ವಯನಾಡ್: ಅಣ್ಣನ ಕ್ಷೇತ್ರವನ್ನು ಉಳಿಸಿಕೊಂಡ ಪ್ರಿಯಾಂಕಾ, ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು
Wayanad By Election Result 2024: ಅಣ್ಣನ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಯಶಸ್ವಿಯಾಗಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಸ್ಥಾನಕ್ಕೆ ನವೆಂಬರ್ 13 ರಂದು ಉಪಚುನಾವಣೆಗೆ ಮತದಾನ ನಡೆದಿತ್ತು ಇಂದು ಫಲಿತಾಂಶ ಹೊರಬಿದ್ದಿದೆ. ಕಮ್ಯುನಿಸ್ಟ್ ಪಕ್ಷವು ಎರಡನೇ ಸ್ಥಾನದಲ್ಲಿದೆ.
ಅಣ್ಣನ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಯಶಸ್ವಿಯಾಗಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಾಯಕ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಸ್ಥಾನಕ್ಕೆ ನವೆಂಬರ್ 13 ರಂದು ಉಪಚುನಾವಣೆಗೆ ಮತದಾನ ನಡೆದಿತ್ತು ಇಂದು ಫಲಿತಾಂಶ ಹೊರಬಿದ್ದಿದೆ. ಕಮ್ಯುನಿಸ್ಟ್ ಪಕ್ಷವು ಎರಡನೇ ಸ್ಥಾನದಲ್ಲಿದೆ. ಪ್ರಿಯಾಂಕಾ ಗಾಂಧಿ ಸುಮಾರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸಿಪಿಐನ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ ಗೆದ್ದಿದ್ದಾರೆ.
ವಯನಾಡಿನಲ್ಲಿ 16 ಅಭ್ಯರ್ಥಿಗಳು ಈ ಬಾರಿ ವಯನಾಡಿನಲ್ಲಿ 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಚುನಾವಣಾ ಕಣದಲ್ಲಿದ್ದರು. ಮಾರ್ಕ್ಸಿಸ್ಟ್ ಕಮ್ಯುನಿಸ್ಟ್ ಪಕ್ಷದ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸತ್ಯನ್ ಮೊಕೇರಿ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.
2024 ರ ಚುನಾವಣೆಯ ಫಲಿತಾಂಶಗಳೇನು? 2024 ರ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 73.57 ರಷ್ಟು ಮತದಾನವಾಗಿತ್ತು. ಆಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಟ್ಟು 6,47,445 ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಅನ್ನಿ ರಾಜಾ 2,83,023 ಮತಗಳಿಗೆ ಸೀಮಿತರಾಗಿದ್ದರು. ಅದೇ ರೀತಿ ಮೂರನೇ ಸ್ಥಾನದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಕೇವಲ 1,41,045 ಮತಗಳನ್ನು ಪಡೆದರು.
ಮತ್ತಷ್ಟು ಓದಿ: ಪ್ರಿಯಾಂಕಾ ಗಾಂಧಿ ರೋಡ್ ಶೋ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಸಿಆರ್ಪಿಎಫ್ ಸಿಬ್ಬಂದಿ ನಡುವೆ ಘರ್ಷಣೆ
2019ರಲ್ಲಿ ರಾಹುಲ್ ಗಾಂಧಿ ಗೆದ್ದಿದ್ದರಾ? ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವು ದಕ್ಷಿಣ ಭಾರತದಲ್ಲಿ ಉನ್ನತ ಸ್ಥಾನವನ್ನು ಪಡೆದಿದೆ. 2019ರಲ್ಲಿ ಅಮೇಥಿಯಲ್ಲಿ ಸೋತ ನಂತರ ರಾಹುಲ್ ಗಾಂಧಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಸಂಸತ್ತಿಗೆ ಬಂದಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಈ ಸ್ಥಾನಕ್ಕೆ ಸ್ಪರ್ಧಿಸಿ ಒಟ್ಟು 7,06,367 ಮತಗಳನ್ನು ಗಳಿಸಿದ್ದರು. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ರಾಹುಲ್ ಗಾಂಧಿ ಅವರು ಒಟ್ಟು 64.94 ಶೇಕಡಾ ಮತಗಳನ್ನು ಪಡೆದಿದ್ದಾರೆ.
ಆಗ ಎರಡನೇ ಸ್ಥಾನದಲ್ಲಿದ್ದ ಸಿಪಿಐ(ಮಾರ್ಕ್ಸ್ ವಾದಿ)ದ ಪಿ.ಪಿ.ಸುನೀರ್ ಕೇವಲ 2,74,597 ಮತಗಳನ್ನು ಪಡೆದಿದ್ದರು. ದಿವಂಗತ ಕಾಂಗ್ರೆಸ್ ನಾಯಕ ಎಂಐ ಶಾನವಾಸ್ 2009 ಮತ್ತು 2014ರಲ್ಲಿ ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಅವರ ದುರದೃಷ್ಟಕರ ನಿಧನದ ನಂತರ, ರಾಹುಲ್ ಗಾಂಧಿ 2019 ರ ಚುನಾವಣೆಯಲ್ಲಿ ಈ ಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:36 pm, Sat, 23 November 24