Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್

Crime News Today: ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದ. ಅದರಿಂದಲೇ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

Viral Video: ಮೀರತ್​ನಲ್ಲಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಇರಿದು ಕೊಂದ ದುಷ್ಟರು; ಸಿಸಿಟಿವಿ ವಿಡಿಯೋ ವೈರಲ್
ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಆರೋಪಿಗಳು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 25, 2022 | 12:59 PM

ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ ನಡುರಸ್ತೆಯಲ್ಲಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬನನ್ನು ಇರಿದು (Murder) ಕೊಂದಿರುವ ಆಘಾತಕಾರಿ ವಿಡಿಯೋ (Shocking Video) ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಿಂದಿನ ದಿನ ಆಲ್ಕೋಹಾಲ್ ಕುಡಿದಾಗ ನಡೆದ ಗಲಾಟೆಯ ವಿಚಾರವಾಗಿ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಆತನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಮೀರತ್​ನ ಹಳೆನಗರ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಲಿಸಾರಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿರೋಜ್ ನಗರದ 25 ವರ್ಷದ ನಿವಾಸಿ ಸಾಜಿದ್ ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಇತ್ತೆಫಾಕ್ ನಗರಕ್ಕೆ ಯಾವುದೋ ಕೆಲಸಕ್ಕಾಗಿ ಹೋಗಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕೆಲವು ದಾಳಿಕೋರರು ಸಾಜಿದ್‌ನನ್ನು ಹಿಡಿದು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಆ ವೇಳೆ ಸಾಜಿದ್ ರಸ್ತೆಯಿಂದ ಮೇಲೇಳಲು ಯತ್ನಿಸಿದಾಗ ದಾಳಿಕೋರರಲ್ಲಿ ಒಬ್ಬ ಆತನಿಗೆ ಮತ್ತೊಮ್ಮೆ ಚಾಕುವಿನಿಂದ ಇರಿದಿದ್ದಾರೆ. ಇಡೀ ಪ್ರಸಂಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿದ್ದಾರೆ. ಈ ಘಟನೆಯ ಲೈವ್ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಶನಿವಾರ ನನ್ನ ಮಗ ತನ್ನ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿ ಮದ್ಯ ಸೇವಿಸಿ ಜಗಳವಾಡಿದ್ದಾನೆ ಎಂದು ಸಾಜಿದ್​ನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ತಡರಾತ್ರಿ ಕುಟುಂಬಸ್ಥರು ರಾಜಿ ಮಾಡಿಕೊಂಡಿದ್ದರು. ಈ ದ್ವೇಷದಿಂದಲೇ ಸಾಜಿದ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Murder: ಹೆತ್ತ ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ; ಕಾರಣವೇನು ಗೊತ್ತಾ?

Murder: ಗಂಡನನ್ನು ಕೊಂದು, ಶವವನ್ನು ಗೋಣಿಚೀಲದಲ್ಲಿ ತುಂಬಿ ಪಾರ್ಕ್​ನಲ್ಲಿ ಎಸೆದ ಹೆಂಡತಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ