Viral Video: ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ಭಾರೀ ಮಳೆ; ನೋಡನೋಡುತ್ತಿದ್ದಂತೆ ಕುಸಿದುಬಿತ್ತು ರೈಲ್ವೆ ಸೇತುವೆ

| Updated By: ಸುಷ್ಮಾ ಚಕ್ರೆ

Updated on: Aug 20, 2022 | 12:08 PM

Himachal Pradesh Rain: ಭಾರೀ ಮಳೆಯಿಂದಾಗಿ ಕಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ.

Viral Video: ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ಭಾರೀ ಮಳೆ; ನೋಡನೋಡುತ್ತಿದ್ದಂತೆ ಕುಸಿದುಬಿತ್ತು ರೈಲ್ವೆ ಸೇತುವೆ
ಚಕ್ಕಿ ರೈಲ್ವೆ ಸೇತುವೆ ಕುಸಿತ
Follow us on

ಕಂಗ್ರಾ: ನೋಡನೋಡುತ್ತಿದ್ದಂತೆ ರೈಲ್ವೆ ಬ್ರಿಡ್ಜ್ ಕುಸಿದು ಬಿದ್ದಿರುವ ಘಟನೆ ಹಿಮಾಚಲ ಪ್ರದೇಶದ (Himachal Pradesh) ಕಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಇಲ್ಲಿನ ಚಕ್ಕಿ ಸೇತುವೆ (Chakki Bridge) ಇಂದು ಕುಸಿದಿದೆ. ಈ ರೈಲ್ವೆ ಬ್ರಿಡ್ಜ್​​ನ 3 ಪಿಲ್ಲರ್‌ಗಳಲ್ಲಿ ಒಂದು ಸಂಪೂರ್ಣ ಹಾನಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಚಕ್ಕಿ ನದಿಯ ಮೇಲೆ ನಿರ್ಮಿಸಲಾದ ರೈಲ್ವೆ ಸೇತುವೆಯ ಒಂದು ಭಾಗವು ಕುಸಿದಿರುವುದನ್ನು ಕಾಣಬಹುದು.

ಇಂದು ಧರ್ಮಶಾಲಾದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಹಠಾತ್ ಪ್ರವಾಹ ಸಂಭವಿಸಿದ್ದು, ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ಮಳೆಯಿಂದ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳಿಗೂ ಹಾನಿಯಾಗಿದೆ. ಈ ಘಟನೆಯಿಂದ ಮಂಡಿ ಜಿಲ್ಲೆಯ ಬಾಲ್, ಸದರ್, ಥುನಾಗ್, ಮಂಡಿ ಮತ್ತು ಲಮಾಥಾಚ್‌ನಲ್ಲಿನ ಸ್ಥಳಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಭಾರೀ ಮಳೆಯಿಂದಾಗಿ ಕಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ಹಿಮಾಚಲ ಪ್ರದೇಶದ ಕಾಂಗ್ರಾ, ಚಂಬಾ, ಬಿಲಾಸ್‌ಪುರ್, ಸಿರ್ಮೌರ್ ಮತ್ತು ಮಂಡಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕೆಟ್ಟ ವಾತಾವರಣದಿಂದಾಗಿ ನದಿಗಳ ಬಳಿ ಹೋಗದಂತೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸೂಚಿಸಲಾಗಿದೆ. ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 25ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ