Sign In

By signing in or creating an account, you agree with Associated Broadcasting Company's Terms & Conditions and Privacy Policy.

Waqf Bill: ನಾಳೆ ವಕ್ಫ್ ಮಸೂದೆ ಮಂಡನೆ; ಮುಂದಿನ 3 ದಿನ ಕಾಂಗ್ರೆಸ್ ಲೋಕಸಭಾ ಸಂಸದರಿಗೆ ವಿಪ್ ಜಾರಿ

ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಗೂ ಮುನ್ನ ಕಾಂಗ್ರೆಸ್ ತನ್ನ ಲೋಕಸಭಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಈ ಮಸೂದೆಯ ಕುರಿತು ನಾಳೆ (ಬುಧವಾರ) 8 ಗಂಟೆಗಳ ಕಾಲ ಚರ್ಚೆ ನಡೆಯಲಿದೆ. ವಿರೋಧ ಪಕ್ಷದ ಸಭಾತ್ಯಾಗದ ಹೊರತಾಗಿಯೂ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತವು ವಕ್ಫ್ ಮಸೂದೆಯ ಅಂಗೀಕಾರಕ್ಕೆ ಅವಕಾಶ ನೀಡುತ್ತದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳವರೆಗೆ ತನ್ನ ಲೋಕಸಭಾ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಮೋದಿ ಸರ್ಕಾರ ಸ್ಪಷ್ಟಪಡಿಸಿದ ನಂತರ ಕಾಂಗ್ರೆಸ್ ಪಕ್ಷವು ಮೂರು ಸಾಲಿನ ವಿಪ್ ಜಾರಿ ಮಾಡಿದೆ.

Waqf Bill: ನಾಳೆ ವಕ್ಫ್ ಮಸೂದೆ ಮಂಡನೆ; ಮುಂದಿನ 3 ದಿನ ಕಾಂಗ್ರೆಸ್ ಲೋಕಸಭಾ ಸಂಸದರಿಗೆ ವಿಪ್ ಜಾರಿ
Rahul Gandhi In Parliament
Follow us
ಸುಷ್ಮಾ ಚಕ್ರೆ
| Updated By: Digi Tech Desk

Updated on:Apr 02, 2025 | 10:09 AM

ನವದೆಹಲಿ, ಏಪ್ರಿಲ್ 1: ಮೋದಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ( Waqf Amendment Bill)  ತರುವ ಮುನ್ನ, ಕಾಂಗ್ರೆಸ್ ಇಂದು ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ (Congress) ಸಂಸದರು ಸದನದಲ್ಲಿ ಇರಲೇಬೇಕೆಂದು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ವಿವಾದಾತ್ಮಕ ವಕ್ಫ್  ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಎನ್​ಡಿಎ ಸರ್ಕಾರ ಸ್ಪಷ್ಟಪಡಿಸಿದ ನಂತರ ಕಾಂಗ್ರೆಸ್ ಪಕ್ಷವು 3 ಸಾಲಿನ ವಿಪ್ ಜಾರಿಗೊಳಿಸಿದೆ.

ಮೋದಿ ಸರ್ಕಾರ ವಕ್ಫ್ ಮಸೂದೆ ತಿದ್ದುಪಡಿಗಳನ್ನು ತರುವ ಮುನ್ನ ಕಾಂಗ್ರೆಸ್ ಇಂದು ಲೋಕಸಭೆಯಲ್ಲಿರುವ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿ, ಮುಂದಿನ 3 ದಿನಗಳವರೆಗೆ ಸದನದಲ್ಲಿ ಅವರ ಉಪಸ್ಥಿತಿ ಇರಲೇಬೇಕೆಂದು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ (ಏಪ್ರಿಲ್ 2) ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದ ನಂತರ ಕಾಂಗ್ರೆಸ್ ಪಕ್ಷವು ಮೂರು ಸಾಲಿನ ವಿಪ್ ಜಾರಿ ಮಾಡಿದೆ.

ಇದನ್ನೂ ಓದಿ: ಏಪ್ರಿಲ್ 2ರಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಕಾನೂನನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿರುವ ಸರ್ಕಾರ ಮತ್ತು ಪ್ರಸ್ತಾವಿತ ಕಾನೂನನ್ನು ಅಸಂವಿಧಾನಿಕ ಎಂದು ಖಂಡಿಸುವಲ್ಲಿ ವಿರೋಧ ಪಕ್ಷದ ಒಗ್ಗಟ್ಟಿನ ನಡುವೆ ಇದು ಪ್ರಮುಖ ಘರ್ಷಣೆಗೆ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯ ಎಲ್ಲಾ ಪ್ರಮುಖ ಪಕ್ಷಗಳ ನಾಯಕರನ್ನು ಒಳಗೊಂಡ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ (ಬಿಎಸಿ) 8 ಗಂಟೆಗಳ ಚರ್ಚೆಗೆ ಒಪ್ಪಿಗೆ ನೀಡಿದೆ ಎಂದು ಅಲ್ಪಸಂಖ್ಯಾತರು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಮತ್ತು ಇತರ ಹಲವಾರು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಬಿಎಸಿ ಸಭೆಯಿಂದ ಹೊರನಡೆದಿದ್ದರು. ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಸಭೆಯಿಂದ ಹೊರನಡೆದಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ತಮ್ಮ ಧ್ವನಿಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು ಮತ್ತು ವಿರೋಧ ಪಕ್ಷಗಳು ಚರ್ಚೆಗೆ ಹೆಚ್ಚಿನ ಸಮಯವನ್ನು ಬಯಸುತ್ತಿವೆ ಎಂದು ಹೇಳಿದರು. ಮಣಿಪುರದ ಪರಿಸ್ಥಿತಿ ಮತ್ತು ಮತದಾರರ ಫೋಟೋ ಗುರುತಿನ ಚೀಟಿಗಳ ಮೇಲಿನ ಗದ್ದಲ ಸೇರಿದಂತೆ ಹೆಚ್ಚಿನ ವಿಷಯಗಳನ್ನು ಸದನವು ಕೈಗೆತ್ತಿಕೊಳ್ಳಬೇಕೆಂದು ಅವರು ಬಯಸಿದ್ದರು.

ಇದನ್ನೂ ಓದಿ: ಬಸನಗೌಡ ಯತ್ನಾಳ್ ಬಗ್ಗೆ ಹೇಳಿಕೆ ನೀಡದಿರಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ: ಬಿ ಶ್ರೀರಾಮುಲು

ಆದರೆ, ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸಂಖ್ಯಾಬಲವು ಹೆಚ್ಚು ಅನುಕೂಲಕರವಾಗಿರುವುದರಿಂದ ರಾಜಕೀಯ ಬಿಸಿ ಮತ್ತು ಚರ್ಚೆಯ ಅವಧಿಯು ಅಂತಿಮ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವ ಸಾಧ್ಯತೆಯಿಲ್ಲ. ಲೋಕಸಭೆಯಲ್ಲಿ ವಿರೋಧ ಪಕ್ಷದ ಬಲ ಕಡಿಮೆ. ಅಲ್ಲಿ NDA ಪ್ರಸ್ತುತ 542 ಸಂಸದರಲ್ಲಿ 293 ಸಂಸದರನ್ನು ಹೊಂದಿದೆ. ಬಿಜೆಪಿ ಹಲವು ಬಾರಿ ಸ್ವತಂತ್ರ ಸದಸ್ಯರು ಮತ್ತು ಪಕ್ಷಗಳ ಬೆಂಬಲವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Tue, 1 April 25

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...