AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದ ಯುವತಿಗೆ ಗೋಲ್ಡನ್ ಟೆಂಪಲ್​ಗೆ ಪ್ರವೇಶ ನಿರಾಕರಣೆ

ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡನ್​ ಟೆಂಪಲ್​(Golden Temple) ನಲ್ಲಿ ಯುವತಿಯೊಬ್ಬಳು ತನ್ನ ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದಾಳೆ ಎನ್ನುವ ಒಂದೇ ಒಂದು ಕಾರಣಕ್ಕೆ ಪ್ರವೇಶವನ್ನು ನಿರಾಕರಿಸಿರುವ ಘಟನೆ ನಡೆದಿದೆ.

Video: ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದ ಯುವತಿಗೆ ಗೋಲ್ಡನ್ ಟೆಂಪಲ್​ಗೆ ಪ್ರವೇಶ ನಿರಾಕರಣೆ
ಗೋಲ್ಡನ್ ಟೆಂಪಲ್ ವಿಡಿಯೋ
ನಯನಾ ರಾಜೀವ್
|

Updated on: Apr 17, 2023 | 2:09 PM

Share

ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡನ್​ ಟೆಂಪಲ್​(Golden Temple) ನಲ್ಲಿ ಯುವತಿಯೊಬ್ಬಳು ತನ್ನ ಮುಖದ ಮೇಲೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಹಚ್ಚಿಕೊಂಡಿದ್ದಾಳೆ ಎನ್ನುವ ಒಂದೇ ಒಂದು ಕಾರಣಕ್ಕೆ ಪ್ರವೇಶವನ್ನು ನಿರಾಕರಿಸಿರುವ ಘಟನೆ ನಡೆದಿದೆ. ಇದಾದ ನಂತರ ಧಾರ್ಮಿಕ ಮತ್ತು ಆಧ್ಯಾತ್ಮಿಕ ವ್ಯಕ್ತಿಗಳ ಜೊತೆಗೆ ಸಿನಿಮಾ ನಟರು ಕೂಡ ಈ ಬಗ್ಗೆ ಟ್ವಿಟ್ಟರ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಸ್ಕಾನ್​ನ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಾಮನ್ ದಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಗೆ ಕಾರಣರಾದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಚಟುವಟಿಕೆಗಳನ್ನು ಸಮಯಕ್ಕೆ ಸರಿಯಾಗಿ ನಿಲ್ಲಿಸದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ರಾಧಾರಾಮನ್ ದಾಸ್ ಹೇಳಿದರು.

ರಾಧಾರಾಮನ್ ದಾಸ್ ಟ್ವೀಟ್ ನಲ್ಲಿ ಇದು ಆಘಾತಕಾರಿ ಮುಖದ ಮೇಲೆ ಭಾರತದ ಧ್ವಜದ ಹಚ್ಚೆ ಹಾಕಿಸಿಕೊಂಡಿದ್ದ ಕಾರಣಕ್ಕೆ ಯುವತಿಯನ್ನು ಗೋಲ್ಡನ್ ಟೆಂಪಲ್ ಪ್ರವೇಶಿಸದಂತೆ ತಡೆಹಿಡಿಯಲಾಗಿತ್ತು. ಈ ಖಲಿಸ್ತಾನಿಯನ್ನು ಕೂಡಲೇ ಬಂಧಿಸಬೇಕು. ದಿನದಿಂದ ದಿನಕ್ಕೆ ಅವರ ದುರಹಂಕಾರ ಹೆಚ್ಚಾಗುತ್ತಿರುವುದರಿಂದ ಅವರನ್ನು ನಿರ್ಲಕ್ಷಿಸುವುದು ಪರಿಹಾರವಲ್ಲ. ಅದೇ ಸಮಯದಲ್ಲಿ, ಚಲನಚಿತ್ರ ನಟ ದೇವೋಲೀನಾ ಭಟ್ಟಾಚಾರ್ಯ ಅವರು ಒಂದು ಕ್ಷಣ ನನಗೆ ಇದನ್ನು ನಂಬಲಾಗಲಿಲ್ಲ ಎಂದಿದ್ದಾರೆ.

ಮತ್ತಷ್ಟು ಓದಿ: ಗೋಲ್ಡನ್​ ಟೆಂಪಲ್​​ ಅಪವಿತ್ರಗೊಳಿಸಿದ ಯುವಕನ ಹತ್ಯೆ ಬೆನ್ನಲ್ಲೇ ಇನ್ನೊಂದು ಘಟನೆ; ಸಿಖ್ಖರ ಧ್ವಜ ಅಪವಿತ್ರಗೊಳಿಸಲು ಯತ್ನಿಸಿದವನಿಗೆ ಥಳಿತ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದು ಸಿಖ್ ದೇಗುಲ ಪ್ರತಿಯೊಂದು ಧಾರ್ಮಿಕ ಸ್ಥಳಕ್ಕೂ ಅದರದ್ದೇ ಆದ ವಿಶೇಷತೆ ಇದೆ. ಎಲ್ಲರಿಗೂ ಸ್ವಾಗತವಿದೆ.

ಅಧಿಕಾರಿಗಳು ಅನುಚಿತವಾಗಿ ವರ್ತಿಸಿದ್ದರೆ ಕ್ಷಮೆಯಾಚಿಸುತ್ತೇವೆ. ಮಹಿಳೆಯ ಮುಖದಲ್ಲಿರುವ ಧ್ವಜ ನಮ್ಮ ರಾಷ್ಟ್ರಧ್ವಜವಾಗಿರಲಿಲ್ಲ, ಅದರಲ್ಲಿ ಅಶೋಕ ಚಕ್ರ ಇರಲಿಲ್ಲ, ಇದು ರಾಜಕೀಯ ಧ್ವಜವಾಗಿರಬಹುದು ಎಂದು ಎಸ್​ಜಿಪಿಸಿ ಪ್ರಧಾನ ಕಾರ್ಯದರ್ಶಿ ಗುರು ಚರಣ್​ ಸಿಂಗ್ ಗ್ರೆವಾಲ್ ವಿಡಿಯೋದಲ್ಲಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ