ಬಿಜೆಪಿ ಸರ್ಕಾರ ಬೇಕೆಂದೇ ದೆಹಲಿಗೆ ನೀರು ಪೂರೈಕೆ ನಿಲ್ಲಿಸಿದೆ; ಆಪ್ ಆರೋಪ

ಯಮುನಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ದೆಹಲಿಗೆ ನೀರಿನ ಬಿಕ್ಕಟ್ಟು ಎದುರಾಗಿದೆ. ವಿದ್ಯುತ್ ಕಡಿತ, ಶಾಖದ ಅಲೆಗಳ ನಡುವೆ ದೆಹಲಿ ನಿವಾಸಿಗಳು ನೀರಿನ ಸಮಸ್ಯೆಯಿಂದಾಗಿ ಆತಂಕ ಹೊಂದಿದ್ದಾರೆ. ಇದಕ್ಕೆ ಹರಿಯಾಣದ ಬಿಜೆಪಿ ಸರ್ಕಾರವೇ ಕಾರಣ ಎಂದು ಆಮ್ ಆದ್ಮಿ ಪಕ್ಷ ಆರೋಪ ಮಾಡಿದೆ.

ಬಿಜೆಪಿ ಸರ್ಕಾರ ಬೇಕೆಂದೇ ದೆಹಲಿಗೆ ನೀರು ಪೂರೈಕೆ ನಿಲ್ಲಿಸಿದೆ; ಆಪ್ ಆರೋಪ
ದೆಹಲಿ ಸಚಿವೆ ಅತಿಶಿ
Follow us
ಸುಷ್ಮಾ ಚಕ್ರೆ
|

Updated on: May 22, 2024 | 3:19 PM

ನವದೆಹಲಿ: ದೆಹಲಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಉಂಟಾಗಿದೆ. ಉತ್ತರ ಭಾರತದಾದ್ಯಂತ ಶಾಖದ ಅಲೆಯು (Heatwave) ವ್ಯಾಪಿಸುತ್ತಿರುವ ಸಮಯದಲ್ಲಿ ದೆಹಲಿಯ (Delhi) ಹಲವಾರು ಪ್ರದೇಶಗಳಲ್ಲಿ ನೀರಿನ ಕೊರತೆ (Water Crisis) ಉಂಟಾಗಿದೆ. ದೆಹಲಿಯಲ್ಲಿ ಇದೀಗ ನೀರಿನ ಬಿಕ್ಕಟ್ಟು ಹೆಚ್ಚಾಗಿದೆ. ಈ ನಡುವೆ ದೆಹಲಿಯಲ್ಲಿ ನೀರಿನ ಸಮಸ್ಯೆಯ ಕುರಿತು ಆಮ್ ಆದ್ಮಿ ಪಕ್ಷ (AAP) ಮತ್ತು ಬಿಜೆಪಿ (BJP) ನಡುವೆ ಮಾತಿನ ಚಕಮಕಿ ನಡೆದಿದೆ. ಆಮ್ ಆದ್ಮಿ ಪಕ್ಷವನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದೆ. ಹರಿಯಾಣ ಸರ್ಕಾರದ ಮೂಲಕ ಬಿಜೆಪಿ ಉದ್ದೇಶಪೂರ್ವಕವಾಗಿಯೇ ರಾಷ್ಟ್ರ ರಾಜಧಾನಿ ದೆಹಲಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದಲೂ ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಷಡ್ಯಂತ್ರಗಳನ್ನು ರೂಪಿಸುತ್ತಿದೆ ಎಂದು ಅತಿಶಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ 5 ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಎಪಿ ಚುನಾವಣೆಯಲ್ಲಿ ಪ್ರಚಾರ ಮಾಡಲು ಸಾಧ್ಯವಾಗದಂತೆ ಬಂಧಿಸಲಾಯಿತು. ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಬಂದ ನಂತರ, ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರನ್ನು ಬಳಸಿಕೊಂಡು ಕೇಜ್ರಿವಾಲ್ ಮೇಲೆ ಆರೋಪ ಹೊರಿಸಲು ಪ್ರಯತ್ನಿಸಿದರು. ಆದರೆ ಆ ಯೋಜನೆಯು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಅತಿಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ವಿದೇಶಗಳಿಂದ 7 ಕೋಟಿ ದೇಣಿಗೆ; ಗೃಹ ಸಚಿವಾಲಯಕ್ಕೆ ಪತ್ರ ಬರೆದ ಇಡಿ

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಮತ್ತು ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಪೂರೈಕೆಯನ್ನು ನಿಲ್ಲಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಆರೋಪಿಸಿದ್ದಾರೆ. ಈ ಮೊದಲು ಸಮಸ್ಯೆ ಇರದ ಸ್ಥಳಗಳಿಂದಲೂ ನೀರಿನ ಕೊರತೆಯ ಬಗ್ಗೆ ದೂರುಗಳು ಬಂದಿವೆ. ಇದರಿಂದಾಗಿ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅತಿಶಿ ಹೇಳಿದ್ದಾರೆ.

ದೆಹಲಿಯ ಎಎಪಿ ಸರ್ಕಾರವು ಇಂದು ಹರಿಯಾಣ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದು ಅವರು ಹೇಳಿದ್ದಾರೆ. ಅವರು ಯಾವುದೇ ಕ್ರಮ ಕೈಗೊಳ್ಳದಿದ್ದರೆ ಆಮ್ ಆದ್ಮಿ ಪಕ್ಷ ನೇತೃತ್ವದ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೋಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ನಾಯಕರೊಂದಿಗೆ ನಾಳೆ ಬಿಜೆಪಿ ಕಚೇರಿಗೆ ಬರುತ್ತೇನೆ, ಬಂಧಿಸಿ ನೋಡೋಣ; ಕೇಜ್ರಿವಾಲ್

ಮೇ 21ರಂದು ಬಹುಶಃ ಇತಿಹಾಸದಲ್ಲಿ ಮೊದಲ ಬಾರಿಗೆ ಯಮುನಾ ನದಿಯ ನೀರಿನ ಮಟ್ಟ 670.9 ಅಡಿಗಳಿಗೆ ಇಳಿದಿದೆ” ಎಂದು ಅವರು ಹೇಳಿದ್ದಾರೆ. ಎಎಪಿ ಸರ್ಕಾರದ ಇಮೇಜ್ ಅನ್ನು ಕಳಂಕಗೊಳಿಸಲು ಮತ್ತು ದೆಹಲಿಯ ಜನರಿಗೆ ತೊಂದರೆ ನೀಡಲು ಬಿಜೆಪಿ ಈ ನೀರಿನ ಬಿಕ್ಕಟ್ಟನ್ನು ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದಲೂ ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಷಡ್ಯಂತ್ರಗಳನ್ನು ರೂಪಿಸುತ್ತಿದೆ. ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ನಿಧಿಯ ಹಳೆಯ ವಿಷಯವನ್ನು ಈಗ ಎಳೆದುತರಲಾಗಿದೆ. ಈಗ ಬಿಜೆಪಿಯ ಹರಿಯಾಣ ಸರ್ಕಾರದ ಮೂಲಕ ದೆಹಲಿಗೆ ಯಮುನಾ ನೀರು ಪೂರೈಕೆಯನ್ನು ನಿಲ್ಲಿಸಲಾಗಿದೆ ಎಂದು ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು