AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜಸ್ಥಾನದ ಮಹಿಳೆ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿದ ವಿಡಿಯೋ ವೈರಲ್; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಬರ್ಮರ್​ನ ಈ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಅದೇ ಕಾರಣದಿಂದ ಈ ಗಲಾಟೆಯೂ ನಡೆದಿದೆ.

Viral Video: ರಾಜಸ್ಥಾನದ ಮಹಿಳೆ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿದ ವಿಡಿಯೋ ವೈರಲ್; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜಸ್ಥಾನದಲ್ಲಿ ಮಹಿಳೆ ಮೇಲೆ ಹತ್ತಲು ಪ್ರಯತ್ನಿಸಿದ ಜೆಸಿಬಿ
TV9 Web
| Edited By: |

Updated on: Nov 19, 2021 | 1:16 PM

Share

ಬರ್ಮರ್: ರಾಜಸ್ಥಾನದ ಬರ್ಮರ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Video Viral) ಆಗಿದೆ. ತನ್ನ ಮೇಲೆ ಬರಲು ಪ್ರಯತ್ನಿಸಿದ ಜೆಸಿಬಿ (JCB) ಯಂತ್ರದ ಮೇಲೆ ಮಹಿಳೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದಲ್ಲಿ (Rajasthan) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಹೇಳಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಘಟನೆ ಎರಡು ಗುಂಪುಗಳ ನಡುವಿನ ವಿವಾದಕ್ಕೆ ಸಂಬಂಧಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಬರ್ಮರ್​ನ ಈ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಅದೇ ಕಾರಣದಿಂದ ಈ ಗಲಾಟೆಯೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಬರ್ಮರ್ ಎಸ್‌ಪಿ ದೀಪಕ್ ಭಾರ್ಗವ್ ಹೇಳಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮತ್ತೊಮ್ಮೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದ್ದು, ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದೆ.

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರು ತಮ್ಮ ‘ಲಡ್ಕಿ ಹೂ ಲಾಡ್ ಸಕ್ತಿ ಹೂ’ ಘೋಷಣೆಯ ಮೂಲಕ ಜನರನ್ನು ಮೂರ್ಖರನ್ನಾಗಿಸುತ್ತಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಇಂದು ಹಗಲು ಹೊತ್ತಿನಲ್ಲಿ ಯಾವುದೇ ಭಯವಿಲ್ಲದ ಪುಂಡ ಪೋಕರಿಗಳಿಂದ ಒಂಟಿ ಮಹಿಳೆಯ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಟೀಕಿಸಿದ್ದಾರೆ.

ರಾಜಸ್ಥಾನ ರಾಜ್ಯದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ ಎಂದು ರಾಜಸ್ಥಾನ ಸಂಸದ ರಾಜ್ಯವರ್ಧನ್ ರಾಥೋಡ್ ಹೇಳಿದ್ದಾರೆ. ಎನ್‌ಸಿಆರ್‌ಬಿ ಅಂಕಿ-ಅಂಶಗಳು ರಾಜಸ್ಥಾನದಲ್ಲಿ ಗಂಭೀರ ಅಪರಾಧಗಳು ಹೆಚ್ಚಳವಾಗಿದೆ ಎಂದು ಖಚಿತಪಡಿಸಿವೆ. ಆದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಮಾತ್ರ ಮೂಕಪ್ರೇಕ್ಷಕನಂತೆ ಕುಳಿತಿದೆ. ಅವರು ಕುರ್ಚಿಯ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ, ಸಾರ್ವಜನಿಕರ ಬಗ್ಗೆ ಅವರಿಗೆ ಯಾವುದೇ ಕಾಳಜಿಯಿಲ್ಲ ಎಂದು ಅವರು ಹೇಳಿದ್ದಾರೆ. ನವೆಂಬರ್ 13ರಂದು ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?