AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು

ಉತ್ತರಪ್ರದೇಶದಲ್ಲಿ ಆದ ವಿದ್ಯುತ್ ಕಡಿತ ಹಿನ್ನೆಲೆ ಆಸ್ಪತ್ರೆಯೊಂದರಲ್ಲಿ ರೋಗಿಗಳ ತಪಾಸಣೆ ನಡೆಸಲು ವೈದ್ಯರು ಕಷ್ಟಪಡಬೇಕಾಯಿತು. ವೈದ್ಯರು ಮೊಬೈಲ್​ನಲ್ಲಿನ ಲೈಟ್​ ಬಳಕೆ ಮಾಡಿ ರೋಗಿಯನ್ನು ತಪಾಸಣೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಉತ್ತರ ಪ್ರದೇಶದ ಬಾಲಿಯ ಜಿಲ್ಲಾಸ್ಪತ್ರೆ ವೈದ್ಯರು ರೋಗಿಯನ್ನು ಮೊಬೈಲ್ ಲೈಟ್ ಬಳಕೆ ಮಾಡಿ ತಪಾಸಣೆ ನಡೆಸಿದರು
TV9 Web
| Edited By: |

Updated on: Sep 12, 2022 | 10:49 AM

Share

ಉತ್ತರ ಪ್ರದೇಶ: ರಾಜ್ಯದ ಜಿಲ್ಲೆಯೊಂದರಲ್ಲಿ ಆದ ಪವರ್ ಕಟ್​ ಹಿನ್ನೆಲೆ ಆಸ್ಪತ್ರೆಯಲ್ಲಿ ವೈದ್ಯರು ಪರದಾಡುವಂತಾಯಿತು. ಭಾರೀ ಮಳೆಯ ಅವಾಂತರ ಹಿನ್ನೆಲೆ ಶನಿವಾರ ವಿದ್ಯುತ್ ಕಡಿತಗೊಳಿಸಲಾಯಿತು. ಈ ವೇಳೆ ಬಾಲಿಯ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಲು ಮೊಬೈಲ್ ಲೈಟ್ ಮೊರೆ ಹೋಗಬೇಕಾಯಿತು. ಸದ್ಯ ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕತ್ತಲಿನಲ್ಲಿ ವೈದ್ಯರು ಮೊಬೈಲ್ ಲೈಟ್ ಬಳಕೆ ಮಾಡಿ ಮಹಿಳಾ ರೋಗಿಯೊಬ್ಬರನ್ನು ಮಲಗಿಸಿ ತಪಾಸಣೆ ನಡೆಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ವಿವರಿಸಿದ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್, ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದೆ. ಆದರೆ ಜನರೇಟರ್​ಗಾಗಿ ಬ್ಯಾಟರಿಗಳನ್ನು ಪಡೆಯುವಾಗ 15ರಿಂದ 20 ನಿಮಿಷಗಳ ಕಾಲ ತಡವಾಗಿದೆ ಎಂದು ತಿಳಿಸಿದರು. ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ಹೆಚ್ಚು ಚರ್ಚೆಯಲ್ಲಿರುವ ದೇಶದಲ್ಲಿ ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದಾಗಿದೆ. ಇಲ್ಲಿನ ಧನಾತ್ಮಕ, ನಕರಾತ್ಮಕ ವಿಷಯಗಳು ದೇಶದಾದ್ಯಂತ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗುರಿಯಾಗುತ್ತದೆ. ಸದ್ಯ ಬಾಲಿಯ ಆಸ್ಪತ್ರೆಯಲ್ಲಿನ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ