ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್; ಭಯಾನಕ ವಿಡಿಯೋ ವೈರಲ್
ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಟ್ರಕ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 08, 2022 | 1:32 PM

ನವದೆಹಲಿ: ಸಮಾಜವಾದಿ ಪಕ್ಷದ ಮೈನ್​ಪುರಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ (Devendra Singh) ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ನಂತರ ಅವರ ಕಾರನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ. ಈ ಘಟನೆಯಿಂದ ಸಮಾಜವಾದಿ ಪಕ್ಷದ (Samajwadi Party) ನಾಯಕನಿಗೆ ಗಾಯಗಳಾಗಿದ್ದು, ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ (Video Viral) ಆಗಿದೆ.

ದೇವೇಂದ್ರ ಸಿಂಗ್ ಅವರ ಕಾರನ್ನು ಮೈನ್​ಪುರಿಯ ಸದರ್ ಕೊಟ್ವಾಲಿ ಪ್ರದೇಶದ ಅವರ ಮನೆಯ ಬಳಿ ಟ್ರಕ್ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ನಂತರ ಸ್ಥಳೀಯರು ಕಾರಿನಲ್ಲಿದ್ದ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಿದರು. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.

ಈ ಅಪಘಾತದ ವಿಡಿಯೋದಲ್ಲಿ ದೇವೇಂದ್ರ ಸಿಂಗ್ ಅವರ ವಾಹನವನ್ನು ನಿಲ್ಲಿಸುವ ಮೊದಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗುವುದನ್ನು ನೋಡಬಹುದು. ಕಾರು ನಿಂತ ತಕ್ಷಣ ರಸ್ತೆಯಲ್ಲಿದ್ದ ಹಲವರು ಸ್ಥಳಕ್ಕೆ ಧಾವಿಸಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಅವರನ್ನು ರಕ್ಷಿಸಲು ಯತ್ನಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ನಾಯಕರ ಒಡೆತನದ ಆಸ್ತಿ ಮೇಲೆ ಐಟಿ ದಾಳಿ

ಭಾನುವಾರ ರಾತ್ರಿ ದೇವೇಂದ್ರ ಸಿಂಗ್ ಅವರು ಕರ್ಹಾಲ್ ರಸ್ತೆಯ ಮೂಲಕ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಬಳಿ ಈ ಘಟನೆ ನಡೆದಿದೆ. ಘಟನೆ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು. ಪೊಲೀಸರ ಪ್ರಕಾರ, ಟ್ರಕ್ ಚಾಲಕ ಇಟಾವಾ ಮೂಲದವನು.

“ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ, ನಂತರ ಅದನ್ನು 500 ಮೀಟರ್‌ಗೂ ಹೆಚ್ಚು ಎಳೆದಿದೆ. ಇಟಾವಾದಲ್ಲಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಎಸ್‌ಪಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ.

ಅಪಘಾತದ ನಂತರ, ದೇವೇಂದ್ರ ಯಾದವ್ ಮೈನ್‌ಪುರಿ ಸದರ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Mon, 8 August 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ