ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ

ಆಕೆ ಸಹಾಯಕ್ಕಾಗಿ ಅಂಗಲಾಚ್ತಿದ್ಲು, ಯುವತಿಯನ್ನು ಹೊತ್ತುಕೊಂಡು ಬಲವಂತವಾಗಿ ಮದುವೆಯಾದ ವ್ಯಕ್ತಿ, ವಿಡಿಯೋ ವೈರಲ್
ಮದುವೆ
Follow us
ನಯನಾ ರಾಜೀವ್
|

Updated on: Jun 07, 2023 | 12:10 PM

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಾವುದೋ ನಿರ್ಜನ ಪ್ರದೇಶದಲ್ಲಿ ಅಗ್ನಿ ನಿರ್ಮಿಸಿ ಆಕೆ ಬೇಡ ಎಂದು ಅಂಗಲಾಚುತ್ತಿದ್ದರೂ ಆಕೆಯನ್ನು ಹೊತ್ತುಕೊಂಡೇ ಅಗ್ನಿಯನ್ನು ಸುತ್ತಿ ಮದುವೆಯಾಗಿದ್ದಾನೆ. ಆಕೆ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು, ಯುವತಿಯನ್ನು ಅಪಹರಿಸಿರುವ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಏಳು ದಿನಗಳು ಕಳೆದಿವೆ. ಮಗಳಿಗೆ ನ್ಯಾಯ ಸಿಗದೆ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಂದೆ ನುಡಿದಿದ್ದಾರೆ.

ಬಾಲಕಿಯ ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಟೀನಾ ದಾಬಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಗ್ವಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಯಾರನ್ನೂ ಬಂಧಿಸದ ಕಾರಣ ಆರೋಪಿಗಳಿಗೆ ಧೈರ್ಯ ಹೆಚ್ಚಿದೆ, ಅವರು ಮುಕ್ತವಾಗಿ ತಿರುಗಾಡುತ್ತಿದ್ದಾರೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಈ ವೇಳೆ ಯುವತಿಯನ್ನು ಮತ್ತೆ ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಕೆಗೆ ಬೇರೆ ಮದುವೆಯನ್ನೂ ಮಾಡುವಂತಿಲ್ಲ ಎಂದು ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಹುಡುಗಿಗೆ ಜೂನ್ 12 ರಂದು ಮದುವೆ ನಿಗದಿಯಾಗಿತ್ತು. ಇದಕ್ಕೂ ಮುನ್ನ ಪೂನಂ ನಗರದ ನಿವಾಸಿ ಪುಷ್ಪೇಂದ್ರ ಸಿಂಗ್ ಬಾಲಕಿಯನ್ನು ಅಪಹರಿಸಿದ್ದರು. ಸ್ಥಳೀಯ ಮೂಲಗಳ ಪ್ರಕಾರ, ಪುಷ್ಪೇಂದ್ರ ಸಿಂಗ್ ಈ ಹಿಂದೆ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಯುವತಿಯ ಸಂಬಂಧಿಕರು ಯುವಕನೊಂದಿಗೆ ಮಗಳ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ್ದರು.

ಇದಾದ ನಂತರ ಬೇರೆ ಕುಟುಂಬದಲ್ಲಿ ಹುಡುಗಿಯ ನಿಶ್ಚಿತಾರ್ಥ ನಿಶ್ಚಯವಾಗಿತ್ತು. ಜೂನ್ 12 ರಂದು ಮದುವೆಯಾಗಲು ನಿರ್ಧರಿಸಲಾಯಿತು. ಆದರೆ ಈ ಮಧ್ಯೆ ಪುಷ್ಪೇಂದ್ರ ಸಿಂಗ್ (ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ) ನಿಶ್ಚಿತಾರ್ಥವನ್ನು ಮುರಿದಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಯೋಜಿಸುತ್ತಾನೆ. ಯುವಕ ಯುವತಿಯನ್ನು ಅಪಹರಿಸಿ ಬಲವಂತವಾಗಿ ಕರೆದೊಯ್ದಿದ್ದಾನೆ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್