Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ
ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 06, 2022 | 11:25 AM

ನವದೆಹಲಿ: ನವರಾತ್ರಿಯ (Navaratri) ಕೊನೆಯ ದಿನ ರಾವಣನ ಸಂಹಾರ ಮಾಡುವುದು ಪದ್ಧತಿ. ವಿಜಯದಶಮಿಯಂದು (Vijayadashami) ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿ ಜನರು 9 ದಸರಾ (Dasara) ಉತ್ಸವ ಆಚರಿಸುತ್ತಾರೆ. ಆದರೆ, ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಬುಧವಾರ ದಸರಾ ಕಾರ್ಯಕ್ರಮದ ವೇಳೆ ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ವಿಚಿತ್ರವಾದ ಘಟನೆಯೊಂದು ನಡೆದಿದೆ. ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿದಾಗ ಆ ಬೆಂಕಿಯ ಕಿಡಿಗಳು ಹಾರಿಹೋಗಿ ಅಲ್ಲಿ ಸೇರಿದ್ದ ಜನರು, ಪೊಲೀಸರ ಮೇಲೆ ಬಿದ್ದಿವೆ. ಇದರಿಂದ ಜನರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.

ಉತ್ತರ ಪ್ರದೇಶದ ಮುಜರಾಯಿ ಸರ್ಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ರಾವಣನ ಪ್ರತಿಕೃತಿ ದಹಿಸುವಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾವಣನ ಪ್ರತಿಕೃತಿಗಳನ್ನು ದಹಿಸುವ ಮೂಲಕ ಆಚರಿಸಲಾಗುವ ದಸರಾವನ್ನು ವೀಕ್ಷಿಸಲು ನೆರೆದಿದ್ದ ದೊಡ್ಡ ಜನಸಮೂಹದ ಮೇಲೆ ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರಿ ಬೀಳುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಐತಿಹಾಸಿಕ ಕುಲು ದಸರಾದಲ್ಲಿ ಪಾಲ್ಗೊಂಡ ಮೊದಲ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ನರೇಂದ್ರ ಮೋದಿ

ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲದೆ ಪೊಲೀಸ್ ಅಧಿಕಾರಿಗಳು ಕೂಡ ರಕ್ಷಣೆಗಾಗಿ ಓಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ರಾವಣನ ಪ್ರತಿಕೃತಿಯಿಂದ ಬೆಂಕಿ ಹಾರುತ್ತಿರುವುದು ಕಡಿಮೆಯಾದ ಬಳಿಕ ಗೂಳಿಯೊಂದು ಮೈದಾನಕ್ಕೆ ನುಗ್ಗಿ ಮತ್ತಷ್ಟು ಆತಂಕ ಮೂಡಿಸಿತು. ಕೂಡಲೇ ಅಧಿಕಾರಿಗಳು ಆ ಗೂಳಿಯನ್ನು ಎಳೆದುಕೊಂಡು ಹೋಗಿದ್ದಾರೆ.

ಹರಿಯಾಣದ ಯಮುನಾನಗರದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ರಾವಣನ ದಹನ ಪ್ರತಿಕೃತಿ ಪ್ರೇಕ್ಷಕರ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಯಮುನಾನಗರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್