ನವದೆಹಲಿ, ಆಗಸ್ಟ್ 15: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಆಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿ ವೀಕ್ಷಿಸಬಹುದಾಗಿದೆ.
ಐತಿಹಾಸಿಕ ಕೆಂಪುಕೋಟೆಯಲ್ಲಿ 11ನೇ ಬಾರಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ. ಜವಾಹರ್ಲಾಲ್ ನೆಹರು, ಇಂದಿರಾಗಾಂಧಿ ಬಳಿಕ ಕೆಂಪುಕೋಟೆಯಲ್ಲಿ ಸತತ 11ನೇ ಬಾರಿ ಸ್ವಾತಂತ್ರ್ಯ ದಿನದ ಭಾಷಣಮಾಡುತ್ತಿರುವ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ವಿಕಸಿತ್ ಭಾರತ್-2047ರ ಥೀಮ್ ಅಡಿಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ಕೂಡ ನಡೆಸಲಾಗುತ್ತಿದೆ.
ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 6,000 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಭಾಗವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದವರಿಗೆ ಆದ್ಯತೆಯನ್ನ ನೀಡಲಾಗಿದೆ. ರೈತರು, ಯುವಕರು, ಮಹಿಳೆಯರು ಹಾಗೂ ಬಡವರನ್ನು ಭಾರತದ 4 ಸ್ತಂಭಗಳು ಎಂದು ಗುರುತಿಸಿಸಲಾಗಿದೆ. ಗಣ್ಯಾತಿ ಗಣ್ಯರೂ ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಮೋದಿ ಭಾಷಣೆ ವೀಕ್ಷಣೆಗೆ ಎಲ್ಇಡಿ ಪರದೆ ಅವಳಡಿಸಲಾಗಿದೆ.
78ನೇ ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕರಿನೆರಳು ಬಿದ್ದಿರುವುದರಿಂದ ದೆಹಲಿ ಅಥವಾ ಪಂಜಾಬ್ನಲ್ಲಿ ದಾಳಿ ನಡೆಯೋ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ಈಗಾಗಲೇ ನೀಡಿತ್ತು. ಹೀಗಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:29 am, Thu, 15 August 24