ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ: ವಿಕೆ ಶಶಿಕಲಾ

ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ ಎಂದು ಎಐಎಡಿಎಂಕೆ ಮಾಜಿ ನಾಯಕಿ ವಿಕೆ ಶಶಿಕಲಾ ಹೇಳಿದ್ದಾರೆ. ಎಂಜಿಆರ್, ಜಯಲಲಿತಾರಂತೆ ಎಐಎಡಿಎಂಕೆಯನ್ನು ಮುಂದೆ ಕೊಂಡೊಯ್ಯಲು ನಾನು ಬಯಸುತ್ತೇನೆ.

ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ: ವಿಕೆ ಶಶಿಕಲಾ
VK Sasikala
Follow us
TV9 Web
| Updated By: ನಯನಾ ರಾಜೀವ್

Updated on:Jul 06, 2022 | 10:52 AM

ಚೆನ್ನೈ: ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ ಎಂದು ಎಐಎಡಿಎಂಕೆ ಮಾಜಿ ನಾಯಕಿ ವಿಕೆ ಶಶಿಕಲಾ ಹೇಳಿದ್ದಾರೆ.

ಎಂಜಿಆರ್, ಜಯಲಲಿತಾರಂತೆ ಎಐಎಡಿಎಂಕೆಯನ್ನು ಮುಂದೆ ಕೊಂಡೊಯ್ಯಲು ನಾನು ಬಯಸುತ್ತೇನೆ. ಎಂಜಿಆರ್ ಮತ್ತು ಜಯಲಲಿತಾ ಅವರು ಮಾಡಿದ ರೀತಿಯಲ್ಲಿ ಪಕ್ಷವನ್ನು ಮುನ್ನಡೆಸುವುದು ತಮ್ಮ ಆಶಯವಾಗಿದೆ. ನಮ್ಮ ಕಾರ್ಯಕರ್ತರಿಗೆ ಅದು ಚೆನ್ನಾಗಿ ತಿಳಿದಿದೆ.

ಅಷ್ಟೇ ಅಲ್ಲ, ಸತ್ಯವಂತನಾಗಿರುವ ನಾಯಕನಿರಬೇಕು ಮತ್ತು ಅವನು/ಅವಳು ಹಿಂದೆ ಎಂದೂ ಒಮ್ಮೆಯೂ ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡಿರಬಾರದು, ಅಂಥವರು ತಮಿಳುನಾಡಿಗೆ ಖಂಡಿತವಾಗಿಯೂ ಒಳ್ಳೆಯದನ್ನು ಮಾಡುತ್ತಾರೆ.

ಎಂಐಎಡಿಎಂಕೆಗೆ ಮತ್ತೆ ಯಾವಾಗ ಸೇರುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಕ್ಕೆ ಒಬ್ಬ ನಾಯಕ ಬೇಕೇ ಬೇಕು ಆದರೆ ಅದನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸುತ್ತಾರೆ ಎಂದು ಹೇಳಿದರು.

ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲು ಜುಲೈ 11 ರಂದು ಎಡಪ್ಪಾಡಿ ಕೆ ಪಳನಿಸ್ವಾಮಿ ಬೆಂಬಲಿಗರು ಕರೆದಿದ್ದ ಸಾಮಾನ್ಯ ಮಂಡಳಿ ಸಭೆಯ ಕುರಿತು ಶಶಿಕಲಾ ಮಾತನಾಡಿ, ಕಾರ್ಯಕರ್ತರ ಆಶಯವೇ ಅಂತಿಮವಾದದ್ದು ಎಂದು ನಾನು ಪದೇ ಪದೇ ಹೇಳಿದ್ದೇನೆ ಎಂದರು.

ಶಶಿಕಲಾ ಅವರು ಎಐಎಡಿಎಂಕೆಯ ಸ್ವಯಂ ಘೋಷಿತ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇದು, ಅವರು ಸಕ್ರಿಯ ರಾಜಕಾರಣಕ್ಕೆ ಮರುಪ್ರವೇಶಿಸುತ್ತಿರುವ ಬಗ್ಗೆ ಖಚಿತ ಸಂದೇಶವನ್ನು ರವಾನಿಸಿದೆ. ಜೊತೆಗೆ, ಪಕ್ಷವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಮಾಜಿ ಸಿಎಂ ಪಳನಿಸ್ವಾಮಿ, ಪನೀರ್‌ ಸೆಲ್ವಂ ಅವರಿಗೆ ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ನೆನಪು ಮಾಡಿಕೊಡಲು ಪ್ರಯತ್ನ ನಡೆಸುತ್ತಿದ್ದಾರೆ.

Published On - 10:48 am, Wed, 6 July 22

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ