PM Modi speech live: ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ

Independence Day PM Modi speech live: ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಸಡಗರ ಗರಿಗೆದರಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ. ದೆಹಲಿಯ ಕೆಂಪುಕೋಟೆ ಮೇಲೆ 11ನೇ ಬಾರಿ ಧ್ವಜಾರೋಹಣ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

PM Modi speech live: ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ
ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ
Follow us
Ganapathi Sharma
|

Updated on:Aug 15, 2024 | 7:36 AM

ನವದೆಹಲಿ, ಆಗಸ್ಟ್ 15: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಆಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿ ವೀಕ್ಷಿಸಬಹುದಾಗಿದೆ. ಐತಿಹಾಸಿಕ ಕೆಂಪುಕೋಟೆಯಲ್ಲಿ 11ನೇ ಬಾರಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ. ಜವಾಹರ್​ಲಾಲ್ ನೆಹರು, ಇಂದಿರಾಗಾಂಧಿ ಬಳಿಕ ಕೆಂಪುಕೋಟೆಯಲ್ಲಿ ಸತತ 11ನೇ ಬಾರಿ ಸ್ವಾತಂತ್ರ್ಯ ದಿನದ ಭಾಷಣಮಾಡುತ್ತಿರುವ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ವಿಕಸಿತ್ ಭಾರತ್-2047ರ ಥೀಮ್​ ಅಡಿಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ಕೂಡ ನಡೆಸಲಾಗುತ್ತಿದೆ.

ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 6,000 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಭಾಗವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದವರಿಗೆ ಆದ್ಯತೆಯನ್ನ ನೀಡಲಾಗಿದೆ. ರೈತರು, ಯುವಕರು, ಮಹಿಳೆಯರು ಹಾಗೂ ಬಡವರನ್ನು ಭಾರತದ 4 ಸ್ತಂಭಗಳು ಎಂದು ಗುರುತಿಸಿಸಲಾಗಿದೆ. ಗಣ್ಯಾತಿ ಗಣ್ಯರೂ ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಮೋದಿ ಭಾಷಣೆ ವೀಕ್ಷಣೆಗೆ ಎಲ್​ಇಡಿ ಪರದೆ ಅವಳಡಿಸಲಾಗಿದೆ.

ಇದನ್ನೂ ಓದಿ: Independence Day 2024: ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಗೆ 6,000 ಅತಿಥಿಗಳಿಗೆ ಆಹ್ವಾನ; ಹೇಗಿರಲಿದೆ ಸಂಭ್ರಮಾಚರಣೆ?

78ನೇ ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕರಿನೆರಳು ಬಿದ್ದಿರುವುದರಿಂದ ದೆಹಲಿ ಅಥವಾ ಪಂಜಾಬ್​ನಲ್ಲಿ ದಾಳಿ ನಡೆಯೋ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ಈಗಾಗಲೇ ನೀಡಿತ್ತು. ಹೀಗಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಹದ್ದಿನ ಕಣ್ಣಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Thu, 15 August 24

ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ