Vistara Flights: ಬೆಂಗಳೂರು ಸೇರಿ ಹಲವೆಡೆ ಇಂದೂ 38 ವಿಸ್ತಾರ ವಿಮಾನ ಸಂಚಾರ ರದ್ದು, ವರದಿ ಕೇಳಿದ ಕೇಂದ್ರ

ಪರಿಷ್ಕೃತ ವೇತನದ ಪ್ರಸ್ತಾವ ವಿರೋಧಿಸಿ ಪೈಲಟ್​ಗಳು ಹಠಾತ್ ಪ್ರತಿಭಟನೆ ವ್ಯಕ್ತಪಡಿಸುತ್ತಿರುವುದರಿಂದ ವಿಸ್ತಾರ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸೋಮವಾರ 50 ಕ್ಕೂ ಹೆಚ್ಚು ವಿಸ್ತಾರಾ ವಿಮಾನಗಳ ಸಂಚಾರ ರದ್ದುಗೊಂಡಿದ್ದರೆ, ಇಂದು (ಮಂಗಳವಾರ) ಬೆಂಗಳೂರು ಸೇರಿದಂತೆ ಹಲವು ನಗರಗಳಿಂದ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟ ರದ್ದಾಗಿದೆ.

Vistara Flights: ಬೆಂಗಳೂರು ಸೇರಿ ಹಲವೆಡೆ ಇಂದೂ 38 ವಿಸ್ತಾರ ವಿಮಾನ ಸಂಚಾರ ರದ್ದು, ವರದಿ ಕೇಳಿದ ಕೇಂದ್ರ
ವಿಸ್ತಾರ ವಿಮಾನ
Follow us
Ganapathi Sharma
|

Updated on:Apr 02, 2024 | 11:08 AM

ನವದೆಹಲಿ, ಏಪ್ರಿಲ್ 2: ವಿಸ್ತಾರ ವಿಮಾನಯಾನ (Vistara Airlines) ಸಂಸ್ಥೆಯ ಸಂಕಷ್ಟ ಮುಂದುವರಿದಿದ್ದು, ಮಂಗಳವಾರ ಬೆಳಗ್ಗೆ ಬೆಂಗಳೂರು (Bangalore) ಸೇರಿದಂತೆ ವಿವಿಧ ನಗರಗಳಿಂದ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟ ರದ್ದುಗೊಂಡಿದೆ. ಪೈಲಟ್‌ಗಳ ಲಭ್ಯತೆಯಿಲ್ಲದ ಕಾರಣ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ಮುಂಬೈನಿಂದ 15 ವಿಮಾನಗಳು, ದೆಹಲಿಯಿಂದ 12 ಮತ್ತು ಬೆಂಗಳೂರಿನಿಂದ 11 ವಿಮಾನಗಳ ಹಾರಾಟ ರದ್ದಾಗಿವೆ. ಸೋಮವಾರ 50 ಕ್ಕೂ ಹೆಚ್ಚು ವಿಸ್ತಾರಾ ವಿಮಾನಗಳ ಸಂಚಾರ ರದ್ದುಗೊಂಡಿತ್ತು. ನಂತರ ಸುಮಾರು 160 ವಿಮಾನಗಳು ವಿಳಂಬವಾಗಿ ಹಾರಾಟ ಆರಂಭಿಸಿದ್ದವು.

ವಿಮಾನ ನಿಲ್ದಾಣದಲ್ಲಿ ಗಂಟೆಗಳ ಕಾಲ ಕಾಯಬೇಕಾಗಿ ಬಂದಿರುವ ಬಗ್ಗೆ ಪ್ರಯಾಣಿಕರು ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಮಾನಯಾನ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಸಿಬ್ಬಂದಿ ಅಲಭ್ಯತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಗಮನಾರ್ಹ ಸಂಖ್ಯೆಯ ವಿಮಾನ ರದ್ದುಗೊಂಡಿದ್ದು, ಅನೇಕ ವಿಮಾನಗಳು ವಿಳಂಬವಾಗಿ ಸಂಚಾರ ಮಾಡಿವೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವಿಸ್ತಾರ ವಿಮಾನಯಾನ ಸಂಸ್ಥೆಯ ಪ್ರಕಟಣೆ ಸೋಮವಾರ ತಿಳಿಸಿತ್ತು.

‘ನಮ್ಮ ಗ್ರಾಹಕರಿಗೆ ಅನಾನುಕೂಲತೆ ಆಗಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಅದಕ್ಕಾಗಿ ತೀವ್ರ ಕಳವಳ ವ್ಯಕ್ತಪಡಿಸುತ್ತೇವೆ. ಪ್ರಯಾಣಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ನಮ್ಮ ತಂಡ ಕೆಲಸ ಮಾಡುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಿಸ್ತಾರ ಸಂಕಷ್ಟಕ್ಕೆ ಕಾರಣವೇನು?

ಏರ್ ಇಂಡಿಯಾದೊಂದಿಗೆ ವಿಸ್ತಾರ ಏರ್‌ಲೈನ್ ವಿಲೀನಕ್ಕೆ ಮುಂಚಿತವಾಗಿ ಪರಿಷ್ಕೃತ ವೇತನ ಪ್ರಸ್ತಾವ ಕಳುಹಿಸಿರುವುದನ್ನು ಸಂಸ್ಥೆಯ ಪೈಲಟ್​ಗಳು ವಿರೋಧಿಸುತ್ತಿದ್ದಾರೆ. ಸಂಸ್ಥೆಯ ಕ್ರಮದಿಂದ ಅಸಮಾಧಾನಗೊಂಡಿರುವ ಪೈಲಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯದ ಕಾರಣ ನೀಡಿ ಹಠಾತ್​ ರಜೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಒಟ್ಟಾರೆ ಕಾರ್ಯಾಚರಣೆ ಮೇಲೆ ಪರಿಣಾಮ ಉಂಟಾಗಿದೆ.

ಪೈಲಟ್‌ಗಳಿಗೆ ಪರಿಷ್ಕೃತ ವೇತನ ಪ್ರಸ್ತಾವವನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದ್ದು, ಸಹಿ ಮಾಡುವಂತೆ ಸೂಚಿಸಲಾಗಿದೆ. ಸಹಿ ಮಾಡದವರನ್ನು ವಿಲೀನದಿಂದ ಹೊರಗಿಡಲಾಗುವುದು ಎಂದು ಪೈಲಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಪರಿಣಾಮವಾಗಿ ಪೈಲಟ್​ಗಳು ಅಸಹನೆ ತೋರ್ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

ಸದ್ಯ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಯಾಣಿಕರು ಕುಂದುಕೊರತೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.

ವರದಿ ಕೇಳಿದ ಕೇಂದ್ರ

ವಿಮಾನ ರದ್ದತಿ ಮತ್ತು ವಿಳಂಬ ಸಂಚಾರಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ವಿಸ್ತಾರದಿಂದ ವಿವರವಾದ ವರದಿಯನ್ನು ಕೇಳಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Tue, 2 April 24

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ