ನಿಮ್ಮ 4ನೇ ತಲೆಮಾರಿನವರಿಗೂ 370ನೇ ವಿಧಿ ಮರಳಿ ತರಲು ಸಾಧ್ಯವಿಲ್ಲ; ರಾಹುಲ್ ಗಾಂಧಿಗೆ ಅಮಿತ್ ಶಾ ಎಚ್ಚರಿಕೆ

|

Updated on: Nov 09, 2024 | 5:58 PM

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಬುಡಕಟ್ಟು ಜನಾಂಗದ ಹಕ್ಕುಗಳನ್ನು ಪ್ರತಿಪಾದಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಜೆಎಂಎಂ ಸುಳ್ಳುಗಳನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ರಾಹುಲ್ ಗಾಂಧಿಯ ನಾಲ್ಕನೇ ತಲೆಮಾರಿನವರಿಗೂ 370ನೇ ವಿಧಿಯನ್ನು ಮರು ತರಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ನಿಮ್ಮ 4ನೇ ತಲೆಮಾರಿನವರಿಗೂ 370ನೇ ವಿಧಿ ಮರಳಿ ತರಲು ಸಾಧ್ಯವಿಲ್ಲ; ರಾಹುಲ್ ಗಾಂಧಿಗೆ ಅಮಿತ್ ಶಾ ಎಚ್ಚರಿಕೆ
ಅಮಿತ್ ಶಾ
Follow us on

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶನಿವಾರ) ಆರೋಪಿಸಿದ್ದಾರೆ. ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಅಮಿತ್ ಶಾ ಗುಡುಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ. ಇದು ನಂಬಿಕೆಯ ಪ್ರಶ್ನೆಯಾಗಿದೆ. ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಬಿ.ಆರ್ ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಗೆ ಅವಮಾನ ಮಾಡಿದ್ದೀರಿ ಎಂದು ಅಮಿತ್ ಶಾ ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ರೂ. ಲೂಟಿ ಮಾಡಿದೆ; ಮೋದಿ ಆರೋಪ

ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಅಪಹಾಸ್ಯ ಮಾಡಿದೆ ಎಂದು ಪಲಮುದಲ್ಲಿ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಆರೋಪಿಸಿದ್ದಾರೆ. ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದಿದ್ದಾರೆ.


ಜಾರ್ಖಂಡ್‌ನ ಜೆಎಂಎಂ ದೇಶದ “ಅತ್ಯಂತ ಭ್ರಷ್ಟ ಸರ್ಕಾರ” ಎಂದು ಅಮಿತ್ ಶಾ ಟೀಕಿಸಿದ್ದಾರೆ. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ