Viral Video: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವಿಡಿಯೋ ವೈರಲ್

ಮಹಿಳಾ ಸುರಕ್ಷತೆ ಬಗ್ಗೆ ರಾತ್ರಿ ಸ್ವಾತಿ ಮಲಿವಾಲ್ ಪರಿಶೀಲನೆ ಮಾಡಲು ನಿಂತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿ ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿದ್ದ.

Viral Video: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವಿಡಿಯೋ ವೈರಲ್
ಸ್ವಾತಿ ಮಲಿವಾಲ್‌
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 20, 2023 | 12:15 PM

ನವದೆಹಲಿ: ಕುಡಿತದ ಅಮಲಿನಲ್ಲಿ ದೆಹಲಿಯ ಮಹಿಳಾ ಆಯೋಗದ (Delhi Commission for Women) ಅಧ್ಯಕ್ಷೆ ಸ್ವಾತಿ ಮಲಿವಾಲ್‌ (Swati Maliwal) ಅವರನ್ನು ಏಮ್ಸ್‌ನ ಹೊರಗಿನ ರಸ್ತೆಯಲ್ಲಿ ಸುಮಾರು 10ರಿಂದ 15 ಮೀಟರ್ ಎಳೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಹರಿದಾಡುತ್ತಿದೆ. ಸಂಗಮ್ ವಿಹಾರ್ ನಿವಾಸಿಯಾದ 47 ವರ್ಷದ ಹರೀಶ್ ಚಂದ್ರ ಎಂಬ ವ್ಯಕ್ತಿಯನ್ನು ಕಿರುಕುಳ ಮತ್ತು ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕುಡಿದಿದ್ದ ಚಾಲಕನ ಜೊತೆ ಮುಂಜಾನೆ 3 ಗಂಟೆ ಸುಮಾರಿಗೆ ಸ್ವಾತಿ ಮಲಿವಾಲ್ ಮಾತನಾಡುತ್ತಿದ್ದಾಗ ಆತ ಕಾರಿನ ಕಿಟಕಿ ತೆರೆದಿದ್ದ. ಆಗ ಸ್ವಾತಿ ಅವರ ಕೈ ಕಿಟಕಿಯಲ್ಲಿ ಸಿಲುಕಿಕೊಂಡಿತ್ತು. ತನ್ನ ಕಾರಿನಲ್ಲಿ ಕುಳಿತುಕೊಳ್ಳುವಂತೆ ಸ್ವಾತಿ ಅವರ ಜೊತೆ ಅಸಭ್ಯವಾಗಿ ವರ್ತಿಸಿದ ಆತ ಹಾಗೇ ಕಾರು ಚಲಾಯಿಸಿಕೊಂಡು ಹೋಗಿದ್ದ. ಈ ವೇಳೆ ಕೈ ಸಿಕ್ಕಿಹಾಕಿಕೊಂಡಿದ್ದರಿಂದ ಸ್ವಾತಿ ಅವರನ್ನು ಕಾರು ಎಳೆದುಕೊಂಡು ಹೋಗಿತ್ತು.

ಮಹಿಳಾ ಸುರಕ್ಷತೆ ಬಗ್ಗೆ ರಾತ್ರಿ ಸ್ವಾತಿ ಮಲಿವಾಲ್ ಪರಿಶೀಲನೆ ಮಾಡಲು ನಿಂತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿ ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿದ್ದ. ಆಗ ತನ್ನನ್ನು ಎಲ್ಲಿ ಬಿಡುತ್ತೀರಾ? ಈಗಾಗಲೇ ರಾತ್ರಿಯಾಗಿದೆ ಎಂದು ಸ್ವಾತಿ ಮಾತನಾಡುತ್ತಿದ್ದಾಗ ಆತ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಈ ಘಟನೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಆಯೋಗದ ಅಧ್ಯಕ್ಷೆಗೇ ಹೀಗಾದರೆ ಉಳಿದ ಮಹಿಳೆಯರ ಕತೆಯೇನು? ಎಂಬ ಪ್ರಶ್ನೆಯೂ ಉದ್ಭವವಾಗಿತ್ತು. ಇದೀಗ ಈ ಘಟನೆಯ ಸಿಸಿಟಿವಿ ವಿಡಿಯೋ ಎಲ್ಲ ಕಡೆ ಹರಿದಾಡುತ್ತಿದೆ. ಸ್ವಾತಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ, ಅವರನ್ನು ಎಳೆದುಕೊಂಡು ಹೋದ ಯುವಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಇದನ್ನೂ ಓದಿ: Marriage Rules: ಇಬ್ಬರು ಭಾರತದ ಪ್ರಜೆಯಾಗಿಲ್ಲದಿದ್ದರೂ ವಿವಾಹ ನೋಂದಣಿ ಮಾಡಬಹುದು: ದೆಹಲಿ ಹೈಕೋರ್ಟ್​

ಕಳೆದ ರಾತ್ರಿ, ನಾನು ದೆಹಲಿಯಲ್ಲಿ ಮಹಿಳಾ ಸುರಕ್ಷತೆಯ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೆ. ಆಗ ಕುಡಿದ ಅಮಲಿನಲ್ಲಿ ಕಾರ್ ಡ್ರೈವರ್ ನನಗೆ ಕಿರುಕುಳ ನೀಡಿದ್ದಾನೆ. ನಾನು ಅವನನ್ನು ಹಿಡಿದಾಗ ಅವನು ನನ್ನ ಕೈಯನ್ನು ಕಿಟಕಿಯಲ್ಲಿ ಸಿಲುಕಿಸಿಕೊಂಡು ನನ್ನನ್ನು ಎಳೆದುಕೊಂಡು ಹೋದನು. ಸದ್ಯ ದೇವರು ನನ್ನ ಜೀವ ಉಳಿಸಿದ. ಇಲ್ಲದಿದ್ದರೆ ಅಂಜಲಿ ಸಿಂಗ್​ಗೆ ಆದ ಸ್ಥಿತಿಯೇ ನನಗೂ ಆಗುತ್ತಿತ್ತೇನೋ. ಮಹಿಳಾ ಆಯೋಗದ ಅಧ್ಯಕ್ಷರು ದೆಹಲಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ ಉಳಿದವರ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದು ಎಂದು ಸ್ವಾತಿ ಮಲಿವಾಲ್ ಹಿಂದಿಯಲ್ಲಿ ನಡೆದ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು