Masa Shivaratri: ಉತ್ತರಾಖಂಡದ ಹಿಮಾಚ್ಛಾದಿತ ಬೆಟ್ಟಗಳ ಮಧ್ಯೆ ಪಿಥೋರಗಢದ ಪಾರ್ವತಿ ಕುಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ, ವೀಕ್ಷಿಸಿ

ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳ ವೇಗವನ್ನು ಹೆಚ್ಚಿಸಲು ನಾನು ಪಿಥೋರಗಢದಲ್ಲಿ ಹಲವಾರು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. “ಗುಂಜಿ ಗ್ರಾಮದ ಜನರೊಂದಿಗೆ ಸಂವಹನ ನಡೆಸುವ ಉತ್ತಮ ಅವಕಾಶವೂ ನನಗೆ ಸಿಗುತ್ತದೆ. ಪ್ರವಾಸದ ಸಮಯದಲ್ಲಿ ನಾನು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾದ ಪಾರ್ವತಿ ಕುಂಡದ ದರ್ಶನ ಮತ್ತು ಜಾಗೇಶ್ವರ ಧಾಮದಲ್ಲಿ ಪೂಜೆಯನ್ನು ಸಹ ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.

Masa Shivaratri: ಉತ್ತರಾಖಂಡದ ಹಿಮಾಚ್ಛಾದಿತ ಬೆಟ್ಟಗಳ ಮಧ್ಯೆ ಪಿಥೋರಗಢದ ಪಾರ್ವತಿ ಕುಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ, ವೀಕ್ಷಿಸಿ
ಹಿಮಾಚ್ಛಾದಿತ ಬೆಟ್ಟಗಳ ಮಧ್ಯೆ ಪಿಥೋರಗಢದ ಪಾರ್ವತಿ ಕುಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ
Follow us
ಸಾಧು ಶ್ರೀನಾಥ್​
|

Updated on:Oct 14, 2023 | 11:31 AM

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)  ಮಾಸ ಶಿವರಾತ್ರಿ ವಿಶೇಷ ದಿನವಾದ (Masa Shivaratri) ಇಂದು ಗುರುವಾರ ಉತ್ತರಾಖಂಡದ ಪಿಥೋರಗಢದ ಪಾರ್ವತಿ ಕುಂಡದಲ್ಲಿ (Parvati Kund, Pithoragarh, Uttarakhand) ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದರು (Spiritual). ಕುಮಾವೂನ್ ಪ್ರದೇಶಕ್ಕೆ (Kumaon region) ಒಂದು ದಿನದ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಹಲವಾರು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರವಾಸದ ವೇಳೆ ಪ್ರಧಾನಿ ಗುಂಜಿ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ.

ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳ ವೇಗವನ್ನು ಹೆಚ್ಚಿಸಲು ನಾನು ಪಿಥೋರಗಢದಲ್ಲಿ ಹಲವಾರು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. “ಗುಂಜಿ ಗ್ರಾಮದ ಜನರೊಂದಿಗೆ ಸಂವಹನ ನಡೆಸುವ ಉತ್ತಮ ಅವಕಾಶವೂ ನನಗೆ ಸಿಗುತ್ತದೆ. ಪ್ರವಾಸದ ಸಮಯದಲ್ಲಿ ನಾನು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾದ ಪಾರ್ವತಿ ಕುಂಡದ ದರ್ಶನ ಮತ್ತು ಜಗೇಶ್ವರ ಧಾಮದಲ್ಲಿ (Jageshwar Dham) ಪೂಜೆಯನ್ನು ಸಹ ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.

ನೈನಿ ಸೈನಿ ವಿಮಾನ ನಿಲ್ದಾಣದಿಂದ ಸಾರ್ವಜನಿಕ ಸಭೆಯ ಸ್ಥಳಕ್ಕೆ ಪ್ರಯಾಣಿಸುವಾಗ ಉತ್ತರಾಖಂಡದ ಕುಮಾವೂನ್ ಪ್ರದೇಶದ ಸಾಂಸ್ಕೃತಿಕ ತಂಡಗಳು ಭಿತ್ತಿಚಿತ್ರಗಳು ಮತ್ತು ವರ್ಣಚಿತ್ರಗಳಿಂದ ಅಲಂಕರಿಸಲ್ಪಟ್ಟ ನವೀಕರಿಸಿದ 6 ಕಿಮೀ ರಸ್ತೆಯ ಹಲವಾರು ಸ್ಥಳಗಳಲ್ಲಿ ಮೋದಿಗೆ ಸ್ವಾಗತ ಕೋರಲಾಗಿದೆ.

ಮೋದಿ ಅವರು ಜೋಲಿಂಗ್‌ಕಾಂಗ್‌ನಲ್ಲಿ ಶಿವನ ವಾಸಸ್ಥಾನವಾದ ಆದಿ ಕೈಲಾಸ ಶಿಖರದ ದರ್ಶನದೊಂದಿಗೆ ತಮ್ಮ ಭೇಟಿಯನ್ನು ಪ್ರಾರಂಭಿಸಿದ್ದಾರೆ, ಅಲ್ಲಿಂದ ಅವರು ಗುಂಜಿ ಗ್ರಾಮಕ್ಕೆ ತೆರಳುತ್ತಾರೆ. ಅಲ್ಲಿ ಅವರು ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯನ್ನು ಭೇಟಿಯಾಗಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಪ್ರವಾಸವನ್ನು ಉಲ್ಲೇಖಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಅವರು ಜಗೇಶ್ವರ ಧಾಮದಲ್ಲಿ ಭಗವಾನ್ ಶಿವನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಪಿಥೋರಗಢದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Thu, 12 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್