AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vocal For Local: ‘ಅನುಪಮಾ’ ದೀಪಾವಳಿಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ; ವಿಶೇಷವೇನು?

‘ಅನುಪಮಾ' ಅವರ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಇದರಲ್ಲಿ ನೀವು ಕೇಂದ್ರ ಸರ್ಕಾರದ ‘ವೋಕಲ್ ಫಾರ್ ಲೋಕಲ್', ‘ಮೇಕ್ ಇನ್ ಇಂಡಿಯಾ', ‘ಡಿಜಿಟಲ್ ಇಂಡಿಯಾ' ಮತ್ತು ‘ಆತ್ಮನಿರ್ಭರ್ ಭಾರತ್'ಗಳ ಒಂದು ನೋಟವನ್ನು ಪಡೆಯುತ್ತೀರಿ.

Vocal For Local: ‘ಅನುಪಮಾ’ ದೀಪಾವಳಿಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ; ವಿಶೇಷವೇನು?
‘ಅನುಪಮಾ’ ದೀಪಾವಳಿಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಗಣಪತಿ ಶರ್ಮಾ
| Edited By: |

Updated on:Nov 07, 2023 | 2:25 PM

Share

ನವದೆಹಲಿ, ನವೆಂಬರ್ 6: ಕಿರುತೆರೆ ಧಾರಾವಾಹಿ ‘ಅನುಪಮಾ’ದಲ್ಲಿ ರೂಪಾಲಿ ಗಂಗೂಲಿಯವರ ಪಾತ್ರ ಬಹಳ ಜನಮನ್ನಣೆ ಪಡೆದಿದೆ. ‘ಅನುಪಮಾ’ ದೀಪಾವಳಿ (Anupamaa style diwali) ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಫಿದಾ ಆಗಿದ್ದಾರೆ. ಇದರೊಂದಿಗೆ, ಅವರೂ ‘ಅನುಪಮಾ’ ಅಭಿಮಾನಿಯಾಗಿದ್ದಾರೆ ಮತ್ತು ‘ಅನುಪಮಾ’ ರೀತಿಯಲ್ಲಿ ಜನರು ದೀಪಾವಳಿಯನ್ನು ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದಲ್ಲದೆ, ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ‘ಅನುಪಮಾ’ ದೀಪಾವಳಿಯ ವಿಶೇಷತೆ ಏನು? ಇಲ್ಲಿದೆ ವಿವರ.

ಈ ವೀಡಿಯೋ, ದೀಪಾವಳಿ ಹಬ್ಬದ ಸಮಯದಲ್ಲಿ ಭಾರತೀಯ ಉತ್ಪನ್ನಗಳ ಬಳಕೆಯನ್ನು ಹೆಚ್ಚಿಸಲು ಮತ್ತು ದೇಶದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಜಗತ್ತಿಗೆ ಪ್ರಚುರಪಡಿಸುವ ಸರ್ಕಾರದ ಪ್ರಯತ್ನಗಳಿಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ‘ಅನುಪಮಾ’ ದೀಪಾವಳಿ ತಯಾರಿಯಲ್ಲಿ ನಿರತರಾಗಿದ್ದಾರೆ. ಬೂಂದಿ ಲಡ್ಡುಗಳನ್ನು ಮಾಡುತ್ತಾ ತನ್ನ ಮನೆಯಲ್ಲಿ ದೀಪಾವಳಿಯ ತಯಾರಿಯ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಳು. ಇದರೊಂದಿಗೆ, ಅವರು ಭಾರತದ ಶಕ್ತಿಯ ಬಗ್ಗೆ ಜನರಿಗೆ ಹೇಳುತ್ತಿದ್ದಾರೆ, ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊದ ಕೊನೆಯಲ್ಲಿ ಹೊಗಳಿದ್ದಾರೆ.

ವೋಕಲ್ ಫಾರ್ ಲೋಕಲ್

‘ಅನುಪಮಾ’ ಅವರ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಇದರಲ್ಲಿ ನೀವು ಕೇಂದ್ರ ಸರ್ಕಾರದ ‘ವೋಕಲ್ ಫಾರ್ ಲೋಕಲ್’, ‘ಮೇಕ್ ಇನ್ ಇಂಡಿಯಾ’, ‘ಡಿಜಿಟಲ್ ಇಂಡಿಯಾ’ ಮತ್ತು ‘ಆತ್ಮನಿರ್ಭರ್ ಭಾರತ್’ಗಳ ಒಂದು ನೋಟವನ್ನು ಪಡೆಯುತ್ತೀರಿ.

ಇದನ್ನೂ ಓದಿ: ಇರಾನ್ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ: ಇಸ್ರೇಲ್ – ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ

ಈ ವೀಡಿಯೊದಲ್ಲಿ, ಅನುಪಮಾ ಅವರು ದೀಪಾವಳಿಯಂದು ಧರಿಸುವ ಹೊಸ ಬಟ್ಟೆ ಮತ್ತು ಶೂಗಳ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವರ ಸ್ಮಾರ್ಟ್‌ಫೋನ್ ಕೂಡ ಭಾರತದಲ್ಲಿ ತಯಾರಿಸಲ್ಪಟ್ಟಿದೆ. ಆಕೆ ಅವುಗಳನ್ನು ಖರೀದಿಸಿದ ನಂತರ ಯುಪಿಐ ಮೂಲಕ ಪಾವತಿ ಮಾಡುತ್ತಾರೆ.

ನಿಮ್ಮ ಸೆಲ್ಫಿಯನ್ನು ಹಂಚಿಕೊಳ್ಳಲಿದ್ದಾರೆ ಪ್ರಧಾನಿ ಮೋದಿ

ದೇಶದ ಜನರು ತಮ್ಮ ಹಬ್ಬಗಳನ್ನು ಈ ರೀತಿ ಆಚರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಅವರು ದೀಪಾವಳಿಗೆ ‘ವೋಕಲ್ ಫಾರ್ ಲೋಕಲ್’ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದೂ ಮನವಿ ಮಾಡಿದ್ದಾರೆ. ಸಾಮಾನ್ಯ ಜನರು ತಮ್ಮ ಸೆಲ್ಫಿಗಳನ್ನು ಅಂತಹ ಉತ್ಪನ್ನಗಳು ಅಥವಾ ಕುಶಲಕರ್ಮಿಗಳೊಂದಿಗೆ ‘ನಮೋ ಆಪ್’ನಲ್ಲಿ ಹಂಚಿಕೊಳ್ಳಬಹುದಾಗಿದೆ. ಇದರಲ್ಲಿ ಆಯ್ದ ಕೆಲವನ್ನು ಪ್ರಧಾನಿಯವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:25 pm, Mon, 6 November 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್