AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು.

ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ?; ಮಹಾ ಸಿಎಂಗೆ ಬಾಲಕಿಯ ಪ್ರಶ್ನೆ
ಬಾಲಕಿ ಜತೆ ಮಾತನಾಡುತ್ತಿರುವ ಏಕನಾಥ್ ಶಿಂಧೆ
TV9 Web
| Edited By: |

Updated on:Jul 19, 2022 | 1:02 PM

Share

ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಭೇಟಿ ಮಾಡಿದ ಬಾಲಕಿಯೊಬ್ಬಳು ಮುಖ್ಯಮಂತ್ರಿಯಾಗಬೇಕಾದರೆ ಏನು ಮಾಡಬೇಕು? ಎಂದು ಕೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದರೆ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಅನ್ನದಾ ದಾಮ್ರೆ ಶಿಂಧೆ ಅವರಲ್ಲಿ ಕೇಳಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಬಂದಾಗ ನೀವು ನೀರಲ್ಲೇ ಹೋಗಿ ಜನರಿಗೆ ಸಹಾಯ ಮಾಡಿದ್ದೀರಿ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ನಾನು ಮುಖ್ಯಮಂತ್ರಿ ಆಗಬಹುದೇ ಎಂದು ಬಾಲಕಿ ಕೇಳಿದ್ದಾಳೆ.  ಇದಕ್ಕೆ ನಗುತ್ತಾ ಉತ್ತರಿಸಿದ ಶಿಂಧೆ, ನೀವು ಖಂಡಿತವಾಗಿಯೂ ಮುಖ್ಯಮಂತ್ರಿ ಆಗಬಹುದು. ಈ ಬಗ್ಗೆ ನಾವು ನಿರ್ಣಯ ಅಂಗೀಕರಿಸುತ್ತೇವೆ ಎಂದಿದ್ದಾರೆ. ಈ ವರ್ಷ ದೀಪಾವಳಿಗೆ ನನ್ನನ್ನು ಗುವಾಹಟಿಗೆ ಕರೆದುಕೊಂಡು ಹೋಗಬೇಕು ಎಂದು ಬಾಲಕಿ ಶಿಂಧೆಯವರಲ್ಲಿ ಹೇಳಿದ್ದಾಳೆ. ಖಂಡಿತವಾಗಿಯೂ, ನೀನು ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಹೋಗಲು ಬಯಸುತ್ತೀಯಾ ಎಂದು ಶಿಂಧೆ ಕೇಳಿದಾಗ ಬಾಲಕಿ ಹೂಂ ಎಂದಿದ್ದಾಳೆ.

ಬಾಲಕಿಯ ಚುರುಕುತನವನ್ನು ಮೆಚ್ಚಿದ ಶಿಂಧೆ ಈ ಬಾಲಕಿ ತುಂಬಾ ಬುದ್ಧಿವಂತೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಶಿವಸೇನಾದಲ್ಲಿ ಬಂಡಾಯವೆದ್ದ ಶಿಂಧೆ ಉದ್ಧವ್ ಠಾಕ್ರೆ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಶಿಂಧೆ ಜೂನ್ 30ರಂದು ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Published On - 1:01 pm, Tue, 19 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ