Chandrayaan 3: ಇಸ್ರೋ ಚಾನೆಲ್​ನಲ್ಲಿ ಚಂದ್ರಯಾನ 3 ಲೈವ್ ಪ್ರಾರಂಭ; ನೋಡಲು ನೇರ ಲಿಂಕ್ ಇಲ್ಲಿದೆ

ವೀಕ್ಷಿಸಲು ಉತ್ಸುಕರಾಗಿರುವವರಿಗೆ, ಇಸ್ರೋ ಚಾನೆಲ್​ಗಳಲ್ಲಿ ಚಂದ್ರಯಾನ 3 ಲೈವ್ ಪ್ರಾರಂಭವಾಗಿದೆ. ಇಸ್ರೋದ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಮತ್ತು ಡಿಡಿ ನ್ಯಾಷನಲ್ ಟಿವಿಯಲ್ಲಿ ಲ್ಯಾಂಡಿಂಗ್ ಕಾರ್ಯಾಚರಣೆಗಳ ನೇರ ಪ್ರಸಾರ ವೀಕ್ಷಿಸಬಹುದು.

Chandrayaan 3: ಇಸ್ರೋ ಚಾನೆಲ್​ನಲ್ಲಿ ಚಂದ್ರಯಾನ 3 ಲೈವ್ ಪ್ರಾರಂಭ; ನೋಡಲು ನೇರ ಲಿಂಕ್ ಇಲ್ಲಿದೆ
ಚಂದ್ರಯಾನ 3 ಲೈವ್
Follow us
|

Updated on:Aug 23, 2023 | 5:41 PM

ಬಾಹ್ಯಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 (Chandrayaan 3) ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ ರೆಡಿಯಾಗಿದೆ. ಇಂದು (ಆಗಸ್ಟ್ 23) ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವ ಮೇಲ್ಮೈ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲು ಸಮಯ ನಿಗದಿ ಮಾಡಲಾಗಿದೆ. ಆದ್ರೆ ಸಂಜೆ 5.45ಕ್ಕೆ ಲ್ಯಾಂಡರ್ ಇಳಿಯುವ ಪ್ರಕ್ರಿಯೆ ಆರಂಭವಾಗಲಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಸೂರ್ಯ ರಶ್ಮಿ ಬಿದ್ದ ಬಳಿಕವಷ್ಟೇ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಹಾಗಾದ್ರೆ, ನಿಜಕ್ಕೂ ಈ ಪ್ರಕ್ರಿಯೆ ಹೇಗೆ ನಡೆಯುತ್ತೆ ಎನ್ನುವುದನ್ನು ತಿಳಿದುಕೊಳ್ಳಿ.

ವೀಕ್ಷಿಸಲು ಉತ್ಸುಕರಾಗಿರುವವರಿಗೆ, ಇಸ್ರೋ ಚಾನೆಲ್​ಗಳಲ್ಲಿ ಚಂದ್ರಯಾನ 3 ಲೈವ್ ಪ್ರಾರಂಭವಾಗಿದೆ. ಇಸ್ರೋದ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಮತ್ತು ಡಿಡಿ ನ್ಯಾಷನಲ್ ಟಿವಿಯಲ್ಲಿ ಲ್ಯಾಂಡಿಂಗ್ ಕಾರ್ಯಾಚರಣೆಗಳ ನೇರ ಪ್ರಸಾರ ವೀಕ್ಷಿಸಬಹುದು.

ಚಂದ್ರಯಾನ-3 ಮಿಷನ್ ಅನ್ನು ಲೈವ್ ಆಗಿ ವೀಕ್ಷಿಸಲು ನೇರ ಲಿಂಕ್:

ಚಂದ್ರಯಾನ-3 ಮಿಷನ್ ಅನ್ನು ಪುರುಷರೇ ಮುನ್ನಡೆಸಿದರೂ, ಚಂದ್ರಯಾನ-2 ಮಿಷನ್‌ಗಿಂತ ಭಿನ್ನವಾಗಿ, ಸಾಕಷ್ಟು ಸಂಖ್ಯೆಯ ಮಹಿಳೆಯರು ಈ ಯೋಜನೆಯ ಹಿಂದೆ ಇದ್ದಾರೆ. ಚಂದ್ರಯಾನ-3 ಮಿಷನ್‌ನಲ್ಲಿ ಸುಮಾರು 54 ಮಹಿಳಾ ಎಂಜಿನಿಯರ್‌ಗಳು/ವಿಜ್ಞಾನಿಗಳು ನೇರವಾಗಿ ಕೆಲಸ ಮಾಡಿದ್ದಾರೆ. ಈ ಮಹಿಳೆಯರು ವಿವಿಧ ಕೇಂದ್ರಗಳಲ್ಲಿ ಕೆಲಸ ಮಾಡಿರುವ ವಿವಿಧ ಸಹಾಯಕ ಮತ್ತು ಉಪ ಯೋಜನಾ ನಿರ್ದೇಶಕರು ಮತ್ತು ಯೋಜನಾ ವ್ಯವಸ್ಥಾಪಕರು ಆಗಿದ್ದಾರೆ.

ಚಂದ್ರಯಾನ-3 ರ ಎಲ್ಲಾ ಲೈವ್ ಅಪ್‌ಡೇಟ್‌ಗಳನ್ನು ಇಲ್ಲಿ ನೋಡಿ

ಇದನ್ನೂ ಓದಿ: ಚಂದ್ರಯಾನ 3 ಚಂದ್ರನ ಗಣಿಗಾರಿಕೆಗೆ ದಾರಿ ಮಾಡಿಕೊಡಲಿದೆಯೇ? ಚಂದ್ರನಲ್ಲಿರುವ ಸಂಪನ್ಮೂಲಗಳ ಪ್ರಯೋಜನಗಳನ್ನು ತಿಳಿಯಿರಿ

ಚಂದ್ರಯಾನ-3 ಇಂದು ಸಂಜೆ ಸುಮಾರು 6:04 ಗಂಟೆಗೆ ಚಂದ್ರನನ್ನು ಸ್ಪರ್ಶಿಸಲಿದೆ ಎಂದು ಇಸ್ರೋ ತಿಳಿಸಿದೆ. ಇಡೀ ದೇಶವು ಚಂದ್ರಯಾನ-3 ರ ಸುರಕ್ಷಿತ ಇಳಿಯುವಿಕೆಯ ನಿರೀಕ್ಷೆಯಲ್ಲಿದೆ. ಈ ಗುರಿಯನ್ನು ಸಾಧಿಸಲು ನಮ್ಮ ಇಸ್ರೋ ವಿಜ್ಞಾನಿಗಳು ಪಟ್ಟಿರುವ ಶ್ರಮ ಶೀಘ್ರದಲ್ಲೇ ಫಲ ನೀಡುವ ನಿರೀಕ್ಷೆಯಿದೆ. ಒಟ್ಟಾರೆಯಾಗಿ ಚಂದ್ರಯಾನ-3 ತಂಡವು ಈ ಯೋಜನೆಯಲ್ಲಿ ಸಾಕಷ್ಟು ಆಕಾಂಕ್ಷೆಗಳನ್ನು ಹೂಡಿದೆ. ಈ ಮೂನ್ ಮಿಷನ್ ಚಂದ್ರನ ಮೇಲೆ ಸುರಕ್ಷಿತ ಲ್ಯಾಂಡಿಂಗ್ ಮತ್ತು ಅದರ ಮೇಲ್ಮೈಯನ್ನು ಅನ್ವೇಷಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:39 pm, Wed, 23 August 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ