆಯನ್ನು ರಸ್ತೆಯಲ್ಲಿ ಎಳೆದೊಯ್ಯಲಾಗಿತ್ತು. ಬಟ್ಟೆಯೆಲ್ಲ ಹರಿದುಹೋಗಿ, ಮೈಕೈ ಎಲ್ಲ ಗಾಯಗೊಂಡು ಬೆತ್ತಲಾಗಿ ರಸ್ತೆಯಲ್ಲಿ ಬಿದ್ದಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ.

ಭಾನುವಾರ ಮುಂಜಾನೆ 3.30ರ ಸುಮಾರಿಗೆ ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ, ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಕಂಠಪೂರ್ತಿ ಕುಡಿದಿದ್ದರಿಂದ ಆಕೆ ತಮ್ಮ ಕಾರಿನಡಿ ಸಿಲುಕಿಕೊಂಡಿದ್ದು ಆ ಐವರಿಗೆ ತಿಳಿದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: shocking ಹೊಸ ವರ್ಷಾಚರಣೆ ವೇಳೆ ಭೀಕರ ಅಪಘಾತ, ಯುವತಿಯನ್ನು ಎಳೆದೊಯ್ದಿ ಕಾರು: 4ಕಿ.ಮೀ ದೂರದಲ್ಲಿ ಶವ ಪತ್ತೆ

ಪ್ರತ್ಯಕ್ಷದರ್ಶಿ ದೀಪಕ್ ದಹಿಯಾ ಮಿಠಾಯಿ ಅಂಗಡಿಯನ್ನು ನಡೆಸುತ್ತಿರುವ ಲಾಡ್‌ಪುರ ಗ್ರಾಮದ ದೆಹಲಿಯ ಕಂಝವಾಲಾ ರಸ್ತೆಯಲ್ಲಿ ಮಾರುತಿ ಬಲೆನೊ ಕಾರು ಯು-ಟರ್ನ್ ಮಾಡುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ವೇಳೆ ಆ ಕಾರಿನಡಿ ಯುವತಿ ಸಿಲುಕಿರುವುದು ಕೂಡ ಕಾಣುತ್ತದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದಾರೆ. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಆರೋಪಿಗಳು ಯು-ಟರ್ನ್ ತೆಗೆದುಕೊಳ್ಳುವ ಮೂಲಕ ಸುಮಾರು 4ರಿಂದ 5 ಕಿಲೋಮೀಟರ್ ಒಂದೇ ರಸ್ತೆಯಲ್ಲಿ ಪದೇ ಪದೇ ವಾಹನ ಚಲಾಯಿಸುತ್ತಿದ್ದರು ಎಂದು ದಹಿಯಾ ಹೇಳಿದ್ದಾರೆ.

ನಾನು ಹಲವು ಬಾರಿ ಅವರನ್ನು ತಡೆಯಲು ಯತ್ನಿಸಿದರೂ ವಾಹನ ನಿಲ್ಲಿಸದೆ ಸುಮಾರು ಒಂದೂವರೆ ಗಂಟೆಗಳ ಕಾಲ ಯುವತಿಯ ಶವವನ್ನು ಸುಮಾರು 20 ಕಿ.ಮೀ ಹೊತ್ತು ಸಾಗಿಸಿದರು ಎಂದು ಪ್ರತ್ಯಕ್ಷದರ್ಶಿ ದಹಿಯಾ ಹೇಳಿದ್ದಾರೆ. ಆತ ತನ್ನ ಬೈಕ್​ನಲ್ಲಿ ಕಾರನ್ನು ಹಿಂಬಾಲಿಸಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದನು. ಸುಮಾರು ಒಂದೂವರೆ ಗಂಟೆಗಳ ನಂತರ ಆ ಯುವತಿಯ ಶವವು ಕಾಂಜ್ವಾಲಾ ರಸ್ತೆಯ ಜ್ಯೋತಿ ಗ್ರಾಮದ ಬಳಿ ಕಾರಿನಿಂದ ಹೊರಗೆ ಬಿದ್ದಿತು. ನಂತರ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ; ದೆಹಲಿ ಯುವತಿಯ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ಆ ಯುವತಿಯ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಆಕೆಯ ದೇಹವು ಕಾರಿನ ಕೆಳಗೆ ಸಿಕ್ಕಿಹಾಕಿಕೊಂಡು, ಬಹಳ ದೂರದವರೆಗೆ ಎಳೆದುಕೊಂಡು ಹೋಗಿದ್ದರಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಈ ಅಪಘಾತದ ವೇಳೆ ಕಾರಿನ ಗ್ಲಾಸ್ ಹಾಕಿಕೊಂಡಿದ್ದರು. ಅಲ್ಲದೆ, ಕಾರಿನೊಳಗೆ ಜೋರಾಗಿ ಸಂಗೀತ ಹಾಕಿಕೊಂಡಿದ್ದರು. ಆದ್ದರಿಂದ ಅವರು ತಮ್ಮ ಕಾರಿನಡಿ ಯುವತಿ ಸಿಲುಕಿರುವುದನ್ನು ಗಮನಿಸಲಿಲ್ಲ. ಆಕೆ ಸಿಲುಕಿದ್ದು ಗೊತ್ತಾಗುತ್ತಿದ್ದಂತೆ ಕಾರಿನಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Mon, 2 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್