Wayanad bypoll: ರಾಹುಲ್ ಗಾಂಧಿ ಅನರ್ಹಗೊಂಡ ನಂತರ ತೆರವಾಗಿರುವ ವಯನಾಡ್​​ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಯಾವಾಗ?; ಚುನಾವಣಾ ಆಯೋಗ ಹೇಳಿದ್ದೇನು?

ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಘೋಷಿಸುವ ಸಂದರ್ಭದಲ್ಲಿ ಮಾತನಾಡಿದ ಕುಮಾರ್ ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ ಎಂದು ಹೇಳಿದರು. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ

Wayanad bypoll: ರಾಹುಲ್ ಗಾಂಧಿ ಅನರ್ಹಗೊಂಡ ನಂತರ ತೆರವಾಗಿರುವ ವಯನಾಡ್​​ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಯಾವಾಗ?; ಚುನಾವಣಾ ಆಯೋಗ ಹೇಳಿದ್ದೇನು?
ರಾಹುಲ್ ಗಾಂಧಿImage Credit source: Twitter
Follow us
ರಶ್ಮಿ ಕಲ್ಲಕಟ್ಟ
|

Updated on:Mar 29, 2023 | 2:20 PM

ರಾಹುಲ್ ಗಾಂಧಿ (Rahul Gandhi) ಲೋಕಸಭೆಯಿಂದ (Loksaha) ಅನರ್ಹಗೊಂಡು ಸಂಸದ ಸ್ಥಾನ ಕಳೆದುಕೊಂಡ ನಂತರ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ ಚುನಾವಣೆ ಘೋಷಿಸಲು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ಆತುರವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬುಧವಾರ ಹೇಳಿದ್ದಾರೆ. 2019 ರ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ರಾಹುಲ್ ಅವರನ್ನು ಲೋಕಸಭೆಯಿಂದ ಅನರ್ಹ ಮಾಡಲಾಗಿತ್ತು. ಆದಾಗ್ಯೂ ಈ ತೀರ್ಪು ವಿರುದ್ದ ಮೇಲ್ಮನವಿ ಸಲ್ಲಿಸಲು ರಾಹುಲ್​ಗೆ 30 ದಿನಗಳ ಸಮಯವಿದೆ.

ಮೋದಿ ಉಪನಾಮಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆಗೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಅನುಮತಿಸಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದಾಗ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ಲೋಕಸಭೆಯ ಸದಸ್ಯರಾಗಿದ್ದ ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಬಹುದು ಎಂಬ ವದಂತಿ ಹಬ್ಬಿತ್ತು. ಆದಾಗ್ಯೂ, ಮೇಲ್ಮನವಿ ಸಲ್ಲಿಸಿ ಶಿಕ್ಷೆಯನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ 30 ದಿನಗಳ ಗಡುವು ನೀಡಿರುವುದರಿಂದ ಚುನಾವಣಾ ಆಯೋಗವು ಕಾಯಲಿದೆ ಎಂದು ಕುಮಾರ್ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಘೋಷಿಸುವ ಸಂದರ್ಭದಲ್ಲಿ ಮಾತನಾಡಿದ ಕುಮಾರ್ ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ ಎಂದು ಹೇಳಿದರು. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ. ಏತನ್ಮಧ್ಯೆ, ರಾಹುಲ್ ಗಾಂಧಿ ಅವರಿಗೆ ನ್ಯಾಯಾಂಗ ಪರಿಹಾರವನ್ನು ಕೇಳಲು ವಿಚಾರಣಾ ನ್ಯಾಯಾಲಯವು ಮೂವತ್ತು ದಿನಗಳ ಕಾಲಾವಕಾಶವನ್ನು ನೀಡಿದೆ. ಆದ್ದರಿಂದ ನಾವು ಕಾಯುತ್ತೇವೆ. ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Wed, 29 March 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್