ಕಾಶಿ ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ ವ್ಯಕ್ತಿ, ವಿಡಿಯೋ ವೈರಲ್
ಟೋಲ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ಆಕೆಗೆ ಕಾರಿನಿಂದ ಡಿಕ್ಕಿ ಹೊಡೆದಿರುವ ಘಟನೆ ಮೀರತ್ನ ಕಾಶಿ ಟೋಲ್ ಪ್ಲಾಜಾದಲ್ಲಿ ನಡೆದಿದೆ.
ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನ ಪರಾತ್ಪುರ್ ಪ್ರದೇಶದ ಕಾಶಿ ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಕಾರು ಚಲಾಯಿಸಿದ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಚಾಲಕನು ಮಹಿಳೆಯೊಂದಿಗೆ ಸಂಭಾಷಣೆ ನಡೆಸುತ್ತಿರುವುದನ್ನು ಕಾಣಬಹುದು.
ಇದ್ದಕ್ಕಿದ್ದಂತೆ ಕಾರಿನ ವೇಗ ಹೆಚ್ಚಿಸಿದ ಚಾಲಕ ಪ್ಲಾಜಾದ ಮಹಿಳಾ ಸಿಬ್ಬಂದಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದ್ದಾನೆ. ಆಕೆ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಬಳಿಕ ಕಾರು ಮತ್ತಷ್ಟು ವೇಗವಾಗಿ ಮುಂದೆ ಹೋದಾಗ ಅವರು ಕೆಳಗೆ ಬಿದ್ದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಮ್ಮ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಟೋಲ್ ಕೇಳಿದಾಗ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮತ್ತಷ್ಟು ಓದಿ: ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತ, ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ಸಾವು
ಇದೊಂದು ಗಂಭೀರ ಘಟನೆಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಶಿ ಟೋಲ್ ಪ್ಲಾಜಾದ ವ್ಯವಸ್ಥಾಪಕ ಅನಿಲ್ ಶರ್ಮಾ ಎಎನ್‌ಐಗೆ ತಿಳಿಸಿದ್ದಾರೆ.
#WATCH | Meerut, Uttar Pradesh: At the Kashi Toll Plaza, a car coming from Delhi crashes into a woman employee of the toll plaza on being asked for the toll. The woman was heavily injured and was rushed to the hospital. (13.05)
(CCTV source: Toll Plaza) pic.twitter.com/uRjxIHTdNg
— ANI (@ANI) May 14, 2024
ದೂರು ದಾಖಲಾಗಿದ್ದು, ಟೋಲ್ ಬೂತ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸುವುದು ಸೇರಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದಕ್ಕೂ ಮುನ್ನ ಏಪ್ರಿಲ್ 24 ರಂದು ಆಂಧ್ರಪ್ರದೇಶದ ನೆಲ್ಲೂರು ಕಾವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ವೇಗವಾಗಿ ಬಂದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕನಿಷ್ಠ ಮೂವರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ