BBC Documentary: ಸುಪ್ರೀಂಕೋರ್ಟ್ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದೆ: ಕಿರಣ್ ರಿಜಿಜು
ಸಾಕ್ಷ್ಯಚಿತ್ರದ ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದುಹಾಕುವ ಆದೇಶದ ಕುರಿತು ವಕೀಲ ಪ್ರಶಾಂತ್ ಭೂಷಣ್, ಪತ್ರಕರ್ತ ಎನ್ ರಾಮ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರ ಪ್ರತ್ಯೇಕ ಅರ್ಜಿಯನ್ನು ಈ ವಾರದ ಕೊನೆಯಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು.
ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆ ನಡೆಸುವ ಮೂಲಕ “ಸುಪ್ರೀಂಕೋರ್ಟ್ (Supreme Court) ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಪ್ರಶ್ನಿಸಿದ ಬಿಬಿಸಿ ಸರಣಿಯ ತುಣುಕುಗಳ ಹಂಚಿಕೆಯನ್ನು ನಿರ್ಬಂಧಿಸುವ ಸರ್ಕಾರದ ಆದೇಶದ ವಿರುದ್ಧದ ಮನವಿಗಳನ್ನು ಸುಪ್ರೀಂಕೋರ್ಟ್ ಮುಂದಿನ ವಾರ ಪರಿಗಣಿಸಲಿದೆ.
ಸಾವಿರಾರು ಸಾಮಾನ್ಯ ನಾಗರಿಕರು ನ್ಯಾಯಕ್ಕಾಗಿ ಬೇಡುತ್ತಾ ವಿಚಾರಣೆಯ ದಿನಾಂಕಗಳನ್ನು ಕಾಯುತ್ತಿರುವಾಗ ಸುಪ್ರೀಂಕೋರ್ಟ್ ತಮ್ಮ ಅಮೂಲ್ಯ ಸಮಯವನ್ನು ಹೀಗೆ ವ್ಯರ್ಥ ಮಾಡಬಾರದು ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.
Precious time of the Courts should not be wasted by such kinds of frivolous matters.https://t.co/BG3j7mmOFD
— Kiren Rijiju (@KirenRijiju) January 29, 2023
” India: The Modi Question ” ಎಂಬ ಶೀರ್ಷಿಕೆಯ ಸರಣಿಯನ್ನು ಸರ್ಕಾರವು ಪಕ್ಷಪಾತದ ಅಪಪ್ರಚಾರದ ತುಣುಕು ಎಂದು ತಳ್ಳಿಹಾಕಿದೆ.ಅಷ್ಟೇ ಅಲ್ಲದೆ ಇದು ಸಾಮಾಜಿಕ ಮಾಧ್ಯಮದಲ್ಲಿ ಅದರ ಯಾವುದೇ ಕ್ಲಿಪ್‌ಗಳನ್ನು ಹಂಚಿಕೊಳ್ಳುವುದನ್ನು ನಿರ್ಬಂಧಿಸಿದೆ. ಐಟಿ ನಿಯಮಗಳ ಅಡಿಯಲ್ಲಿ ಸರ್ಕಾರಕ್ಕೆ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿಕೊಂಡು ವಿಡಿಯೊ ತುಣುಕುಗಳನ್ನು ಹಂಚಿಕೊಳ್ಳುವುದನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸರ್ಕಾರದ ಸಲಹೆಗಾರ ಕಾಂಚನ್ ಗುಪ್ತಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಸಾಕ್ಷ್ಯಚಿತ್ರವನ್ನು ಹೆಚ್ಚು ಶ್ರಮವಹಿಸಿ ಸಂಶೋಧನೆ ಮಾಡಲಾಗಿದೆ. ಇದರಲ್ಲಿ ಬಿಜೆಪಿಯ ಪ್ರತಿಕ್ರಿಯೆಗಳು ಸೇರಿದಂತೆ ಜನರ ಅಭಿಪ್ರಾಯಗಳನ್ನೂ ಕೊಡಲಾಗಿದೆ. ಸುಪ್ರೀಂಕೋರ್ಟ್ ಮುಂದಿನ ವಾರ ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ತಿಳಿಸಿದ್ದಾರೆ.
ಎಂಎಲ್ ಶರ್ಮಾ ಎಂಬ ವಕೀಲರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯೊಂದರಲ್ಲಿ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ. ಸಾಕ್ಷ್ಯಚಿತ್ರದ ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದುಹಾಕುವ ಆದೇಶದ ಕುರಿತು ವಕೀಲ ಪ್ರಶಾಂತ್ ಭೂಷಣ್, ಪತ್ರಕರ್ತ ಎನ್ ರಾಮ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರ ಪ್ರತ್ಯೇಕ ಅರ್ಜಿಯನ್ನು ಈ ವಾರದ ಕೊನೆಯಲ್ಲಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು.
ಭಾರತದಾದ್ಯಂತ ವಿದ್ಯಾರ್ಥಿಗಳ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ನಿಷೇಧವನ್ನು ಪ್ರತಿಭಟಿಸಿ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನಗಳನ್ನು ಆಯೋಜಿಸಿವೆ. ಅನೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಾಲೇಜು ಅಧಿಕಾರಿಗಳು ಮತ್ತು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು ಕೆಲವರನ್ನು ಸ್ವಲ್ಪ ಸಮಯದವರೆಗೆ ಬಂಧಿಸಲಾಗಿದೆ
ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯ ತನಿಖೆಯ ನಂತರ 2012 ರಲ್ಲಿ ಪಿಎಂ ಮೋದಿ ಅವರನ್ನು ದೋಷಮುಕ್ತಗೊಳಿಸಲಾಯಿತು. ಅದೇ ವೇಳೇ ಕಳೆದ ವರ್ಷ ಅವರ ದೋಷಮುಕ್ತಗೊಳಿಸುವಿಕೆಯನ್ನು ಪ್ರಶ್ನಿಸುವ ಅರ್ಜಿಯನ್ನು ವಜಾಗೊಳಿಸಲಾಯಿತು. ಕಳೆದ ವಾರ ವಿದೇಶಾಂಗ ಸಚಿವಾಲಯದ ವಕ್ತಾರರು ಸಾಕ್ಷ್ಯಚಿತ್ರವನ್ನು “ಅಪಪ್ರಚಾರದ ತುಣುಕು” ಎಂದಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:48 pm, Mon, 30 January 23