AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್

ಕಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದ ಪಕ್ಷಿಯನ್ನು ಕಾಪಾಡಲು ರಸ್ತೆಯ ಮಧ್ಯೆ ಕಾರು ನಿಲ್ಲಿಸಿದ ಉದ್ಯಮಿ ಹಾಗೂ ಆತನ ಚಾಲಕನಿಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಕ್ಸಿ ಡಿಕ್ಕಿ ಹೊಡೆದಿದೆ. ಈ ಶಾಕಿಂಗ್ ವಿಡಿಯೋ ವೈರಲ್ ಆಗಿದೆ.

Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್
ರಸ್ತೆಯಲ್ಲಿ ಕಾರು ಚಲಿಸುತ್ತಿರುವ ದೃಶ್ಯImage Credit source: India Today
TV9 Web
| Edited By: |

Updated on:Jun 11, 2022 | 2:09 PM

Share

ಮುಂಬೈ: ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಹಕ್ಕಿಯನ್ನು ಕಾಪಾಡಲು ಹೋದವರೇ ದುರಂತ ಅಂತ್ಯ ಕಂಡು ಘಟನೆ ಮುಂಬೈನಲ್ಲಿ ನಡೆದಿದೆ. ಬಾಂದ್ರಾ-ವರ್ಲಿ ಸೀ ಲಿಂಕ್‌ ರಸ್ತೆಯಲ್ಲಿ (Bandra-Worli Sea Link Road) ಗಾಯಗೊಂಡ ಪಕ್ಷಿಯನ್ನು ರಕ್ಷಿಸಲು ಕಾರಿನಿಂದ ಇಳಿದ 43 ವರ್ಷದ ಉದ್ಯಮಿ ಮತ್ತು ಅವರ ಚಾಲಕನಿಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಕ್ಸಿ ಡಿಕ್ಕಿ ಹೊಡೆದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತದ (Accident) ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಇಂದು ಬೆಳಗ್ಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮೇ 30ರಂದು ಮಧ್ಯಾಹ್ನ ಉದ್ಯಮಿ ಅಮರ್ ಮನೀಷ್ ಜರಿವಾಲಾ ಅವರು ನೆಪಿನ್‌ಸಿಯಾ ರಸ್ತೆಯ ನಿವಾಸಿ ಮಲಾಡ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಬಾಂದ್ರಾ ವರ್ಲಿ ಸೀ ಲಿಂಕ್ ಮಾರ್ಗದಲ್ಲಿ ಅವರ ಕಾರಿಗೆ ಒಂದು ಹದ್ದು ಡಿಕ್ಕಿ ಹೊಡೆದಿತ್ತು ಕಾರಿಗೆ ಗುದ್ದಿದ್ದರಿಂದ ಆ ಹಕ್ಕಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿತ್ತು. ಮಾನವೀಯ ದೃಷ್ಟಿಯಿಂದ ಆ ಹಕ್ಕಿಯನ್ನು ಕಾಪಾಡಲು ರಸ್ತೆ ಮಧ್ಯದಲ್ಲೇ ಕಾರು ನಿಲ್ಲಿಸಿ ಇಳಿದ ಅಮರ್ ಮನೀಶ್ ಜರಿವಾಲಾ ಎಂಬ ಉದ್ಯಮಿ ಪಕ್ಷಿಯನ್ನು ಮೇಲೆತ್ತಿ ಕಾರಿನಲ್ಲಿ ಕರೆದುಕೊಂಡು ಹೋಗಲು ಕಾರಿನತ್ತ ಬರುತ್ತಿದ್ದರು. ಅವರಿಗೆ ಸಹಾಯ ಮಾಡಲು ಅವರ ಕಾರಿನ ಚಾಲಕ ಸುಂದರ್ ಕಾಮತ್ ಕೂಡ ಕೆಳಗೆ ಇಳಿದಿದ್ದರು.

ಇದನ್ನೂ ಓದಿ
Image
Viral Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ
Image
Shocking News: ಈ ಕಂಪನಿಯಲ್ಲಿ ಹಸ್ತಮೈಥುನಕ್ಕೂ ಸಿಗುತ್ತೆ ಅರ್ಧ ಗಂಟೆ ಬ್ರೇಕ್; ಸೆಕ್ಸ್​ ಟಾಯ್ಸ್​ ಕೂಡ ಕೊಡ್ತಾರೆ!
Image
Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!

ಇದನ್ನೂ ಓದಿ: Shocking Video: ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಅಳಿಯನಿಗೆ ಗುಂಡು ಹಾರಿಸಿ ಕೊಂದ ಮಾವ; ಶಾಕಿಂಗ್ ವಿಡಿಯೋ ವೈರಲ್

ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಟ್ಯಾಕ್ಸಿ ಜರಿವಾಲಾ ಮತ್ತು ಅವರ ಡ್ರೈವರ್ ಶ್ಯಾಮ್ ಸುಂದರ್ ಕಾಮತ್​ಗೆ ಡಿಕ್ಕಿ ಹೊಡೆದಿದೆ. ಆಗ ಅವರಿಬ್ಬರೂ ಹಾರಿ ಬಿದ್ದಿದ್ದಾರೆ. ಬೇರೆ ವಾಹನದವರು ಅವರಿಬ್ಬರನ್ನೂ ಆಸ್ಪತ್ರೆಗೆ ಸೇರಿಸಿದ್ದು, ಜರಿವಾಲಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವಾಗಲೇ ಡ್ರೈವರ್ ಕಾಮತ್ ಕೂಡ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, 43 ವರ್ಷದ ಅಮರ್ ಮನೀಶ್ ಜರಿವಾಲಾ ಅವರು ಮೇ 30ರಂದು ಬಾಂದ್ರಾ-ವರ್ಲಿ ಸೀ ಲಿಂಕ್ ಮಾರ್ಗವಾಗಿ ಮಲಾಡ್‌ಗೆ ಹೋಗುತ್ತಿದ್ದಾಗ ಅವರ ಕಾರಿಗೆ ಹದ್ದು ಡಿಕ್ಕಿ ಹೊಡೆದಿತ್ತು. ಜರಿವಾಲಾ ತನ್ನ ಚಾಲಕ ಶ್ಯಾಮ್ ಸುಂದರ್ ಕಾಮತ್‌ಗೆ ಕಾರನ್ನು ನಿಲ್ಲಿಸಲು ಹೇಳಿದರು. ಆ ಗಾಯಗೊಂಡ ಪಕ್ಷಿಯನ್ನು ರಕ್ಷಿಸಲು ಇಬ್ಬರೂ ಹೋದಾಗ ಈ ಅಪಘಾತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Sat, 11 June 22

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ