AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ, ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ದೆಹಲಿಗೆ ಸಮರ್ಪಕ ನೀರು ಬಿಡುವಂತೆ ಹರ್ಯಾಣ ಸರ್ಕಾರವನ್ನು ಒತ್ತಾಯಿಸಿ ದೆಹಲಿ ಸಚಿವೆ ಅತಿಶಿ ಆರಂಭಿಸಿದ್ದ ಉಪವಾಸ ಧರಣಿ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ, ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು
ಅತಿಶಿImage Credit source: India Today
ನಯನಾ ರಾಜೀವ್
|

Updated on: Jun 25, 2024 | 8:20 AM

Share

ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಸಚಿವೆ ಅತಿಶಿ(Atishi )ಆರೋಗ್ಯ ಹೆದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಉಪವಾಸದ ನಾಲ್ಕನೇ ದಿನವಾದ ಸೋಮವಾರ ಆಸ್ಪತ್ರೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ, ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ, ಆದರೂ ಅವರು ನಿರಾಕರಿಸಿದ್ದರು.

ಸೋಮವಾರ ರಾತ್ರಿ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣ 43ಕ್ಕೆ ಕುಸಿದಿತ್ತು, ಮಂಗಳವಾರ ಬೆಳಗಿನ ಜಾವ 36ಕ್ಕೆ ಕುಸಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಐದು ದಿನಗಳಿಂದ ಅವರು ಏನನ್ನೂ ತಿಂದಿಲ್ಲ, ಹರ್ಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೂನ್ 21ರಿಂದ ಅತಿಶಿ ತೂಕ ಇಳಿಕೆಯಾಗುತ್ತಿದ್ದು, ನಾಲ್ಕು ದಿನಗಳಲ್ಲಿ 2.2 ಕೆಜಿ ತೂಕ ಇಳಿಕೆಯಾಗಿದೆ.

ಮತ್ತಷ್ಟು ಓದಿ: Water Satyagraha: ದೆಹಲಿ ನೀರಿನ ಬಿಕ್ಕಟ್ಟು: ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

ನನ್ನ ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ ಮತ್ತು ನನ್ನ ತೂಕವು ಕಡಿಮೆಯಾಗಿದೆ. ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ, ಇದು ದೀರ್ಘಾವಧಿಯಲ್ಲಿ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಅತಿಶಿ ಹೇಳಿದರು.

ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಹೇಳಿದರು. ದೆಹಲಿಯು ನೀರಿನ ಕೊರತೆಯನ್ನು ಎದುರಿಸುತ್ತಿರುವಾಗ, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದಿನಕ್ಕೆ 100 ಮಿಲಿಯನ್ ಗ್ಯಾಲನ್ (ಎಂಜಿಡಿ) ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅತಿಶಿ ಆರೋಪಿಸಿದ್ದಾರೆ.

ಇದು ರಾಷ್ಟ್ರ ರಾಜಧಾನಿಯಲ್ಲಿ 28 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಗಳೊಂದಿಗೆ ನೀರಿನ ಕೊರತೆಯ ಸಮಸ್ಯೆ ಉದ್ಭವಿಸಿದೆ.

ದೆಹಲಿ ಜನರು ತಮ್ಮ ದೈನಂದಿನ ನೀರಿನ ಅವಶ್ಯಕತೆಗಳನ್ನು ಪಡೆಯಲು ನೀರಿನ ಟ್ಯಾಂಕರ್‌ಗಳ ಮೊರೆ ಹೋಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ