ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಷ್ಣು ದೇವ್​​​​ ಸಾಯಿ

|

Updated on: Dec 13, 2023 | 4:43 PM

ಛತ್ತೀಸ್‌ಗಢ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಏರಿದೆ. ಇದೀಗ ಈ ಮೂರು ರಾಜ್ಯಗಳಿಗೆ ಮುಖ್ಯಮಂತ್ರಿಗಳ ಆಯ್ಕೆ ಆಗಿದ್ದು, ಈಗಾಗಲೇ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ ಸಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಷ್ಣು ದೇವ್​​​​ ಸಾಯಿ
Vishnu Deva Sai
Follow us on

ರೈಪುರ್, ಡಿ.13: ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್​​ ಸಾಯಿ (Vishnu Dev Sai) ರಾಯ್‌ಪುರದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಭಾನುವಾರದಂದು ಛತ್ತೀಸ್‌ಗಢ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದಿಂದ ವಿಷ್ಣು ದೇವ ಸಾಯಿ ಅವರು ಶಾಸಕಾಂಗ ಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ( ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ) ಬಿಜೆಪಿ ಅಧಿಕಾರ ಪಡೆದುಕೊಂಡಿದೆ. ತೆಲಂಗಾಣದಲ್ಲಿ ಕಾಂಗ್ರೆಸ್​​, ಮಿಜೋರಂನಲ್ಲಿ ಸ್ಥಳೀಯ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿಗೆ ಮೂರು ರಾಜ್ಯಗಳ ಗೆಲುವು ಲೋಕಸಭೆ ಚುನಾವಣೆಗೆ ಹೊಸ ಭರವಸೆಯನ್ನು ಮೂಡಿಸಿದೆ.

ಈಗಾಗಲೇ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಜತೆಗೆ ರಾಜಸ್ಥಾನದ ಮುಖ್ಯಮಂತ್ರಿಯ ಆಯ್ಕೆ ಕೂಡ ಆಗಿದೆ. ಡಿಸೆಂಬರ್​​​ 15ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಇಂದಿನ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್​​​​ ಶಾ, ಬಿ.ಎಲ್​​​ ಸಂತೋಷ್​​​​​, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​​, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕೂಡ ಭಾಗಿಯಾಗಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿನ ಹೀನಾಯ ಸೋಲು; ಸೋಲಿನ ಕಾರಣ ಪರಿಶೀಲಿಸಿದ ಕಾಂಗ್ರೆಸ್ ನಾಯಕತ್ವ

ವಿಷ್ಣು ದೇವ್​​​ ಸಾಯಿ ಅವರಿಗೆ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವಭೂಸನ್ ಹರಿಚಂದನ್ ಪ್ರಮಾಣ ವಚನ ಭೋದಿಸಿದರು. ಇದರ ಜತೆಗೆ ವಿಜಯ್ ಶರ್ಮಾ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಅರುಣ್ ಸಾವೊ ಅವರು ಕೂಡ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 4:21 pm, Wed, 13 December 23