Waqf Bill: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಮುಂದಾದ ಕಾಂಗ್ರೆಸ್
ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀರಿಸಿದ ನಂತರ ಈ ಬಗ್ಗೆ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಕೂಡ ವಿರೋಧಿಸಿತ್ತು. ಇದೀಗ ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ಸಮರ ಸರಿದೆ. ಇದೀಗ ಕಾಂಗ್ರೆಸ್ ಈ ಮಸೂದೆಯನ್ನು ವಿರೋಧಿಸಿದ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ದೆಹಲಿ, ಏ.5: ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ (Waqf Bill) ಮಂಡಿಸಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈ ಬಗ್ಗೆ ಇದೀಗ ಭಾರೀ ಬಿಸಿಬಿಸಿ ಚರ್ಚೆಗಳು ನಡೆಯುತ್ತಿದೆ. ಮಸೂದೆ ಮಂಡಿಸಿದ ನಂತರ ವಿರೋಧ ಪಕ್ಷಗಳು ಮೋದಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿದೆ. ಇದೀಗ ಈ ವಸೂದೆಯನ್ನು ವಿರೋಧಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದ ಈ ನಿರ್ಧಾರವನ್ನು ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಿದೆ. ಶೀಘ್ರದಲ್ಲಿ ಈ ಮಸೂದೆಯನ್ನು ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿಕೊಂಡಿದೆ. ವಕ್ಫ್ (ತಿದ್ದುಪಡಿ) ಮಸೂದೆಯನ್ನು ಶುಕ್ರವಾರ ಮುಂಜಾನೆ ಸಂಸತ್ತು ಅಂಗೀಕರಿಸಿತು. ರಾಜ್ಯಸಭೆ ಮಧ್ಯರಾತ್ರಿ ಈ ಮಸೂದೆಯನ್ನು ಅಂಗೀರಿಸಿತು.
ಇನ್ನು ಈ ಮಸೂಸೆ ಕಾನೂನಾಗಲು, ರಾಷ್ಟ್ರಪತಿಗಳ ಸಹಿ ಅಗತ್ಯವಿದೆ, ಅದು ಇನ್ನೂ ಬಾಕಿ ಇದೆ. ವಕ್ಫ್ (ತಿದ್ದುಪಡಿ) ಮಸೂದೆ ಬಗ್ಗೆ ನಾನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿಲಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಭಾರತದ ಸಂವಿಧಾನದಲ್ಲಿರುವ ತತ್ವಗಳು, ನಿಬಂಧನೆಗಳು ಮತ್ತು ಅಭ್ಯಾಸಗಳ ಮೇಲೆ ಮೋದಿ ಸರ್ಕಾರದ ದಾಳಿ ಮಾಡುತ್ತಿದೆ. ಅದನ್ನು ಖಂಡಿತವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು.
ಇನ್ನು ಈ ಮಸೂದೆಯಲ್ಲಿ ಭಾರೀ ಬಹುಮತದಿಂದ ಲೋಕಸಭೆಯಲ್ಲಿ ಅಂಗೀಕರವಾಗಿತ್ತು. ಇದರ ಜತೆಗೆ ವಿರೋಧ ಪಕ್ಷಗಳ ಗದ್ದಲದ ನಡುವೆಯೂ ರಾಜ್ಯಸಭೆಯಲ್ಲೂ ಅಂಗೀಕರವಾಗಿದೆ. ರಾಜ್ಯಸಭೆಯಲ್ಲಿ 128 ಪರವಾಗಿದ್ದಾರೆ. ಈ ಮಸೂದೆಗೆ 95 ವಿರೋಧ ಇತ್ತು. ಲೋಕಸಭೆಯಲ್ಲಿ 288 ಸಂಸದರ ಈ ಮಸೂದೆ ಒಪ್ಪಿಗೆ ನೀಡಿದ್ರೆ, 232 ಸಂಸದರು ಈ ಮಸೂದೆಯ ವಿರುದ್ಧ ಮತ ಚಲಾಯಿಸಿದ್ದಾರೆ. ಇದೀಗ ದೇಶದಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಈ ಮಸೂದೆಯನ್ನು ವಿರೋಧಿಸಿದರೆ, ಬಿಜೆಪಿ ಇದು ಎಲ್ಲರೂ ಒಗ್ಗೂಡಿಸುತ್ತದೆ. ಎಲ್ಲ ಆಸ್ತಿಯನ್ನು ಸಂರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ವಕ್ಫ್ ವ್ಯಾಪ್ತಿಯಿಂದ ಬುಡಕಟ್ಟು ಜನಾಂಗದ ಭೂಮಿ ಹೊರಕ್ಕೆ, ಕೇಂದ್ರದ ನಿರ್ಧಾರ ಸ್ವಾಗತಿಸಿದ ವನವಾಸಿ ಕಲ್ಯಾಣ ಆಶ್ರಮ
ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಈ ಬಗ್ಗೆ ಭಾರೀ ಗದ್ದಲವನ್ನು ಸೃಷ್ಟಿಸಿದೆ. ಗುರುವಾರ ನಡೆದ ರಾಜ್ಯಸಭೆ ಚರ್ಚೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಮಸೂದೆಯನ್ನು ವಾಪಸ್ಸು ಪಡೆಯುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದರು. ಇದು ಸಂವಿಧಾನಕ್ಕೆ ವಿರೋಧವಾಗಿದೆ ಎಂದು ಹೇಳಿದರು. ನೀವು ಮಾಡುತ್ತಿರುವುದು ಒಳ್ಳೆಯದಲ್ಲ, ಇದು ದೇಶದ ಜನರನ್ನು ಗೊಂದಲಕ್ಕೆ ಹಾಗೂ ವಿವಾದಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:59 am, Sat, 5 April 25