Watan Ko Jano: ಜಮ್ಮು ಮತ್ತು ಕಾಶ್ಮೀರದ 250 ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

|

Updated on: Dec 24, 2023 | 5:21 PM

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ತಮ್ಮ 'ವತನ್ ಕೋ ಜಾನೋ' ಕಾರ್ಯಕ್ರಮದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಸುಮಾರು 250 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಬಹುತೇಕ ಪ್ರತಿ ಜಿಲ್ಲೆಗಳನ್ನು ಪ್ರತಿನಿಧಿಸುವ  ಈ  250 ವಿದ್ಯಾರ್ಥಿಗಳು ಹಿಂದುಳಿದ ಹಿನ್ನೆಲೆಯಿಂದ ಬಂದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

Watan Ko Jano: ಜಮ್ಮು ಮತ್ತು ಕಾಶ್ಮೀರದ 250 ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
Watan Ko Jano
Image Credit source: ANI
Follow us on

ಹೊಸದಿಲ್ಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿಸೆಂಬರ್ 24) ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ‘ವತನ್ ಕೋ ಜಾನೋ’ ಕಾರ್ಯಕ್ರಮದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಸುಮಾರು 250 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಬಹುತೇಕ ಪ್ರತಿ ಜಿಲ್ಲೆಗಳನ್ನು ಪ್ರತಿನಿಧಿಸುವ  ಈ  250 ವಿದ್ಯಾರ್ಥಿಗಳು ಹಿಂದುಳಿದ ಹಿನ್ನೆಲೆಯಿಂದ ಬಂದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ವಿದ್ಯಾರ್ಥಿಗಳ ಗುಂಪು ದೇಶದ ಹಲವಾರು ಭಾಗಗಳಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ಜೈಪುರ, ಅಜ್ಮೀರ್ ಮತ್ತು ದೆಹಲಿಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ದೇಶದ ಸಾಂಸ್ಕೃತಿಕ ಮತ್ತು ಸಾಮಾಜಿಕ ವೈವಿಧ್ಯತೆಗೆ ಯುವಜನತೆಯನ್ನು ಪರಿಚಯಿಸುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಕಾರ್ಯದರ್ಶಿ ಶೀತಲ್ ನಂದಾ ಅವರು 10 ಮಂದಿ ಸಂಯೋಜಕರು ಮತ್ತು ಉಸ್ತುವಾರಿಗಳೊಂದಿಗೆ ಧ್ವಜಾರೋಹಣ ಮಾಡಿದರು. ಸುದ್ದಿ ಸಂಸ್ಥೆ ಎಎನ್‌ಐ ಮೋದಿ ಮಕ್ಕಳೊಂದಿಗೆ ಸಂವಾದ ನಡೆಸುತ್ತಿರುವ ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದೆ. 250 ವಿದ್ಯಾರ್ಥಿಗಳು ಇಲ್ಲಿಯವರೆಗೆ ಜೈಪುರ, ಅಜ್ಮೀರ್ ಮತ್ತು ದೆಹಲಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭಯೋತ್ಪಾದಕರ ಗುಂಡಿಗೆ ನಿವೃತ್ತ ಪೊಲೀಸ್​ ಅಧಿಕಾರಿ ಬಲಿ

ಕೋಲ್ಕತ್ತಾದಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ಕೋರಿದ ಮೋದಿ:

ಕೋಲ್ಕತ್ತಾದಲ್ಲಿ ಭಾನುವಾರ ನಡೆದ ‘ಲೋಕೇ ಕೊಂಥೆ ಗೀತಾ ಪಥ’ ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, ಬೃಹತ್ ಜನಸಮೂಹದಿಂದ ಭಗವದ್ಗೀತೆ ಪಠಣವು ಸಾಮಾಜಿಕ ಸಾಮರಸ್ಯವನ್ನು ಹೆಚ್ಚಿಸುವುದಲ್ಲದೆ, ಸಾಮಾಜಿಕ ಸೌಹಾರ್ದತೆಯನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:16 pm, Sun, 24 December 23