ರಾಹುಲ್ ಗಾಂಧಿ (Rahul Gandhi) ಲೋಕಸಭೆಯಿಂದ (Loksaha) ಅನರ್ಹಗೊಂಡು ಸಂಸದ ಸ್ಥಾನ ಕಳೆದುಕೊಂಡ ನಂತರ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ ಚುನಾವಣೆ ಘೋಷಿಸಲು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ಆತುರವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬುಧವಾರ ಹೇಳಿದ್ದಾರೆ. 2019 ರ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ರಾಹುಲ್ ಅವರನ್ನು ಲೋಕಸಭೆಯಿಂದ ಅನರ್ಹ ಮಾಡಲಾಗಿತ್ತು. ಆದಾಗ್ಯೂ ಈ ತೀರ್ಪು ವಿರುದ್ದ ಮೇಲ್ಮನವಿ ಸಲ್ಲಿಸಲು ರಾಹುಲ್ಗೆ 30 ದಿನಗಳ ಸಮಯವಿದೆ.
ಮೋದಿ ಉಪನಾಮಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆಗೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಅನುಮತಿಸಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿದೆ.
ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದಾಗ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ಲೋಕಸಭೆಯ ಸದಸ್ಯರಾಗಿದ್ದ ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಬಹುದು ಎಂಬ ವದಂತಿ ಹಬ್ಬಿತ್ತು. ಆದಾಗ್ಯೂ, ಮೇಲ್ಮನವಿ ಸಲ್ಲಿಸಿ ಶಿಕ್ಷೆಯನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ 30 ದಿನಗಳ ಗಡುವು ನೀಡಿರುವುದರಿಂದ ಚುನಾವಣಾ ಆಯೋಗವು ಕಾಯಲಿದೆ ಎಂದು ಕುಮಾರ್ ಹೇಳಿದ್ದಾರೆ.
We have six months’ time to hold a by-election after a seat falls vacant. The trial court has given 30 days time for judicial remedy. So, we will wait: CEC Rajiv Kumar on Rahul Gandhi’s Wayanad parliamentary seat pic.twitter.com/nZJluwU4IT
— ANI (@ANI) March 29, 2023
ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಘೋಷಿಸುವ ಸಂದರ್ಭದಲ್ಲಿ ಮಾತನಾಡಿದ ಕುಮಾರ್ ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ ಎಂದು ಹೇಳಿದರು. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ. ಏತನ್ಮಧ್ಯೆ, ರಾಹುಲ್ ಗಾಂಧಿ ಅವರಿಗೆ ನ್ಯಾಯಾಂಗ ಪರಿಹಾರವನ್ನು ಕೇಳಲು ವಿಚಾರಣಾ ನ್ಯಾಯಾಲಯವು ಮೂವತ್ತು ದಿನಗಳ ಕಾಲಾವಕಾಶವನ್ನು ನೀಡಿದೆ. ಆದ್ದರಿಂದ ನಾವು ಕಾಯುತ್ತೇವೆ. ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Wed, 29 March 23